ಬೆಂಗಳೂರು, ಏಪ್ರಿಲ್ 22: ಕೊರೋನಾ ನಿಯಂತ್ರಣ ಬಗ್ಗೆ ಸರ್ಕಾರ ಸೀರಿಯಸ್ ಆಗಿ ಆಲೋಚನೆ ಮಾಡಿಲ್ಲ ಎಂಬುದು ಎದ್ದು ಕಾಣುತ್ತದೆ. ಸಿನಿಮಾ , ಥಿಯೇಟರ್ ಬಂದ್ ಮಾಡುವ ಬಗ್ಗೆ ತಜ್ಞರು ವರದಿ ನೀಡಿದರೂ ಅದನ್ನು ಅನುಷ್ಠಾನ ಮಾಡಲಿಲ್ಲ ಸರ್ಕಾರ. ಯಾವುದೋ ಧಮ್ಕಿಗಳಿಗೆ ಮಣಿದು ಇದೀಗ ಅದಕ್ಕೆ ತಕ್ಕ ಬೆಲೆ ತೆತ್ತುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಸುಮ್ಮನಹಳ್ಳಿ …
Read More »ರಾಯಚೂರು: ಅಗತ್ಯವಸ್ತುಗಳ ಮಳಿಗೆಗಳು ಮಾತ್ರ ಓಪನ್
ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಕೆಲವು ಮಳಿಗೆಗಳ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ರಾಯಚೂರು ನಗರದಲ್ಲಿಯೇ ಕೊರೊನಾ ಸೋಂಕು ವೇಗವಾಗಿ ಹರಡಿಕೊಳ್ಳುತ್ತಿರುವುದರಿಂದ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ. ಜಿಲ್ಲೆಯ ಇತರೆ ತಾಲ್ಲೂಕು ಕೇಂದ್ರಗಳಾದ ಸಿಂಧನೂರು, ಲಿಂಗಸುಗೂರು, ಮಾನ್ವಿ, ದೇವದುರ್ಗ, ಸಿರವಾರ ಹಾಗೂ ಮಸ್ಕಿಯಲ್ಲಿ ಎಂದಿನಂತೆ ವ್ಯಾಪಾರ …
Read More »ಆಮ್ಲಜನಕವನ್ನು ಎಲ್ಲಿಂದಲಾದರೂ ತಂದು ಸರಬರಾಜು ಮಾಡಿ ; ಸರ್ಕಾರಕ್ಕೆ ಕೋರ್ಟ್ ತಾಕೀತು
ನವದೆಹಲಿ, : ಆಮ್ಲಜನಕವನ್ನು ಭಿಕ್ಷೆ ಬೇಡುತ್ತೀರೋ, ಸಾಲಕ್ಕೆ ತರುತ್ತೀರೋ, ಕದ್ದು ತರುತ್ತೀರೋ ತನ್ನಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ. ದೇಶದ ಜನರು ಆಕ್ಸಿಜನ್ ಸಿಗದೆ ಸಾಯುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿಜಕ್ಕೂ ಖೇದದ ಸಂಗತಿ. ಜನರ ಜೀವಕ್ಕೆ ಬೆಲೆ ಇಲ್ಲವೆ? ನೀವು ದೊಡ್ಡ ದುರಂತದತ್ತ ಸಾಗುತ್ತಿದ್ದೀರಿ ಎಂದು ನ್ಯಾಯಾಧೀಶರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ …
Read More »ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ
ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾದ ಜನವರಿ ತಿಂಗಳಿನಿಂದ ಇಂದಿನವರೆಗೂ ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ವರದಿಯಿಂದ ತಿಳಿದು ಬಂದಿದೆ. ತಮಿಳುನಾಡಿನಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿನ ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಲ್ಲಿ ಶೇ.12, ಹರಿಯಾಣ ಶೇ.9.74, ಪಂಜಾಬ್ ಶೇ.8.12 ಮಣಿಪುರ ಶೇ.7.8 ಮತ್ತು ತೆಲಂಗಾಣ ಶೇ.7.55ರಷ್ಟು ಲಸಿಕೆಯನ್ನು ವ್ಯರ್ಥವಾಗಿ ಖರ್ಚು ಮಾಡಲಾಗಿದೆ ಎಂದು …
Read More »ಸಿಪಿಐಎಂ ಮುಖಂಡ ಸೀತಾರಂ ಯೆಚೂರಿ ಪುತ್ರ ಕೊರೊನಾಕ್ಕೆ ಬಲಿ
ಗುರುಗ್ರಾಮ, : ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಪುತ್ರ ಆಶೀಶ್ ಯೆಚೂರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೊವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಆಶೀಶ್ ಅವರಿಗೆ 34 ವರ್ಷವಾಗಿತ್ತು.ಕಳೆದ ಎರಡು ವಾರಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಆಶೀಶ್ ಕೆಲದಿನಗಳಲ್ಲಿ ಚೇತರಿಕೆ ಹೊಂದುವ ನಿರೀಕ್ಷೆಯಿತ್ತು. ಆದರೆ, ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ 5.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಪ್ತವಲಯ ತಿಳಿಸಿದೆ. ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಬಿಜೆಪಿ ಪಂಚ ಪ್ರಶ್ನೆಗೆ ‘ದಶ ಪ್ರಶ್ನೆ’ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ!
