ಬೆಳಗಾವಿ: ಸದಾ ಒಂದಿಲ್ಲದೊಂದು ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …
Read More »ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …
Read More »ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ.
ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …
Read More »ಸಿಡಿ ಸಂತ್ರಸ್ತೆಯ ಮೌನ, ಷಡ್ಯಂತ್ರದ ಅನುಮಾನಕ್ಕೆ ಕಾರಣ: ಬೊಮ್ಮಾಯಿ
ಹಾವೇರಿ, ಮಾರ್ಚ್ 06: ಸಂತ್ರಸ್ತೆ ಇನ್ನೂ ದೂರು ನೀಡದಿರುವುದರಿಂದ ರಮೇಶ್ ಜಾರಕಿಹೊಳಿ ವಿರುದ್ಧದ ವಿಡಿಯೋ ಸುತ್ತ ಸಾಕಷ್ಟು ಅನುಮಾನ ಮೂಡುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಪ್ರಕರಣ ಆದ ಬಳಿಕ ಬಹಳಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್ ಸೇರಿದಂತೆ ಬಹಳಷ್ಟು ವಿಚಾರಗಳು ಬೆಳಕಿಗೆ ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗುವ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, …
Read More »ವಿಶ್ವಾದ್ಯಂತ ಶಿಕ್ಷಣದಿಂದ ವಂಚಿತರಾಗುತ್ತಿರುವ 888 ಮಿಲಿಯನ್ ಗೂ ಹೆಚ್ಚು ಮಕ್ಕಳು: ಯುನಿಸೆಫ್ ವರದಿ
ನವದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಪ್ರಪಂಚದ ಬಹುತೇಕ ಭಾಗ ಲಾಕ್ ಡೌನ್ ಆಗಿತ್ತು. ಅಂತೆಯೇ ಭಾರತವು ಈ ಒಂದು ಪರಿಸ್ಥಿತಿಯನ್ನು ಅನುಭವಿಸಿದ್ದು ಇದರಿಂದ ದೇಶದ ಆರ್ಥಿಕತೆ, ನಾಗರಿಕತೆ ಹಾಗೂ ಶಿಕ್ಷಣ ವ್ಯವಸ್ಥೆ ಅಂತಹ ಹಲವಾರು ಕ್ಷೇತ್ರಗಳ ಮೇಲೆ ವಿಭಿನ್ನ ರೀತಿಯ ಪರಿಣಾಮಗಳು ಬೀರಿತ್ತು. ಅದರಲ್ಲಿಯೂ ಶಿಕ್ಷಣ ವ್ಯವಸ್ಥೆಯಲ್ಲಿ ಬೀರಿದ ಪರಿಣಾಮವನ್ನು ಅವಲೋಕಿಸಿದರೆ, 2020 ರಲ್ಲಿ 1.5 ಮಿಲಿಯನ್ ಶಾಲೆಗಳು ಮುಚ್ಚಲ್ಪಟ್ಟವು. ಇದರಿಂದಾಗಿ ಭಾರತದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ …
Read More »‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ ಬೇಡ ಅಂತ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ರೇವಣ್ಣ, ತಮ್ಮ ಮೇಲೆ ವಿನಾಃಕಾರಣ …
Read More »ಎಸ್ಟಿ ಸಮುದಾಯದಿಂದ ‘ನಾಟಕ ಬಿಡಿ, ಮೀಸಲಾತಿ ಕೊಡಿ’ ಅಭಿಯಾನ; ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಸಿಎಂಗೆ ಆಗ್ರಹ
ಬೆಂಗಳೂರು(ಮಾ.5): ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲಾತಿ ಘೋಷಣೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ವಾಲ್ಮೀಕಿ ಸಮುದಾಯದ ಒಕ್ಕೂಟ ಅಭಿಯಾನ ಆರಂಭಿಸಿದೆ. ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಆ ವರದಿ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೇ ಸಂಪುಟ ಉಪಸಮಿತಿ ರಚಿಸಿತ್ತು. ಇದರಿಂದಾಗಿ ಮಾರ್ಚ್ 9ರೊಳಗೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುವುದಾಗಿ ಸ್ವತಃ …
Read More »ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಬೊಮ್ಮಾಯಿ
ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಸಂಬಂಧ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್ ಠಾಣೆಗಳ ಗಡಿ ಪುನರ್‌ರಚಿಸಲಾಗುವುದು’ ಎಂದರು. ದಕ್ಷಿಣ ವಲಯ ರಚನೆಯಿಲ್ಲ: ‘ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, …
Read More »ಸ್ಪೀಕರ್ ಕಾಗೇರಿ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ : ಶಾಸಕ ಸಂಗಮೇಶ್
ಬೆಂಗಳೂರು : ನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನದೊಳಗೆ ಬಿಡುತ್ತಿಲ್ಲ. ವಿಧಾನಸೌಧವೇನು ಸ್ಪೀಕರ್ ಕಾಗೇರಿ ಅವರದ್ದಾ? ಎಂದು ವಿಧಾನಸೌಧದಿಂದ ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ. https://kannadanewsnow.com/kannada/ramesh-jarkiholi-followers-protest-in-gokak/https://kannadanewsnow.com/kannada/ramesh-jarkiholi-followers-protest-in-gokak/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸದನದೊಳಗೆ ಬೇಡ, ಮೊಗಸಾಲೆಗೂ ಬಿಡಲ್ಲ ಅಂದರೆ ಹೇಗೆ? ವಿಧಾನಸೌಧವೇನು ಸ್ಪಿಕರ್ ಕಾಗೇರಿ ಅವರದ್ದಾ? ವಿಧಾನಸೌಧ ಜನರಿಗೆ ಸೇರಿದ್ದು, ಸ್ಪೀಕರ್ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸ್ಪೀಕರ್ ಸರ್ವಾಧಿಕಾರಿ ಧೋರಣೆ …
Read More »1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತಿರ್ಣರನ್ನಾಗಿಸುವ ಚಿಂತನೆಯತ್ತ ಶಿಕ್ಷಣ ಇಲಾಖೆ!
ಬೆಂಗಳೂರು : ದೇಶದಲ್ಲಿ ಮತ್ತೆ ಹೇಳುತ್ತಿರುವ ಕೋರೋನ ಎರಡನೇ ಅಲೆ ಭೀತಿ ಕರ್ನಾಟಕ ರಾಜ್ಯಕ್ಕೂ ತಟ್ಟಿದ್ದು, 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ಕ್ಲಾಸ್ ಪ್ರಾರಂಭಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ, ಈ ಚಿಕ್ಕ ಮಕ್ಕಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ . ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದ್ದು , ರಾಜ್ಯದಲ್ಲಿಯೂ ಸೋಂಕು ಹೆಚ್ಚುವ ಆತಂಕ ಸೃಷ್ಟಿಯಾಗಿದ್ದರ …
Read More »
Laxmi News 24×7