ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇಂದಿನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಸಿಎಂ ಸ್ಥಾನದಿಂದ ಇಳಿಯುತ್ತಿದ್ದಂತೆ ಪ್ರವಾಹ ಬಂತು, ಕೊರೊನಾ ಬಂತು. ಇದೆಲ್ಲವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆದರೂ ಈ ಸರ್ಕಾರನೇ ಗ್ರೇಟ್ ಅಂತ ಸರ್ಟಿಫಿಕೇಟ್ ಕೊಡ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಯಾರು ನನ್ನ ಪರ ನಿಂತಿಲ್ಲ. ಕೆಟ್ಟ ಕೆಲಸ ಮಾಡಿದವರನ್ನೇ, …
Read More »ಕರ್ನಾಟಕ ಕೇಸರಿ ಪುರಸ್ಕೃತ, ಹಿರಿಯ ಪೈಲ್ವಾನ್ ಚಂದ್ರು ಕುರವಿನಕೊಪ್ಪ ನಿಧನ
ಬೆಳಗಾವಿ – ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ, ಮೂರು ಸಲ ಕರ್ನಾಟಕ ಕೇಸರಿ ಪುರಸ್ಕೃತ, ಹಿರಿಯ ಪೈಲ್ವಾನ್ ಚಂದ್ರು ಕುರವಿನಕೊಪ್ಪ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರು ಇಬ್ಬರು ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ. ಪೈಲವಾನ್ ಚಂದ್ರು ಅವರ ನಿಧನಕ್ಕೆ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಂತಾಪ ಸೂಚಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಮೃತರ …
Read More »ಯತ್ನಾಳ್ ಕಾಂಗ್ರೆಸ್ ನ `ಬಿ’ ಟೀಂ : ನಿರಾಣಿ, ಪಾಟೀಲ್ ವಾಗ್ದಾಳಿ
ಬೆಂಗಳೂರು,ಫೆ.22- ಪಂಚಮಸಾಲಿ ಹೋರಾಟ ವನ್ನು ಕೆಲವರು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಮುಗಿಬಿದ್ದರು. ಪಂಚಮಸಾಲಿ ಐತಿಹಾಸಿಕ ಹೋರಾಟ, ಸ್ವಾರ್ಥಕ್ಕೆ ಬಳಕೆಯಾಗುತ್ತಿದ್ದು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‍ನ ಬಿ ಟೀಮ್‍ನಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಸಚಿವರುಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಶ್ರೀ …
Read More »ನರೇಗಾ ಯೋಜನೆ ಲೇವಡಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು
ವಯನಾಡು: ಪ್ರಧಾನಿ ಮೋದಿ ಅವರು, 2014 ರಲ್ಲಿ ಅಧಿಕಾರ ವಹಿಸಿಕೊಂಡಾಗ ನರೇಗಾ ಯೋಜನೆಯನ್ನು ಅಪಹಾಸ್ಯ ಮಾಡಿದ್ದರು. ಯುಪಿಎ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷೆಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೋವಿಡ್ ಸಮಯದಲ್ಲಿ ದೇಶದ ಜನರ ‘ಸಂರಕ್ಷಕ’ ಪಾತ್ರವನ್ನು ವಹಿಸಿದೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಪುಥಡಿ ಗ್ರಾಮ ಪಂಚಾಯಿತಿಯಲ್ಲಿ ಕುಟುಂಬಶ್ರೀ ಸಂಗಮಮ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ …
Read More »ಯಮಕನಮರಡಿ : ವಿವಿಧ ಕಾಮಗಾರಿಗೆ ಗ್ರಾಪಂ.ಅಧ್ಯಕ್ಷೆ ಚಾಲನೆ
ಬೆಳಗಾವಿ : ಯಮಕನಮರಡಿ ಕ್ಷೇತ್ರದ ಮಾವನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶಿವಕುಮಾರ್ ಗುಡಗನಟ್ಟಿ ಇಂದು ಭೂಮಿ ಪೂಜೆ ನೆರವೇರಿಸಿದರು. ನರೇಗಾ ಯೋಜನೆಯಲ್ಲಿ ಬಿಡುಗಡೆಯಾದ 18 ಲಕ್ಷ ರೂಪಾಯಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ವೇಳೆ ಅಧ್ಯಕ್ಷೆ ಮಾತನಾಡಿ, ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶಾಸಕರು ಪಣ ತೊಟ್ಟಿದ್ದಾರೆ. ಅವರ ಆಸೆಯಂತೆ ಇಂದು ರಸ್ತೆ , ಶಾಲೆ ಕೊಠಡಿ ನಿರ್ಮಾಣ ಸೇರಿ ವಿವಿಧ …
