Breaking News

ರಾಜಕೀಯ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಶಾಸಕರಿಗಾಗಿ ಭೋಜನಕೂಟ

ಬೆಂಗಳೂರು : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಏರ್ಪಡಿಸಲಾಗಿದೆ. ಬೆಂಗಳೂರಿನ ಶಿವಾನಂದ ವೃತ್ತ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಏರ್ಪಡಿಸಲಾಗಿರುವ ಔತಣಕೂಟದಲ್ಲಿ ಕೈ ಶಾಸಕರು, ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು. ಕಾಂಗ್ರೆಸ್ ಮುಖಂಡರ ಜೊತೆ ನಡೆದ ಭೋಜನಕೂಟದ ಸಮಯದಲ್ಲಿ ಕಲಾಪದ ಬಗ್ಗೆ ಚರ್ಚೆ ನಡೆಯಿತು. ಅಹೋರಾತ್ರಿ ಧರಣಿ ಬಗ್ಗೆ ಗಂಭೀರ ಚರ್ಚೆ : ಇಂದು ಅಹೋರಾತ್ರಿ ಧರಣಿ ಮಾಡಬೇಕೋ, …

Read More »

ಮಸ್ಕಿ ಉಪ ಚುನಾವಣೆ; ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 24: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಪ್ರತಾಪ್ ಗೌಡ ಪಾಟೀಲ್ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಬುಧವಾರ ಪ್ರತಾಪ್ ಗೌಡ ಪಾಟೀಲ್ ಅಂಕಲಿಮಠಕ್ಕೆ ಭೇಟಿ ನೀಡಿದರು. ಗಚ್ಚಿನಮಠಕ್ಕೆ ಭೇಟಿ ಕೊಟ್ಟರು. ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರ ಜೊತೆ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬಂದರು.   ಚುನಾವಣಾಧಿಕಾರಿ ಹಾಗೂ …

Read More »

ಸುಧಾಕರ್‌ ರಾಜೀನಾಮೆಗೆ ವಿರೋಧ ಪಕ್ಷಗಳ ಆಗ್ರಹ: ಕಲಾಪ ಅನಿರ್ಧಿಷ್ಟ ಕಾಲ ಮುಂದೂಡಿಕೆ

ಬೆಂಗಳೂರು: ರಾಜ್ಯದ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದರು. ಭೋಜನ ವಿರಾಮದ ಬಳಿಕ ಕಲಾಪ ಸೇರಿದಾಗ ಸುಧಾಕರ್‌ ಹೇಳಿಕೆಯನ್ನು ವಿಪಕ್ಷ ಸದಸ್ಯರು ಕಟುವಾಗಿ ಟೀಕಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ ಮಾತನಾಡಿ, ‘ಸುಧಾಕರ್‌ …

Read More »

ಐದು ನೋಟಿಸ್ ಗಳಿಗೂ ಯುವತಿಯಿಂದ ನೋ ರೆಸ್ಪಾನ್ಸ್ :ವಿಧಾನಸೌಧಕ್ಕೆ ದೌಡಾಯಿಸಿದ ಎಸ್ ಐಟಿ ಅಧಿಕಾರಿಗಳು

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಎಸ್‌ಐಟಿ ತನಿಖೆ ಗಂಟೆಗೊಂದು ಟ್ವಿಸ್ಟ್ ಗಳನ್ನು ಪಡೆಯುತ್ತಿದ್ದು, ಸಾಲು ಸಾಲು ಸುದ್ದಿಗಳು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪ್ರಕರಣದ ಕುರಿತು ತನಿಖೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಇಮೇಲ್​ನಲ್ಲಿ ಕಳುಹಿಸಿದ್ದ ನೋಟಿಸ್​ನ್ನು ಯುವತಿ ನೋಡಿದ್ದಾಳೆ ಎನ್ನುವ ಮಾಹಿತಿ ಹೊರಬಿದ್ದಿದೆ. ಆದರೆ, ಪೊಲೀಸರ ನೋಟಿಸ್​ಗೆ ಆಕೆಯಿಂದ ಯಾವುದೇ ಉತ್ತರ ದೊರೆತಿಲ್ಲ ಎನ್ನಲಾಗ್ತಿದೆ. ಸಿಡಿ ಲೇಡಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆದಿದ್ದು, ಎಸ್ …

Read More »

