ನವದೆಹಲಿ: ಲೋಕಸಭೆಯಲ್ಲಿ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ನಂತರ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇದು ರೈತರ ಹಾಗೂ ಗ್ರಾಮೀಣ ಭಾರತದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಅನುಕೂಲವಾಗುವ, ಉದ್ಯಮ, ಆರೋಗ್ಯ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಬಜೆಟ್ ಇದಾಗಿದ್ದು, ಉತ್ತಮ ಬಜೆಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ …
Read More »ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ
ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನ ಹೊಂದಿದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು. ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, …
Read More »“ಆತ್ಮ ಬರ್ಬಾದ್” ಬಜೆಟ್ ಘೋಷಿಸಿದ್ದಾರೆ ನಿರ್ಮಲಾ : ಸಿದ್ದರಾಮಯ್ಯ
ಬೆಂಗಳೂರು : ನಾನು ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರ್ಮಲಾ ಅವರು “ಆತ್ಮ ಬರ್ಬಾದ್” ಬಜೆಟ್ ಕೊಟ್ಟಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಬಟೆಜ್ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ ಅದನ್ನು ಚೇತರಿಕೆ ಹಾದಿಗೆ ತರುತ್ತಾರೆ ಎಂಬ ನಿರೀಕ್ಷೆ ಇತ್ತು ಅದು ಹುಸಿಯಾಗಿದೆ. ಬಹಳ ಜನರು ಕೊರೊನಾ ಲಾಕ್ ಡೌನ್ ನಿಂದ ಉದ್ಯೋಗ ಕಳೆದುಕೊಂಡಿದ್ದರು. …
Read More »ದೆಹಲಿ ಗಡಿಯಲ್ಲಿ ಇಂಟರ್‌ನೆಟ್ ಸೇವೆ ಬಂದ್
ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ …
Read More »ಮಹಾ ಸಿಎಂ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳ ಭುಗಿಲೆದ್ದ ಆಕ್ರೋಶ: 1 ಲಕ್ಷ ಕನ್ನಡಿಗರೊಂದಿಗೆ ಮಹಾರಾಷ್ಟ್ರ ಗಡಿಗೆ ನುಗ್ಗಲು ಸಜ್ಜು
ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದು, ರೈಲ್ವೆ ಚಳುವಳಿ ಆರಂಭಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಬೆಳಗಾವಿ ನಮ್ಮದು, ರಾಜ್ಯದ ಒಂದಿಂಚು ಜಾಗವನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧ ಮಾಡಬೇಕು. …
Read More »5 ಸಾವಿರ ಡೋಸ್ ಲಸಿಕೆ ವೇಸ್ಟ್!
ನವದೆಹಲಿ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭವಾ ದಾಗಿನಿಂದ ಈವರೆಗೆ ಅಂದರೆ ಜ.16ರಿಂದ 29ರವರೆಗೆ 5 ರಾಜ್ಯಗಳಲ್ಲಿ ಸುಮಾರು 5 ಸಾವಿರ ಡೋಸ್ ಗಳಷ್ಟು ಲಸಿಕೆ ವ್ಯರ್ಥವಾಗಿ ಹೋಗಿದೆ. ಈ ಪೈಕಿ ತ್ರಿಪುರಾ ಮೊದಲ ಸ್ಥಾನದಲ್ಲಿದ್ದು ಇಲ್ಲಿ ಶೇ.11ರಷ್ಟು ಲಸಿಕೆ ವೇಸ್ಟ್ ಆಗಿದೆ ಎಂದು ಹಿಂದುಸ್ತಾನ್ ಟೈಮ್ಸ್‌ನ ವರದಿ ತಿಳಿಸಿದೆ. ಲಸಿಕೆಯ ಒಂದು ಸೀಸೆ ತೆರೆದರೆ, ಅದನ್ನು 4 ಗಂಟೆಗಳ ಒಳಗಾಗಿ ಬಳಸಬೇಕು. ತದ ನಂತರ ಬಳಸುವಂತಿಲ್ಲ. ಆದರೆ, ಲಸಿಕೆ …
Read More »ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರೆ
ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …
Read More »ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಹೋರಾಟ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …
Read More »ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …
Read More »ಮಂಗಳವಾರ ರಜಾದಿನ’ ಚಿತ್ರದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಹಾಡು ಬಿಡುಗಡೆ
ಬೆಂಗಳೂರು: ಕೋವಿಡ್ ಅಬ್ಬರದಿಂದ ತತ್ತರಿಸಿದ್ದ ಚಂದನವನ ಮತ್ತೆ ನಿಧಾನವಾಗಿ ತಲೆ ಎತ್ತುತ್ತಿದ್ದು, ಹಲವು ಸಿನಿಮಾಗಳು ಬಿಡುಗಡೆಗೆ ತಯಾರಿ ನಡೆಸಿವೆ. ಈ ನಡುವೆ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ ‘ಮಂಗಳವಾರ ರಜಾದಿನ’ ಸಿನಿಮಾದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಎಂಬ ಹಾಡನ್ನು ನಟ ಅಭಿಷೇಕ್ ಅಂಬರೀಷ್ ಬಿಡುಗಡೆಗೊಳಿಸಿದ್ದು, ಇದೀಗ ಯುಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಗೌಸ್ ಫೀರ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಹಾಡು …
Read More »
Laxmi News 24×7