Breaking News

ರಾಜಕೀಯ

ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ …

Read More »

ತೊದಲು ನುಡಿಯಲ್ಲೇ ಲೋಕಜ್ಞಾನ ತೆರೆದಿಡುವ ಮಗು; ಎರಡೂವರೆ ವರ್ಷದ ಬಾಲಕಿ ಜ್ಞಾಪಕ ಶಕ್ತಿಗೆ ಬೆರಗಾದ ಬಾಗಲಕೋಟೆ ಮಂದಿ

ಬಾಗಲಕೋಟೆ: ಮಕ್ಕಳಿರಲವ್ವ ಮನೆ ತುಂಬ, ಕೂಸು ಕಂದಯ್ಯ ಒಳ ಹೊರಗಾ ಆಡಿದರ ಬೀಸಣಿಕೆ ಗಾಳಿ ಸುಳಿದಾವ ಎಂಬ ಮಾತು ಇದೆ. ಮಕ್ಕಳಿದ್ದ ಮನೆಯಲ್ಲಿ ಪ್ರತಿದಿನವೂ ಸಂಭ್ರಮ, ಅವುಗಳ ತೊದಲು ನುಡಿ ತುಂಟಾಟ ನೋಡುವುದೇ ಅಂದ ಎಂಬುವುದು ಇದರ ಅರ್ಥ. ಇದಕ್ಕೆ ಪುಷ್ಠಿ ನೀಡುವಂತೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಓರ್ವ ಅಸಾಮಾನ್ಯ ಬಾಲಕಿ ಇದ್ದು, ಆಕೆಯ ಹೆಸರು ಸಮನ್ವಿತಾ ಕರಕಟ್ಟಿ. ವಯಸ್ಸು ಕೇವಲ ಎರಡುವರೆ ವರ್ಷ,ಆದರೆ ಈಕೆಯ ಸಾಧನೆ ಮಾತ್ರ …

Read More »

ಮಗನ ಸಾವಿನ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೇಸು ಹಾಕುದಾಗಿ ಬೆದರಿಸಿದ ಖಾಸಗಿ ಆಸ್ಪತ್ರೆ

ಬೆಂಗಳೂರು: ಜ್ವರ ಎಂದು ನಗರದ ಖಾಸಗಿ ಆಸ್ಪತ್ರೆಗೆ ಸೇರಿದ ಒಬ್ಬ ಯುವಕ ಇಂದು ಮೃತಪಟ್ಟಿದ್ದಾನೆ. ಆತನ ಮರಣದ ಕುರಿತು ಆಸ್ಪತ್ರೆಯೊಂದಿಗೆ ವಿಚಾರಿಸಿದ ಯುವಕನ ಪೋಷಕರಿಗೆ ಆಸ್ಪತ್ರೆ ಸಿಬ್ಬಂದಿ ನಿಮ್ಮ ಮಗನ ಸಾವಿನ ಬಗ್ಗೆ ಕೇಳಿದರೆ ನಿಮ್ಮ ಮೇಲೆ ಕೇಸು ಹಾಕುದಾಗಿ ಬೆದರಿಕೆ ಹಾಕಿದ್ದಾರೆ. ಕೇಂದ್ರದ ಮಾಜಿ ಅಧಿಕಾರಿಯಾಗಿದ್ದ ದಿವಾಕರ್ ಕೋರೆ ಅವರ ಮಗ ಅಲೋಕ್ ಜ್ವರ ಎಂದು ಅತ್ತಿಬೆಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ. ನಂತರ ಆತನಿಗೆ ಕೊರೊನಾ ಪಾಸಿಟಿವ್ ಆಗಿತ್ತು. …

Read More »

ನಿಯಮ ಉಲ್ಲಂಘಿಸಿದರೆ ಲಾಠಿ ಚಾರ್ಜ್

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ. ರಾತ್ರಿ 9ಗಂಟೆಯಿಂದ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಇರಲಿದೆ. ಇದೀಗ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ನೀಡಿದ್ದ ಸಮಯ ಮುಗಿದಿದ್ದು, ದಿನಸಿ, ತರಕಾರಿ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ. ಮನೆಯಿಂದ ಯಾರೊಬ್ಬರು ಹೊರಬರದಂತೆ ಎಚ್ಚರಿಕೆ ನಿದಲಾಗಿದೆ. ಅನಗತ್ಯವಾಗಿ ಜನರು ಓಡಾಟ ನಡೆಸಿದರೆ ಲಾಠಿ …

Read More »

ಮೋದಿಗೆ ಕೈ ಮುಗಿದು ಮನವಿ ಮಾಡಿದ ಸಿಎಂ! ಏಕೆ ಈ ರೀತಿ ಮಾಡಿದರು?

