Breaking News

ರಾಜಕೀಯ

ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ.

ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, …

Read More »

ನನ್ನ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ:ಸಿಎಂ ಕುಟುಂಬದ ವಿರುದ್ಧ ಶಾಸಕ ಸಂಗಮೇಶ್ ಆರೋಪ

ಬೆಂಗಳೂರು: ನನ್ನ ಮೇಲೆ ಮತ್ತು ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರು ಸಿಎಂ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಹೊನಲು ಬೆಳಕಿನ ಕಬ್ಬಡಿ ಪಂದ್ಯ ನಡೆಸಿದ್ದೆವು. ಬಹುಮಾನ ಕೊಡುವ ವೇಳೆ ಆರ್ ಎಸ್‌ಎಸ್ ಕಿತಾಪತಿ ನಡೆಸಿದ್ದು, ಧರ್ಮ, ಜಾತಿ ಮುಂದಿಟ್ಟು ಕಿತಾಪತಿ‌ ಮಾಡಿದ್ದಾರೆ. ಆಟದಲ್ಲಿ ಧರ್ಮ,ಜಾತಿ ರಾಜಕೀಯ ತಂದಿದ್ದಾರೆ. ಕೋಮುಗಲಭೆ ಸೃಷ್ಠಿಗೆ ಮುಂದಾಗಿದ್ದರು. ಅಂದು ಅವರನ್ನು …

Read More »

ರಮೇಶ್‌ ಜಾರಕಿಹೊಳಿ ರಾಜೀನಾಮೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ :ಸತೀಶ್‌ ಜಾರಕಿಹೊಳಿ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ರಮೇಶ್‌ ಜಾರಕಿಹೊಳಿ ರಾಜೀನಾಮೆಯಿಂದ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ ಇದೆ. ಸರಕಾರದಲ್ಲಿರುವ ವಲಸಿಗ ಸಚಿವರ ವೇಗಕ್ಕೆ ಬಿಜೆಪಿಯಲ್ಲಿಯೇ ಬ್ರೇಕ್‌ ಹಾಕುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕುವಂತಾಗಿದ್ದು, ಜಾರಕಿಹೊಳಿ ಕುಟುಂಬಕ್ಕೆ ಪರ್ಯಾಯ ಅಧಿಕಾರ ಕಲ್ಪಿಸದಿದ್ದರೆ ಸರಕಾರ ಅಲುಗಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ವಲಸಿಗರ ನಾಯಕತ್ವ ವಹಿಸಿಕೊಂಡಿದ್ದ ಜಾರಕಿಹೊಳಿ ರಾಜ್ಯ ಬಿಜೆಪಿಯಲ್ಲಿ …

Read More »

ನಗು ತರಿಸುತ್ತೆ ಪಲ್ಟಿಯಾದ ಲಾರಿ ಚಾಲಕನ ವರ್ತನೆ

ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಫನ್ನಿ ಫೋಟೋಗಳು ವೈರಲ್​ ಆಗುತ್ತಲೇ ಇರುತ್ತವೆ. ಇದೇ ಸಾಲಿಗೆ ಸೇರಿದ ಮತ್ತೊಂದು ಫೋಟೋ ಇಂಟರ್ನೆಟ್​ನಲ್ಲಿ ಹರಿದಾಡ್ತಾ ಇದ್ದು ಇದನ್ನ ನೋಡಿದ ಬಳಿಕ ನಿಮಗೆ ನಿಮ್ಮ ಲವ್​ ಲೈಫ್​ ನೆನಪಾಗೋದಂತು ಫಿಕ್ಸ್. ಮನುಷ್ಯ ಪ್ರೀತಿಯಲ್ಲಿ ಬಿದ್ದ ಅಂದರೆ ಸಾಕು ಆತನಿಗೆ ಹಸಿವು – ನಿದ್ದೆಯ ಅರಿವು ಇರೋದಿಲ್ಲ ಅಂತಾರೆ. ಅಕ್ಕಪಕ್ಕದಲ್ಲಿ ಏನು ನಡೀತಾ ಇದೆ ಅನ್ನೋದೇ ಅವರ ಗಮನಕ್ಕೆ ಬರೋದಿಲ್ಲ. ಇಂಟರ್ನೆಟ್​ನಲ್ಲಿ ವೈರಲ್​ ಆದ ಫೋಟೋ ಕೂಡ …

