ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಉದ್ಯಾನ ನಗರಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದ ನಿತ್ಯ ನೂರಾರು ಜನ ಸಾವನ್ನಪ್ಪುತ್ತಿದ್ದಾರೆ. ಇದೆಲ್ಲದರ ನಡುವೆ ಮತ್ತೊಂದು ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು, ಇಂದು ಸಹ 6,029 ಜನ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಜನರಲ್ಲಿ ಮತ್ತೆ ಆತಂಕ ಹೆಚ್ಚಿದೆ. ಕೊರೊನಾ ಕರ್ಫ್ಯೂ ಇದೀಗ ಮತ್ತೆ ಲಾಕ್‍ಡೌನ್ ಮಡಿರುವ ಮಧ್ಯೆ ನಗರದಲ್ಲಿ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಹಿಂದೆ 10,835 ಜನ …
Read More »18 ರಿಂದ 44 ವರ್ಷ ವಯಸ್ಸಿನವರಿಗೆ ನಾಳೆಯಿಂದ ಲಸಿಕೆ -ಡಾ.ಕೆ ಸುಧಾಕರ್
ಬೆಂಗಳೂರು: ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ. ಹಾಗಾಗಿ ಮೇ 10 ರಿಂದ ರಾಜ್ಯಾದ್ಯಂತ 18 ರಿಂದ 44 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸುಧಾಕರ್, ಕೇಂದ್ರ ಸರ್ಕಾರ ಈವರೆಗೂ 99,58,190 …
Read More »ಮೈಸೂರು: ಆಸ್ಪತ್ರೆ ಶೌಚಾಲಯದಲ್ಲೇ ಕೋವಿಡ್ ಸೋಂಕಿತ ನೇಣಿಗೆ ಶರಣು!
ಮೈಸೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತನೊಬ್ಬ ಆಕ್ಸಿಜನ್ ಒದಗಿಸುವ ಪೈಪ್‌ನಿಂದಲೇ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದಯಗಿರಿ ನಿವಾಸಿ ದೇವರಾಜ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಗರದ ಟ್ರಾಮಾ ಕೇರ್ ಸೆಂಟರ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ, ಇದ್ದಕ್ಕಿದ್ದಂತೆ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
Read More »ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಪ್ರಾಣಬಿಟ್ಟ ಪೇಂಟರ್!
ಮೈಸೂರು: ಏಣಿಯಿಂದ ಬಿದ್ದು ಗಾಯಗೊಂಡಿದ್ದ ಪೇಂಟರ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಕೆ.ಆರ್. ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ಶ್ರೀಕಾಂತ್ (34) ಮೃತ ದುರ್ದೈವಿ ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದ ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ …
Read More »ಚಾಮರಾಜನಗರ ; ಒಂದೇ ದಿನ ೧೪ ಸೋಂಕಿತರು ಸಾವು
ಚಾಮರಾಜನಗರ: ಕಳೆದ ಸೋಮವಾರ ಒಂದೇ ದಿನ ಆಕ್ಸಿಜನ್ ಕೊರತೆಯಿಂದ ೨೪ ಜನ ಸೋಂಕಿತರು ಮೃತಪಟ್ಟು ರಾಷ್ಟ್ರ ಮಟ್ಟದ ಸುದ್ದಿಗೆ ಗ್ರಾಸವಾಗಿದ್ದ ಚಾಮರಾಜನಗರ ಜಿಲ್ಲಸ್ಪತ್ರೆಯಿಂದ ಇಂದು ಮತ್ತೊಂದು ಕಳವಳದ ಸುದ್ದಿ ಹೊರ ಬಿದ್ದಿದೆ. ಈ ಆಸ್ಪತ್ರೆಯಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 9 ಗಂಟೆಯವರೆಗೆ ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ 4,186 ಮಂದಿ ಕೊರೊನಾ ಸೋಂಕಿತರು ಇದ್ದಾರೆ. ಇವರಲ್ಲಿ 50 …
Read More »ದಾವಣಗೆರೆ ಪೊಲೀಸರಿಂದ ರಂಜಾನ್ ಹಬ್ಬಕ್ಕೆ ಫುಡ್ ಕಿಟ್ ವಿತರಣೆ
