Breaking News

ರಾಜಕೀಯ

ಮೈಸೂರು ದಸರಾ: ನವರಾತ್ರಿ ಬಣ್ಣಗಳ ಸೀರೆಯುಟ್ಟು ಮಂಗಳಮುಖಿಯರ ಕ್ಯಾಟ್ ವಾಕ್

ಮೈಸೂರು: ದಸರಾ ಮಹೋತ್ಸವದ ನವರಾತ್ರಿಯ ಬಣ್ಣಗಳಾದ ಬಿಳಿ, ಕೆಂಪು, ಕಡು ನೀಲಿ, ಹಳದಿ, ಹಸಿರು, ಬೂದು, ಕಿತ್ತಳೆ, ನವಿಲು ಹಸಿರು, ಗುಲಾಬಿಯ ಸೀರೆಗಳನ್ನು ತೊಟ್ಟು ಅಲಂಕಾರ ಮಾಡಿಕೊಂಡು ಬಂದಿದ್ದ ಮಂಗಳಮುಖಿಯರು ತಾವು ಯಾವ ಮಾಡೆಲ್‌ಗೂ ಕಮ್ಮಿ ಇಲ್ಲ ಎನ್ನುವಂತೆ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿದ್ದಾರೆ. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಇಲ್ಲಿನ ಜೆ.ಕೆ.ಮೈದಾನದಲ್ಲಿ ಮೂರು ನಾಲ್ಕು ದಿನಗಳಿಂದ ನಡೆಯುತ್ತಿರುವ ಮಹಿಳಾ ದಸರಾದ ಕೊನೆಯ ದಿನ, ಮಂಗಳಮುಖಿಯರು ಕ್ಯಾಟ್ ವಾಕ್ ಮಾಡಿದರು. …

Read More »

ನಾಪತ್ತೆ ಪ್ರಕರಣಗಳ ತನಿಖೆಗೆ ಆಧಾರ್​ ಕಾರ್ಡ್​ ವಿವರ ನೀಡಲು ಯುಐಡಿಎಐಗೆ ಹೈಕೋರ್ಟ್​ ನಿರ್ದೇಶನ

ಬೆಂಗಳೂರು : ನಾಪತ್ತೆಯಾಗಿರುವ ವ್ಯಕ್ತಿಯನ್ನು ದೂರಿನ ತನಿಖೆಗಾಗಿ ಆತ ಕೊನೆಯ ಬಾರಿ ಆಧಾರ್‌ ಕಾರ್ಡ್‌ ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI)ಗೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರಿದ್ದ ಧಾರವಾಡ ಪೀಠ ಈ ಆದೇಶ ನೀಡಿದೆ. ತನಿಖೆಯ ವೇಳೆ ಪೊಲೀಸ್​ ಇಲಾಖೆ ಅಧಿಕಾರಿಗಳಾಗಲಿ ಅಥವಾ ಇತರೆ ಯಾವುದೇ ಸಂಸ್ಥೆಯಾಗಲಿ …

Read More »

10 ವರ್ಷ ನಾಗರಿಕ ಸಮಾಜದಿಂದಲೇ ದೂರವಿದ್ದ ತಾಯಿ, ಇಬ್ಬರು ಹೆಣ್ಣುಮಕ್ಕಳ ರಕ್ಷಣೆ

ಕಟಪಾಡಿ(ಉಡುಪಿ): ಸರಿಸುಮಾರು 10 ವರ್ಷಗಳಿಂದ ನಾಗರಿಕ ಸಮಾಜದಿಂದಲೇ ದೂರ ಇದ್ದು ಅನಾಗರಿಕ ರೀತಿಯಲ್ಲಿ ವಾಸ ಮಾಡುತ್ತಿದ್ದ ತಾಯಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಸಮಾಜಸೇವಕರ ನೆರವಿನಿಂದ ರಕ್ಷಣೆ ಮಾಡಲಾಗಿದೆ. ಜಿಲ್ಲೆಯ ಕಟಪಾಡಿ ಅಚ್ಚಡದ ನಿವಾಸಿ ಶ್ಯಾಮಲಾ ಪುರಾಣಿಕ್​ (65) ಹಾಗೂ ಮಕ್ಕಳಾದ ನಾಗಶ್ರೀ (33) ಜಯಶ್ರೀ (36) ರಕ್ಷಿಸಲ್ಪಟ್ಟವರು. ಶ್ಯಾಮಲ ಪುರಾಣಿಕ್​​​​​ ಮನೋರೋಗದಿಂದ ಬಳಲುತ್ತಿದ್ದರು. ಜತೆಗೆ, ತಮ್ಮ ಇಬ್ಬರು ಮಂದಮತಿಯರಾದ ಹೆಣ್ಣು ಮಕ್ಕಳೊಂದಿಗೆ ಮುರುಕಲು ಮನೆಯಲ್ಲಿ ಸಮಾಜದಿಂದ ದೂರವೇ ಇದ್ದು ವಾಸವಾಗಿದ್ದರು. ನಗರದ …