Read More »ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ‘ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ವಿಚಾರಗಳನ್ನು ಮಾಡಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಸಹ ವಿಶೇಷ ಆಸಕ್ತಿ ಬೆಳೆಸಿಕೊಂಡು ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು. ಬಳಿಕ ಮಾತನಾಡಿ, ‘ಕಾಂಗ್ರೆಸ್ ಪಕ್ಷವನ್ನು …
Read More »ನೀನು ಮೊದಲು ರಾಜೀನಾಮೆ ನೀಡು : ಯತ್ನಾಳ್ ಗೆ ಸಚಿವ ನಿರಾಣಿ ಸವಾಲ್
ಬೆಂಗಳೂರು : ಶಾಸಕ ಬಸವರಾಜ್ ಯತ್ನಾಳ್ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದೀಯಾ. ಮೊದಲು ನೀನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡು ಅಂತಾ ಸಚಿವ ಮುರಗೇಶ್ ನಿರಾಣಿ ಕಿಡಿ ಕಾರಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೇ ನಡೆದ ಸಮಾವೇಶದಲ್ಲಿ ಬಹಿರಂಗವಾಗಿ ಯತ್ನಾಳ್ ಅವರು , ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ನಮಗೆ ರಾಜೀನಾಮೆ ನೀಡು ಎನ್ನುವುದಕ್ಕೆ ಇವರು ಯಾರು ಎಂದು ಪ್ರಶ್ನ ಮಾಡಿದ್ದಾರೆ. ಮೊದಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ …
Read More »ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಅವರ ಕ್ಷೇತ್ರಕ್ಕೆ ಅವರೇ ಬಾಸ್, ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಬಾಸ್!!
ಬೆಳಗಾವಿ: ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …
Read More »ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್
ಬೆಂಗಳೂರು: ‘ಉತ್ತಮವಾಗಿ ಕಾರ್ಯ ನಿರ್ವಹಿಸದೇ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಾಡಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ’ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು. ಬಿಜೆಪಿ ಆರ್ಥಿಕ ಪ್ರಕೋಷ್ಠವು ಕೇಂದ್ರ ಬಜೆಟ್ ಕುರಿತು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಮಾತಿತ್ತು. ದೀನದಯಾಳ್ ಉಪಾಧ್ಯಾಯರ ‘ಅಂತ್ಯೋದಯ’ ಚಿಂತನೆಗಳೊಂದಿಗೆ ಇಂತಹ ಮಾತುಗಳನ್ನು ತೊಡೆದು ಹಾಕಲು …
Read More »ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು. ಮೀಸಲಾತಿಗಾಗಿ ಆಗ್ರಹಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮಗೆ ನಿಗಮ, ಮಂಡಳಿ ಅಥವಾ ಅನುದಾನ ಬೇಡ. ‘2ಎ’ ಮೀಸಲಾತಿಯೇ ನಮ್ಮ ಬೇಡಿಕೆ. ಅದು ದೊರೆಯುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು. ಮೀಸಲಾತಿಗಾಗಿ 2012ರಿಂದಲೂ …
Read More »
Laxmi News 24×7