ಬೆಂಗಳೂರು: ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಪಕ್ಷ ಕೇಳಿರುವ ಐದು ಪ್ರಶ್ನೆಗಳಿಗೆ 10 ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ನಡೆಸುವವರ ಕೆಲಸ ಪ್ರಶ್ನೆ ಕೇಳುವುದಲ್ಲ, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು. ತಮ್ಮದು ವಿರೋಧ ಪಕ್ಷ ಅಲ್ಲ, ಆಡಳಿತಾರೂಢ ಪಕ್ಷ ಎನ್ನುವುದನ್ನು ರಾಜ್ಯ ಬಿಜೆಪಿ ಏನಾದರೂ ಮರೆತುಬಿಟ್ಟಿದೆಯಾ ಹೇಗೆ? ಪ್ರಶ್ನೆ ಕೇಳುವ ಅಷ್ಟೊಂದು ಹುಚ್ಚಿದ್ದರೆ ಮರ್ಯಾದೆಯಿಂದ ರಾಜೀನಾಮೆ …
Read More »KKR ವಿರುದ್ಧ ಧೋನಿ ಪಡೆಗೆ 18 ರನ್ನುಗಳ ಗೆಲುವು; ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ CSK
ಮುಂಬಯಿ : ತೀವ್ರ ಕುಸಿತದ ಬಳಿಕವೂ ಚೆನ್ನೈ ತಂಡದ ಬೃಹತ್ ಮೊತ್ತಕ್ಕೆ ದಿಟ್ಟ ರೀತಿಯಲ್ಲಿ ಜವಾಬು ನೀಡಿದ ಕೆಕೆಆರ್ ಬುಧವಾರದ ಐಪಿಎಲ್ ಮುಖಾಮುಖೀಯಲ್ಲಿ 18 ರನ್ನುಗಳ ವೀರೋಚಿತ ಸೋಲನುಭವಿಸಿದೆ. ಆರಂಭಿಕರಾದ ಫಾ ಡು ಪ್ಲೆಸಿಸ್ ಮತ್ತು ಋತುರಾಜ್ ಗಾಯಕ್ವಾಡ್ ಅವರ ಶತಕದ ಜತೆಯಾಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 3 ವಿಕೆಟಿಗೆ 220 ರನ್ ರಾಶಿ ಹಾಕಿತು. ಕೆಕೆಆರ್ ಅಗ್ರ ಕ್ರಮಾಂಕದ ಘೋರ ವೈಫಲ್ಯದಿಂದ ಪವರ್ ಪ್ಲೇ ಒಳಗಾಗಿ 31 …
Read More »ಸುರಪುರದ ಸಬ್ ಜೈಲಿನ 24 ಕೈದಿಗಳಿಗೆ ಕೊರೊನಾ ಸೋಂಕು!
ಯಾದಗಿರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಯಾದಗಿರಿ ಜಿಲ್ಲೆಯ ಸುರಪುರ ನಗರದ ಸಬ್ ಜೈಲಿನಲ್ಲಿ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಯಾದಗಿರಿ ಜಿಲ್ಲಿಯ ಸುರಪುರದ ಸಬ್ ಜೈಲ್ ನಲ್ಲಿ 24 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮತ್ತಷ್ಟು ಕೈದಿಗಳು ಹಾಗೂ ಸಿಬ್ಬಂದಿಗಳ ಕೋವಿಡ್ ಟೆಸ್ಟ್ ಮಾಡಲಾಗಿದೆ. ಜೈಲಿನ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೈಲಿಗೆ ಹೊರಗಿನವರ …
Read More »ಶಾಕಿಂಗ್ : ಬೆಳಗಾವಿ ಲೋಕಸಭಾ ಉಪಚುನಾವಣಾ ಭದ್ರತೆಗೆ ತೆರಳಿದ್ದ 10 ಮಂದಿ ಪೊಲೀಸರಿಗೆ ಕೊರೊನಾ ಸೋಂಕು
ಬಾಗಲಕೋಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆಯ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಬೆಳಗಾವಿ ಲೋಕಸಭೆ ಉಪಚುನಾವಣಾ ಭದ್ರತೆಗೆ ತೆರಳಿದ್ದ ಬಾಗಲಕೋಟೆ ಜಿಲ್ಲೆಯ 200 ಪೊಲೀಸರ ಪೈಕಿ ಇದೀಗ 10 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆಎನ್ನಲಾಗಿದೆ. ಸದ್ಯ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರ ಸಂಪರ್ಕದಲ್ಲಿದ್ದ ಇತರರ ಕೋವಿಡ್ ಟೆಸ್ಟ್ ಮಾಡಲಾಗಿದೆ. 10 …
Read More »ರೈತರಿಗೆ ಸಿಹಿ ಸುದ್ದಿ; ಬೀದರ್ ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರ ನೇಮಕ
ಬೀದರ್, ಏಪ್ರಿಲ್ 21; ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ) ಸಮೀಪ ಇರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರಾಗಿ ಸುಭಾಷ್ ಕಲ್ಲೂರ್ ಅವಿರೋಧ ಆಯ್ಕೆಯಾಗಿದ್ದಾರೆ. ಬುಧವಾರ ಕಾರ್ಖಾನೆ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಿತು. ಸುಭಾಷ್ ಕಲ್ಲೂರ್ ಅಧ್ಯಕ್ಷರಾಗಿ, ಶೈಲೇಂದ್ರ ಬೆಲ್ದಾಳೆ ಉಪಾಧ್ಯಕ್ಷರಾಗಿ ಆಯ್ಕೆಯಾದರು. 300 ಕೋಟಿ ರೂ.ಗೂ ಅಧಿಕ ನಷ್ಟದಲ್ಲಿರುವ ಕಾರ್ಖಾನೆ ಆಡಳಿತ ಮಂಡಳಿಗೆ ಇತ್ತೀಚೆಗೆ …
Read More »
Laxmi News 24×7