ದಾವಣಗೆರೆ: ರಂಜಾನ್ ಹಬ್ಬಕ್ಕೆ ದಾವಣಗೆರೆ ಪೊಲೀಸರು 50ಕ್ಕೂ ಹೆಚ್ಚು ಕುಟುಂಬಗಳಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ. ಲಾಕ್‍ಡೌನ್ ನಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಜನರಿಗೆ ಒಂದೊತ್ತಿನ ಊಟಕ್ಕೂ ಸಹ ಕಷ್ಟವಾಗುತ್ತದೆ. ರಂಜಾನ್ ಹಬ್ಬ ಬಂದಿದ್ದು, ಕೂಲಿ ಮಾಡುವ ಜನರು ಸಾಕಷ್ಟು ತೊಂದರೆ ಪಡುವಂತಾಗಿದೆ. ಇವರ ಕಷ್ಟವನ್ನು ನೋಡಿದ ದಾವಣಗೆರೆಯ ಅಜಾದ್ ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಶೈಲಜಾ ತಮ್ಮ ಸ್ವಂತ ಖರ್ಚಿನಲ್ಲಿ 50ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರದ ಕಿಟ್ …
Read More »ಬಿಜೆಪಿಯೇ ಬೆಡ್ ಬ್ಲಾಕಿಂಗ್ ಹಗರಣದ ಕಿಂಗ್‌ಪಿನ್: ದಿನೇಶ್ ಗುಂಡೂರಾವ್
ಬೆಂಗಳೂರು, ಮೇ 08: ಬೆಡ್ ಬ್ಲಾಕಿಂಗ್ ಹಗರಣದ ಕಿಂಗ್‌ಪಿನ್ ಹಾಗೂ ಸೂತ್ರದಾರ ಎರಡೂ ಬಿಜೆಪಿಯೇ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಾವೇ ದಂಧೆಯಲ್ಲಿ ಭಾಗಿಯಾಗಿ ಜನರ ಮುಂದೆ ನಾಟಕ ಮಾಡುತ್ತಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಶಾಸಕ ಸಹಚರರು ಹಾಗೂ ಬಿಜೆಪಿಯ ಕಾರ್ಯಕರ್ತರು ಪುಡಿರೌಡಿಗಳಂತೆ ವರ್ತನೆ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಸಂಸದ ಹಾಗೂ ಶಾಸಕರು ವಾರ್ ರೂಂ ಮೇಲೆ ದಾಳಿ ಮಾಡಿ …
Read More »ಮುಧೋಳ, ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ, ಮೇ 17 ರಿಂದ ಕಾರ್ಯಾರಂಭ
ಕಲಬುರಗಿ: ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ ಸಿಕ್ಕಿದ್ದು, ಶೀಘ್ರವೇ ಉತ್ಪಾದನೆ ಆರಂಭಿಸಲಿವೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ ದೊರೆತಿದೆ. ದೇಶದಲ್ಲಿ ಈ ಹಿಂದೆ ರೆಮ್ ಡೆಸಿವರ್ ಉತ್ಪಾದನೆಗೆ ಕೇವಲ ಎರಡು ಕಡೆ ಅನುಮತಿ ನೀಡಲಾಗಿತ್ತು. ಇತ್ತೀಚಿಗೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ …
Read More »ಆಮ್ಲಜನಕ ಟ್ಯಾಂಕರ್ ಗಳಿಗೆ2 ತಿಂಗಳು ಟೋಲ್ ಶುಲ್ಕ ವಿನಾಯಿತಿ
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಗಾಗಿ ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಆಮ್ಲಜನಕ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ ಮಾಹಿತಿ ನೀಡಿದ್ದು, ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಣೆ ಮಾಡುವ ಟ್ಯಾಂಕರ್ ಗಳಿಗೆ ಹೆದ್ದಾರಿಗಳಲ್ಲಿ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದೆ. ದೇಶಾದ್ಯಂತ ಕೊರೊನಾ ಸೋಂಕಿತರಿಗಾಗಿ ವೈದ್ಯಕೀಯ ಆಮ್ಲಜನಕಕ್ಕೆ ಭಾರಿ ಬೇಡಿಕೆ ಇರುವ ಕಾರಣ ತುರ್ತು ಸೇವೆ ಎಂದು ಪರಿಗಣಿಸಲಾಗಿದ್ದು, ಎರಡು …
Read More »ಬೇಡಿಕೆಗನುಗುಣವಾಗಿ ಬಾರದ ಕೊವ್ಯಾಕ್ಸಿನ್: ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆ
ಬೆಂಗಳೂರು: ರಾಜ್ಯಕ್ಕೆ ಬೇಡಿಕೆಗೆ ಅನುಗುಣವಾಗಿ ಕೊವ್ಯಾಕ್ಸಿನ್ ಲಸಿಕೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯಕ್ಕೆ ಬೇಡಿಕೆ ಅನುಸಾರ ಲಸಿಕೆ ಬಾರದ ಹಿನ್ನೆಲೆಯಲ್ಲಿ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಬಳಸಲು ಸರ್ಕಾರ ನಿರ್ಧರಿಸಿದೆ. ಮೊದಲ ಡೋಸ್ ಕೊವ್ಯಾಕ್ಸಿನ್ ಪಡೆದವರಿಗೆ ಮಾತ್ರ ಇದೆ ಲಸಿಕೆಯನ್ನು ಎರಡನೇ ಡೋಸ್ ಪಡೆಯುವವರಿಗೆ ಕೊಡಲಾಗುತ್ತದೆ. 45 ವರ್ಷ ಮೇಲ್ಪಟ್ಟ ಮೊದಲ ಡೋಸ್ ಪಡೆಯುವವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುವುದು ಎಂದು …
Read More »
Laxmi News 24×7