ನವದೆಹಲಿ : ಮಹಾಮಾರಿಯ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗುತ್ತಿದೆ. ಹೀಗಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಕೇಜ್ರಿವಾಲ್ ಅವರು ಕೊರೊನಾ ಹೆಚ್ಚಾಗಿರುವ ಹತ್ತು ರಾಜ್ಯಗಳ ಸಭೆಯಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಪ್ರಧಾನಿಯಲ್ಲಿ ಮನವಿ ಮಾಡಿದ್ದಾರೆ. ದೆಹಲಿ ಪರಿಸ್ಥಿತಿ ನೋಡಿ, ನನಗೆ ನಿದ್ದೆ ಬರುತ್ತಿಲ್ಲ. ಒಂದೊಂದು ಸಾವು ನನ್ನನ್ನು ಕಾಡುತ್ತಿದೆ ಎಂದು ಗದ್ಗದಿತರಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಆಕ್ಸಿಜನ್ ತಯಾರಿಸುವ ಘಟಕ …

Read More »

ಚಿಕಿತ್ಸೆಗೆ 4,816 ಹಾಸಿಗೆಗಳ ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಕಠಿಣ ನಿಯಮಗಳನ್ನು ಒಳಗೊಂಡ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 3,035 ಸಾಮಾನ್ಯ ಬೆಡ್‌ಗಳು, 1,263 ಆಕ್ಸಿಜೆನ್ ಬೆಡ್‌ಗಳು, 243 ಹೈಪ್ರೆಷರ್ ಬೆಡ್‌ಗಳು, 135 ಐಸಿಯು ಬೆಡ್‌ಗಳು, 140 …

Read More »

ಮೇ ಮಧ್ಯದಲ್ಲಿ ದೇಶದಲ್ಲಿ ದಿನದಲ್ಲಿ 5 ಸಾವಿರ ಜನ ಕೊರೋನಾಗೆ ಬಲಿಯಾಗಲಿದ್ದಾರೆ : ಶಾಕಿಂಗ್ ವರದಿ ನೀಡಿದ ಅಧ್ಯಯನ

ನವದೆಹಲಿ : ಕೊರೊನಾ ವೈರಸ್ ಪ್ರೇರಿತ ಸಾವುಗಳ ಭಾರತದ ದೈನಂದಿನ ಸಂಖ್ಯೆ ಮೇ ಮಧ್ಯಭಾಗದಲ್ಲಿ 5,600 ಕ್ಕೆ ಏರಬಹುದು ಎಂದು ಅಮೆರಿಕದ ಅಧ್ಯಯನವು ಎಚ್ಚರಿಸಿದೆ. ಇದರರ್ಥ ಏಪ್ರಿಲ್ ಮತ್ತು ಆಗಸ್ಟ್ ನಡುವೆ ದೇಶದಲ್ಲಿ ಸುಮಾರು ಮೂರು ಲಕ್ಷ ಜನರು ಕೋವಿಡ್-19 ಗೆ ಪ್ರಾಣ ಕಳೆದುಕೊಳ್ಳಬಹುದು. COVID-19 projections’ ಎಂಬ ಶೀರ್ಷಿಕೆಯ ಈ ಅಧ್ಯಯನವನ್ನು ವಾಷಿಂಗ್ಟನ್ ವಿಶ್ವವಿದ್ಯಾಲಯದ ಆರೋಗ್ಯ ಮೆಟ್ರಿಕ್ಸ್ ಮತ್ತು ಮೌಲ್ಯಮಾಪನ ಸಂಸ್ಥೆ (ಐಎಚ್ ಎಂಇ) ನಡೆಸಿತು. ಈ ವರ್ಷದ …

Read More »

ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಮಹಾಮಾರಿ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ …

Read More »

ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

ಬೆಳಗಾವಿ: ಕೊರೊನಾ ಎರಡನೇ ಅಲೆ ರಾಜ್ಯದಾದ್ಯಂತ ತೀವ್ರವಾಗಿದ್ದು, ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ನಡುವೆ ಜನರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಬೆಳಗಾವಿ ಮಹಾನಗರ ಪಾಲಿಗೆ ಅಧಿಕಾರಿಗಳು ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಮಹಾನಗರ ಪಾಲಿಕೆ ಮಾರ್ಷಲ್​​ಗಳು ನಗರದ ಬೀದಿಗಳಲ್ಲಿ ಒಂಟಿ ಏರಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದು, ಕೊರೊನಾ …

Read More »

ಮಾಜಿ ಸಚಿವ ಆರ್​.ವಿ. ದೇಶಪಾಂಡೆಗೆ ಕೊರೊನಾ ಸೋಂಕು ದೃಢ

ಕಾರವಾರ: ಮಾಜಿ ಸಚಿವ ಆರ್​.ವಿ. ದೇಶಪಾಂಡೆಗೆ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ದೇಶಪಾಂಡೆ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮಗೆ ಕೊರೊನಾ ಸೋಂಕು ಬಂದಿರುವ ಬಗ್ಗೆ ಪ್ರಕಟಿಸಿರುವ ದೇಶಪಾಂಡೆ ಅವರು ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೂ ಕೊರೊನಾ ತಗುಲಿದ್ದು ಇಂದು …

Read More »