Breaking News

ರಾಜಕೀಯ

ನಾಲ್ಕು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ : ಹೆಚ್.ಡಿ.ದೇವೇಗೌಡ

ರಾಯಚೂರು: ನಾಲ್ಕು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ದೇವೇಗೌಡರು, ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗುವುದಿಲ್ಲ. ಕೇರಳದಲ್ಲಿ ಎಲ್ ಡಿಎಫ್ ಗೆ ಹೆಚ್ಚು ಶಕ್ತಿಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದೆ. ಮತಗಳು ಕಡಿಮೆ ಬಂದರೂ ಈ ಬಾರಿ ಮಮತಾ ಬ್ಯಾನರ್ಜಿ …

Read More »

ಸರಕಾರದ ಮಟ್ಟದಲ್ಲಿ ಹೋರಾಟಮಾಡಿ ಅನುದಾನ ತರುತ್ತಿದ್ದೇನೆ ​: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ​ –  ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕಿರುವ ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿಯನ್ನು ತೆಗೆದುಹಾಕುವುದೇ ನನ್ನ ಸಂಕಲ್ಪ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬಾಳೇಕುಂದ್ರಿ ಕೆ. ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಶಾಸಕರ ನಿಧಿಯ (MLA Fund) ವತಿಯಿಂದ ​8 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಯ ಎರ​ಡೂ​​ ಬದಿಗೆ ಕಾಂಕ್ರೀಟ್ ಗಟಾರ್ ನಿರ್ಮಾಣದ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ​ನೀಡಿ ಅವರು ಮಾತನಾಡಿದರು.  ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದಿನಿಂದಲೂ ಅಭಿವೃದ್ಧಿ ವಂಚಿತವಾಗಿದೆ. ಬೆಳಗಾವಿ ನಗರದ …

Read More »

ದಿಢೀರ್ ಹೆಚ್.ಸಿ.ಮಹದೇವಪ್ಪ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ : ಕುತೂಹಲ ಮೂಡಿಸಿದ ಭೇಟಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಹೆಚ್.ಸಿ.ಮಹದೇವಪ್ಪ ಅವರು, ಸಿದ್ದರಾಮಯ್ಯ ಜೊತೆಗಿನ ಆತ್ಮೀಯತೆಯಿಂದ ದೂರಾಗಿದ್ದರು. ಆದ್ರೇ ಇಂದು ದಿಢೀರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಇಂತಹ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಮೈಸೂರು ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿ ಗುರ್ತಿಸಿಕೊಂಡಿದ್ದವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಸಿ.ಮಹದೇವಪ್ಪ. ಆದ್ರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ …

Read More »

ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್​..!

ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್​​ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ ವೇಳೆ ಮಾಹಿತಿ ಕಲೆ ಹಾಕಿದ ಗುಪ್ತಚರ ಇಲಾಖೆ ಕಸ್ಟಮ್ಸ್​ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಈ ಸರಕನ್ನ ದೆಹಲಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಲೆಹೆಂಗಾಗಳ ಒಳಗೆ 3900 ಗ್ರಾಂನ ಎಂಡಿಎಂಎ ಡ್ರಗ್​ ಇತ್ತು ಎನ್ನಲಾಗಿದೆ. ಈ ಎಂಡಿಎಂಎ ಡ್ರಗ್​​ಗಳ ಅತಿಯಾದ ಸೇವನೆಯಿಂದ ಲಿವರ್​, …

Read More »

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ: ಶೇಕಡ 4 ರಷ್ಟು ಡಿಎ ಘೋಷಣೆಗೆ ಮುಂದಾದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಈ ತಿಂಗಳು ಘೋಷಣೆಯಾಗಲಿದೆ. ಡಿಎ ನೀಡುವ ಬಗ್ಗೆ ದೀರ್ಘ ಸಮಯದಿಂದ ಚರ್ಚೆಯಾಗ್ತಿದೆ. ಶೇಕಡ 4 ರಷ್ಟು ಡಿಎ ಹೆಚ್ಚಳವನ್ನು ಕೇಂದ್ರ ಘೋಷಿಸಬಹುದು ಎನ್ನಲಾಗಿದೆ. ಇದು ಕೇಂದ್ರ ನೌಕರರ ವೇತನದ ಮೇಲೆ ನೇರ ಪರಿಣಾಮ ಬೀರಲಿದೆ. …

