ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.
Read More »ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ.
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಬುಧವಾರ ಮತ್ತಷ್ಟು ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ …
Read More »ರಾಜ್ಯದಲ್ಲಿ 2.28 ಲಕ್ಷ ಬಿಪಿಎಲ್ ಪಡಿತರ ಚೀಟಿ ರದ್ದು: ಸಚಿವ ಉಮೇಶ್ ಕತ್ತಿ
ಬೆಂಗಳೂರು: ರಾಜ್ಯದಲ್ಲಿ 2,28,188 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ. ಅರ್ಹತೆ ಇಲ್ಲದೆ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಗಳಿಂದ ₹ 3.07 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದರು. ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳು ಮತ್ತು …
Read More »ಅನೈತಿಕ ಸರ್ಕಾರವಾಗಿದ್ದರೆ ಸದನದಲ್ಲಿ ಚರ್ಚಿಸಿ: ಕಾಂಗ್ರೆಸ್ ಗೆ ಜಗದೀಶ್ ಶೆಟ್ಟರ್ ಸವಾಲು
ಬೆಂಗಳೂರು: ಕಲಾಪ ಸಲಹಾ ಸಮಿತಿ ಸಭೆಯನ್ನು ಕಾಂಗ್ರೆಸ್ ಪಾರ್ಟಿ ಸಭೆಗೆ ಬಹಿಷ್ಕರಿಸಿದೆ. ಬಜೆಟ್ ಕಲಾಪವನ್ನೂ ಬಹಿಷ್ಕರಿಸಿತ್ತು. ಇಂತಹ ನಡವಳಿಕೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೈತಿಕ ಸರ್ಕಾರವಾಗಿದ್ದರೆ ನೀವು ಸದನದಲ್ಲಿ ಚರ್ಚಿಸಿ. ಬಹಿಷ್ಕರಸಿ ಏನು ಪ್ರಯೋಜನ? ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು. ನಾನು ಪ್ರತಿಪಕ್ಷ ನಾಯಕನಾಗಿದ್ದಾಗ ಸಭಾತ್ಯಾಗ ಎಂದು ಮಾಡಬಾರದುಅವರೇ ಹೇಳುತ್ತಿದ್ದರು. ಸದನದೊಳಗೆ ಏನೇ ಇದ್ದರೂ ಚರ್ಚೆ ಮಾಡಿ ಎನ್ನುತ್ತಿದ್ದರು. …
Read More »‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ
ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ …
Read More »ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …
Read More »ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ
ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …
Read More »ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಕಾರಣ ತಿಳಿದಿಲ್ಲ;: H.D.K.
ಕೋಲಾರ: ದಿನೇಶ್ ಕಲ್ಲಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬ ವಿಚಾರ ತಿಳಿದಿಲ್ಲ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿ ಇದೆ. ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು ನಡೆಯುತ್ತಿವೆ. ಸರ್ಕಾರವು ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜನತೆಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. …
Read More »ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ. ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
Read More »ತಮಿಳುನಾಡಿನಲ್ಲಿ 60 ಸೀಟು ಕೇಳಿದ ಬಿ ಜೆ ಪಿ ಗೆ 20ಸೀಟು
ಚೆನ್ನೈ: ತಮಿಳುನಾಡಿನಲ್ಲಿ ಏ.6ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟದ ನಡುವಣ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಹಿಂದೆ 60 ಕ್ಷೇತ್ರಕ್ಕೆ ಬಿಜೆಪಿ ಬೇಡಿಕೆ ಇಟ್ಟಿತ್ತು. ಆದರೆ ಕೇವಲ 20 ಕ್ಷೇತ್ರಗಳನ್ನು ಮಾತ್ರ ಎಐಎಡಿಎಂಕೆ ಬಿಟ್ಟುಕೊಟ್ಟಿದೆ. ಇದೇ ವೇಳೆ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಎಐಎಡಿಎಂಕೆ ಘೋಷಿಸಿದೆ. ಈ ಬೆನ್ನಲ್ಲೇ …
Read More »
Laxmi News 24×7