Breaking News

ರಾಜಕೀಯ

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ

ಹೊಸಪೇಟೆ (ವಿಜಯನಗರ): ಕೋವಿಡ್‌ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ನಗರದ ರೋಟರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಕ್ಷನ್‌ 144 ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನ ಒಂದೆಡೆ ಗುಂಪು ಗೂಡುವಂತಿಲ್ಲ. ಆದರೆ, ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿದರು. ಎಲ್ಲರೂ ಮಾಸ್ಕ್‌ ಧರಿಸಿದ್ದರು. ಆದರೆ, ಅಂತರವಿರಲಿಲ್ಲ. ಪಟ್ಟಣ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ರೋಟರಿ ವೃತ್ತದಲ್ಲಿ ಏಕಾಏಕಿ ಪ್ರತಿಭಟನೆ ನಡೆಸಿದ್ದರು. ‘ಪೊಲೀಸ್‌ ಇಲಾಖೆಯಿಂದ ಅನುಮತಿ …

Read More »

ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ

ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …

Read More »

ವಿಜಯಪುರ : ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ವಿಜಯಪುರ: ರಾಜ್ಯಾದ್ಯಂತ ಹಲವೆಡೆ ಬುಧವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಜೊತೆಗೆ ನಾಲ್ಕು ಆಡುಗಳು ಸಿಡಿಲಿನಿಂದ ಸಾವನಪ್ಪಿವೆ. ಅಶೋಕರಾಮ ಕಾರಜೋಳ(48), ಬಾಷಾಸಾಬ್‌ ಕರಜಗಿ(40) ಮತ್ತು ಜಾವಿದ್‌ ಹಾಜಿಸಾಬ್‌ ಜಾಲಗೇರಿ(33) ಸಾವಿಗೀಡಾಗಿದ್ದಾರೆ. ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಟಕ್ಕೆ ದರ್ಗಾ …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ದೇಶದಲ್ಲಿ 3.82 ಲಕ್ಷ ಹೊಸ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ . ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 3.82 ಲಕ್ಷ ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3780 ಮಂದಿ ಮೃತಪಟ್ಟಿದ್ದಾರೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದಲ್ಲಿ ಒಟ್ಟು ಸಾವನ್ನಪ್ಪಿದ ಕೋವಿಡ್ 19 …

Read More »

ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.

ಲಕ್ನೋ, ಮೇ 05: ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 …

Read More »

ನಟಿ ಕಂಗನಾಗೆ ಮತ್ತೊಂದು ಶಾಕ್: ಟ್ವಿಟರ್​ ಬಳಿಕ ಫ್ಯಾಶನ್​ ಡಿಸೈನರ್​ಗಳಿಂದಲೂ ಬಹಿಷ್ಕಾರ..!

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಗ್ಗೆ ಸಾಲು ಸಾಲು ಟ್ವೀಟ್​ಗಳನ್ನ ಮಾಡಿದ ಕಂಗನಾ ರಣಾವತ್​​ ಖಾತೆಗೆ ಟ್ವಿಟರ್​ ಇಂಡಿಯಾ ಕೊಕ್​ ನೀಡಿದೆ.‌ ಟ್ವಿಟರ್​ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ಕಂಗನಾ ರಣಾವತ್​​ರ ಟ್ವಿಟರ್​ ಖಾತೆಯನ್ನ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಕಂಗನಾ ರಣಾವತ್​ರನ್ನ ಟ್ವಿಟರ್​ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಫ್ಯಾಷನ್​ ಡಿಸೈನರ್​ಗಳೂ ಸಹ ಕಂಗನಾರನ್ನ ಬಹಿಷ್ಕರಿಸಿದ್ದಾರೆ. ಡಿಸೈನರ್​ ರಿಮಜಿನ್​ ದಾದು ಈ ಸಂಬಂಧ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ವೊಂದನ್ನ ಶೇರ್​ ಮಾಡಿದ್ದಾರೆ. ಒಳ್ಳೆಯ …

Read More »

ಹಾಲು ಖರೀದಿಸುವ ಸಮಯದಲ್ಲಿ ಮದ್ಯ ಕೊಳ್ಳಲು ಯಾರು ಬರಲ್ಲ.

ಕೊಪ್ಪಳ: ಹಾಲು ಖರೀದಿಸುವ ಸಮಯದಲ್ಲಿ ಮದ್ಯ ಕೊಳ್ಳಲು ಯಾರು ಬರಲ್ಲ. ರಾಜ್ಯ ಸರ್ಕಾರ ಬಾರ್ ಗಳಿಗೆ ನೀಡಿರುವ ಸಮಯ ವ್ಯಾಪಾರಕ್ಕೆ ಸೂಕ್ತವಲ್ಲ ಎಂದು ಮದ್ಯದಂಗಡಿಗಳ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿರುವ ಸಮಯದಲ್ಲಿ ನಮಗೆ ವ್ಯಾಪಾರ ಸಹ ಆಗುತ್ತಿಲ್ಲ. ಸರ್ಕಾರಕ್ಕೆ ಆದಾಯವು ಬರಲ್ಲ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಬಾರ್ ಗಳನ್ನು ಬಂದ್ ಮಾಡಿದ್ರೆ ಉತ್ತಮ ಎಂದು ಕೊಪ್ಪಳ ಬಾರ್ ಮಾಲೀಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತುಮಾತನಾಡಿರುವ ಮದ್ಯ ಮಾರಾಟಗಾರರು, …

Read More »

ಆಕ್ಸಿಜನ್ ಕೊರತೆಗೆ ಕಾರಣ ಯಾರು : ಪ್ರಧಾನಿಗಳೇ ನಮ್ಮ ಕರ್ನಾಟಕ ಅಂದ್ರೆ ಯಾಕಿಷ್ಟು ನಿರ್ಲಕ್ಷ್ಯ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಂಗು ಲಗಾಮು ಇಲ್ಲದೇ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಹರಸಾಹಸಪಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದ್ದು ಕಾಣುತ್ತಿದ್ದು, ಆಮ್ಲಜಕನವಿಲ್ಲದೇ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ. ಆಕ್ಸಿಜನ್ ಇದೆ ಎನ್ನುವ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ನಾನಾ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ನರೇಂದ್ರ ಮೋದಿ ನೇತೃತ್ವದ …

Read More »

ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ : ಸಿದ್ದರಾಮಯ್ಯ ಗರಂ

ಬೆಂಗಳೂರು : ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ಬಿಜೆಪಿ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು …

Read More »