Read More »

ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 31 ರವರೆಗೆ ನಡೆಯಲಿದೆ. ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ. ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಇಂದಿನಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಎರಡು ದಿನ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರವಾಗಿ ವಿಧಾನಸಭೆಯಲ್ಲಿ ವಿಶೇಷ ಚರ್ಚೆ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ನಂತರ ಚರ್ಚೆಗೆ ಅವಕಾಶ ನೀಡಲಾಗುವುದು. ಇಂದಿನಿಂದ ಮಾರ್ಚ್ …

Read More »

ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆ, ನಾಲ್ಕರಲ್ಲೂ ಗೆಲುವು ನಮ್ಮದೇ: ಬಿಎಸ್‌ವೈ

ಶಿವಮೊಗ್ಗ: ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆಯಾಗಲಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಘೋಷಣೆಯಾದ ತಕ್ಷಣ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 8ರಂದು ಬಜೆಟ್ ಮಂಡಿಸಿದ ನಂತರ ಚುನಾವಣಾ ಪ್ರಚಾರ ಆರಂಭಿಸುವೆ ಎಂದರು. …

Read More »

15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ

  ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ  ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ  ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ   ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ …

Read More »

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ

ಮಂಗಳೂರು,ಮಾ.01(ಹಿ.ಸ): ನಗರ ದ ಹೊರ ವಲಯದ ಸುರತ್ಕಲ್ ನಲ್ಲಿ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಪೊಲೀಸರು ಬೆಂಗಳೂರಿನ ಯುವತಿಯನ್ನು ರಕ್ಷಿಸಿದ್ದಾರೆ. ಈ ಯುವತಿಯನ್ನು ಇಟ್ಟುಕೊಂಡು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ BASF ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೇಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ …

Read More »

ಎಫ್‌ಡಿಎ: 2.49 ಲಕ್ಷ ಅಭ್ಯರ್ಥಿಗಳು ಹಾಜರು, ವಿಜ್ಞಾನ ವಿಷಯದ ಪ್ರಶ್ನೆಗಳೇ ಹೆಚ್ಚು!

ಬೆಂಗಳೂರು: ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ನೇಮಕಾತಿ ಪರೀಕ್ಷೆಯು ಭಾನುವಾರ ರಾಜ್ಯದಾದ್ಯಂತ 1,057 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಈ ಪರೀಕ್ಷೆಯನ್ನು 2.49 ಲಕ್ಷ ಅಭ್ಯರ್ಥಿಗಳು ಬರೆದರು. ‘ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗಣನೆಗೆ ತೆಗೆದುಕೊಂಡರೆ ಶೇ 66ರಷ್ಟು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡವರನ್ನು ಮಾತ್ರ ಪರಿಗಣಿಸಿದರೆ ಶೇ 92ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ. 2.68 ಲಕ್ಷ ಅಭ್ಯರ್ಥಿಗಳು ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. …

Read More »

ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ ಮತ್ತೊಂದು ದೊಡ್ಡ ಬ್ರೇಕ್​ ನೀಡಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಜೆಟ್​ ವಿಚಾರಕ್ಕೆ ಸಲಾರ್​ ಸಿನಿಮಾ ತುಂಬಾನೇ ದೊಡ್ಡ ಮಟ್ಟಕ್ಕೆ ಟ್ರೋಲ್​ ಆಗುತ್ತಿದೆ. ಸಲಾರ್​ ಸಿನಿಮಾವನ್ನು ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. …

Read More »