Read More »

ಭೂಮಾಪನ ಅಧಿಕಾರಿ ಎಸಿಬಿ ಬಲೆಗೆ

ಯಾದಗಿರಿ: ಭೂಮಾಪನ ಇಲಾಖೆಯ ಅಧಿಕಾರಿ ರಘುರಾಮ ಜಮೀನು ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೀವ ಚವ್ಹಾಣ ಅವರಿಂದ ₹2 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ನಗರದ ಹೊಸಳ್ಳಿ ಕ್ರಾಸ್‌ ಹೋಟೆಲೊಂದರಲ್ಲಿ ₹2 ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಜಮೀನು ಅಳತೆ ಮಾಡುವ ವಿಚಾರದಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹2 ಸಾವಿರ ಪಡೆಯಲು ಒಪ್ಪಿದ್ದರು. ಆದರಂತೆ ಲಂಚ ಸ್ವೀಕರಿಸುವಾಗ …

Read More »

ಜಾತ್ರೆ, ಉತ್ಸವಗಳಿಗೆ ನಿರ್ಬಂಧ ತೆರವು

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಕೋವಿಡ್‌ ಕಾರಣದಿಂದ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ 2020ರ ಮಾರ್ಚ್‌ 20ರಂದು ಆದೇಶ ಹೊರಡಿಸಲಾಗಿತ್ತು. ಸೆಪ್ಟೆಂಬರ್‌ 1ರಿಂದ ಕೆಲವು ಷರತ್ತಿಗಳೊಂದಿಗೆ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಆರಂಭಿಸಲು ಅವಕಾಶ …

Read More »

ಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು

ಬೆಂಗಳೂರು: ಕನ್ನಡದ ವರನಟ ಡಾ.ರಾಜ್ ಕುಮಾರ್​ ಅವರನ್ನ ಅಪಹರಿಸಿದ್ದ ನರಹಂತಕ ವೀರಪ್ಪನ್​ಗೆ ಕೋಟ್ಯಂತರ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಅಣ್ಣಾವ್ರನ್ನು ಬಿಡುಗಡೆ ಮಾಡಲು ಮೂರು ಹಂತದಲ್ಲಿ 15.22 ಕೋಟಿ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ನೇತೃತ್ವದ ಸರ್ಕಾರ ನೀಡಿತ್ತು ಎಂಬ ಮಾಹಿತಿ ಪತ್ರಕರ್ತ ಶಿವಸುಬ್ರಮಣ್ಯನ್​ ಅವರು ಬರೆದಿರುವ ಪುಸ್ತಕದಲ್ಲಿ ರಿವೀಲ್​ ಆಗಿದೆ. 2000ರ ಜುಲೈ 30ರ ರಾತ್ರಿ ಗಾಜನೂರಿನ ತೋಟದ ಮನೆಯಿಂದ ಡಾ.ರಾಜ್‌ಕುಮಾರ್ …

Read More »

ಎಸ್.ಆರ್.ಪಾಟೀಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್. ಈ ಬಗ್ಗೆ ಟ್ವಿಟ್ ಮೂಲಕ ತಿಳಿಸಿರುವ ಪಾಟೀಲ್ ಅವರು , ಸಣ್ಣ ಪ್ರಮಾಣದ ಅನಾರೋಗ್ಯದ ಕಾರಣ ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದರಿಂದ ನನಗೆ ಸದನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. ಅದರೊಂದಿಗೆ, ವೈದ್ಯರ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿರುವದಾಗಿಯೂ,ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಹಾಗೂ ಶೀಘ್ರದಲ್ಲೇ ಗುಣಮುಖನಾಗಲಿದ್ದೇನೆ ಎಂದು ತಿಳಿಸಿದ್ದಾರೆ.

Read More »

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …

Read More »