224-225 ಜನರಲ್ಲಿ ಎಲ್ಲರೂ ಶ್ರೀರಾಮಚಂದ್ರ-ಸೀತಾ ಮಾತೆಯರೇ ಅಲ್ಲ: ಬಿ.ಸಿ ಪಾಟೀಲ್

ಬೆಂಗಳೂರು: 224-225 ಜನರಲ್ಲಿ ಹೆಣ್ಣು ಮಕ್ಕಳು ಇದ್ದಾರೆ. ಅವರೆಲ್ಲರೂ ಶ್ರೀರಾಮಚಂದ್ರ, ಸೀತಾ ಮಾತೆಯರೇ ಅಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ‘224-225 ಜನರಲ್ಲಿ ಹೆಣ್ಣು ಮಕ್ಕಳು ಇದ್ದಾರೆ. ಎಲ್ಲರೂ ಶ್ರೀರಾಮಚಂದ್ರ, ಸೀತಾ ಮಾತೆಯರೇ ಅಲ್ಲ. ಯಾವ ಸಚಿವರು ಹೇಳಿಕೆ ನೀಡಿದ್ರೂ ಎಲ್ಲರೂ ಅವ್ರವ್ರ ಆತ್ಮ ಮುಟ್ಟಿ ನೋಡಿಕೊಳ್ಳಲಿ’ ಎಂದು ಹೇಳಿದರು. ಒಂದು ಬೆರಳು ಒಬ್ಬರ ಕಡೆ ತೋರಿಸಿದ್ರೆ, ಉಳಿದ ನಾಲ್ಕು ಬೆರಳು ನಮ್ಮ …

Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್‌ಪಿನ್‌ಗಳು!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಬಹಿರಂಗವಾದ ಬಂದ ಬಳಿಕ 20 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಿಂಗ್‌ಪಿನ್‌ಗಳು ಗೌಪ್ಯ ಸಂವಹನಕ್ಕೆ ‘ಸಿಗ್ನಲ್’ ಆಯಪ್ ಮೆಸೆಂಜರ್ ಬಳಸುತ್ತಿದ್ದಾರೆ ಎಂಬ ಸಂಗತಿ ವಿಶೇಷ ತನಿಖಾ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಿಡಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರು ಮತ್ತು ವಿವಾದಿತ ಯುವತಿ ಎಸ್‌ಐಟಿ ಗಾಳಕ್ಕೆ ಸಿಲುಕದಂತೆ ಹೊರ ರಾಜ್ಯಗಳಲ್ಲಿ …

Read More »

ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್ ….

ಬೆಂಗಳೂರು, ಮಾರ್ಚ್ 23: ಮಾಜಿ ಸಚಿವ, ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಿದೆ. ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಇಡಿಗೆ ಮಾಜಿ ಸಚಿವರ ವಿರುದ್ಧ ದೂರು ನೀಡಿದೆ. ಮಂಗಳವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕಾಂಗ್ರೆಸ್ ಮುಖಂಡ ಮೋಹನ್ ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ನಡೆದಿರುವ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.   ಮಾಧ್ಯಮಗಳ ಜೊತೆ …

Read More »

ವಿಧಾನ ಪರಿಷತ್ ನಲ್ಲಿ ಮುಂದುವರಿದ ಗದ್ದಲ: ಸದನದ ಸಮಿತಿ ರಚಿಸಲು ಪ್ರತಿಪಕ್ಷ ಪಟ್ಟು

ವಿಧಾನ ಪರಿಷತ್: ರಾಜ್ಯದ ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿರುವುದರಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ತನಿಖೆಗೆ ಸದನ ಸಮಿತಿ ರಚಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಧರಣಿ ಮುಂದುವರಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ಸದನ ಸಮಿತಿ ರಚಿಸಲೇ ಬೇಕು ಎಂದು ಪಟ್ಟು ಹಿಡಿದರು. ಈ ವೇಳೆ …

Read More »

ಕೊರೊನಾ ಎರಡನೇ ಅಲೆ ಎದುರಿಸಲು ಹೊಸ ರೂಲ್ಸ್:ಸಚಿವ ಡಾ. ಸುಧಾಕರ್ ಘೋಷಣೆ

ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು …

Read More »

ಎಸ್​ಐಟಿ ಎದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ.. ಮಾಜಿ ಶಾಸಕ ನಾಗರಾಜ್ ಮೂಲಕ ಹಣಕ್ಕೆ ಡಿಮ್ಯಾಂಡ್?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಡಿ ಕೇಸ್ ಸಂಬಂಧ ವಿಚಾರಣೆಗೆ ಕರೆದಿದ್ದ SIT ಗೆ ಮಾಜಿ ಸಚಿವ ಜಾರಕಿಹೊಳಿ ಅನೇಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ SITಗೆ ರಮೇಶ್ ಏನು ಉತ್ತರ ಕೊಟ್ಟಿದ್ದಾರೆ. ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಯಿತು ಎಂಬ ರೋಚನ ಸುದ್ದಿ ಇಲ್ಲಿದೆ. ವಿಚಾರಣೆಗೆ ಕರೆದಿದ್ದ SIT ಸಿಡಿ ಮಾಡಿದ್ಯಾರು ಅನ್ನೋ ಕುರಿತು ಜಾರಕಿಹೊಳಿಯನ್ನ ಪ್ರಶ್ನಿಸಿದ್ದಾರೆ. ಸದಾಶಿವನಗರ ಠಾಣೆಗೆ ನೀಡಿದ ದೂರಿನಲ್ಲಿ ಹಣ …

Read More »