Read More »

ರಾಯಚೂರು ಬಳಿ ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವನ ಕಾಲು ಮುರಿತ, ಹಲವು ಪ್ರಯಾಣಿಕರಿಗೆ ಗಾಯ

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಇನ್ನು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುವಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ …

Read More »

ಕಳ್ಳತನವಾದ 98 ಕ್ರೆಸ್ಟ್​ ಗೇಟ್‌ಗಳ ಬಗ್ಗೆ ಇನ್ನೂ ಸಿಗದ ಸುಳಿವು! ರೈತರಲ್ಲಿ ಹೆಚ್ಚಾದ ಆತಂಕ

ಹಾವೇರಿ: ವರದಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್‌ನ 98 ಕ್ರೆಸ್ಟ್​ ಗೇಟ್‌ಗಳನ್ನು ಖದೀಮರು ಕಳ್ಳತನ ಮಾಡಿಕೊಂಡು ಹೋಗಿದ್ದು, ಜಿಲ್ಲೆಯ ಸವಣೂರು ತಾಲೂಕಿನ ಕಳಸೂರು ಗ್ರಾಮ ಸೇರಿದಂತೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ರೈತರು ಇದೀಗ ಆತಂಕದಲ್ಲಿದ್ದಾರೆ. ರೈತರಿಗೆ ಹಾಗೂ ಜನ ಜಾನುವಾರುಗಳು ಅನುಕೂಲವಾಗಲಿ ಎಂಬ ಕಾರಣದಿಂದ ಕಳಸೂರು ಬಳಿ ವರದಾ ನದಿಗೆ ಪ್ರತಿವರ್ಷ ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಕ್ರೆಸ್ಟ್​ ಗೇಟ್‌ ಅಳವಡಿಸಲಾಗುತ್ತಿತ್ತು. ಇದರಿಂದ ಕಳಸೂರು ಸೇರಿದಂತೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ರೈತರಿಗೆ …

Read More »

ಪಂಚಭೂತಗಳಲ್ಲಿ ಲೀನರಾದ ಸರಸ್ವತಿ ಪುತ್ರ ಎಸ್​.ಎಲ್​. ಭೈರಪ್ಪ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮೈಸೂರು: ಹಿರಿಯ ಸಾಹಿತಿ ಹಾಗೂ ಖ್ಯಾತ ಕಾದಂಬರಿಕಾರ ಎಸ್​. ಎಲ್​. ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಚಾಮುಂಡಿ ಬೆಟ್ಟದ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ವಿಧಿ ವಿಧಾನಗಳಂತೆ ಅವರ ಹಿರಿಯ ಮಗ ರವಿಶಂಕರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಕಿರಿಯ ಮಗ ಉದಯಶಂಕರ್​ ಇದ್ದರು. ಬುಧವಾರ ನಿಧನರಾದ ಖ್ಯಾತ ಸಾಹಿತಿ ಎಸ್​.ಎಲ್​​. ಭೈರಪ್ಪ (94) ಅವರ ಅಂತ್ಯಕ್ರಿಯೆಯನ್ನು ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ಸರ್ಕಾರದ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಬಸವರಾಜ್‌, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ …

Read More »

ವಿಜಯಪುರವಾಲ್ಮೀಕಿ ಮೀಸಲಾತಿಗೆ ಅನ್ಯರ ಸೇರ್ಪಡೆ ಬೇಡ

ವಿಜಯಪುರವಾಲ್ಮೀಕಿ ಮೀಸಲಾತಿಗೆ ಅನ್ಯರ ಸೇರ್ಪಡೆ ಬೇಡ; ಬಸವನ ಬಾಗೇವಾಡಿಯಲ್ಲಿ ಪ್ರತಿಭಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಅನ್ಯಜಾತಿಯವರಿಗೆ ಪರಿಶಿಷ್ಟರ ಪ್ರಮಾಣ ಪತ್ರವನ್ನು ನೀಡುವದನ್ನು ನಿಲ್ಲಿಸಬೇಕು. ಅಲ್ಲದೇ ಅನ್ಯಜಾತಿಯನ್ನು ಸೇರ್ಪಡೆ ಮಾಡಕೂಡದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾ ಘಟಕ ದಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಾಲೂಕಾ ಅಧ್ಯಕ್ಷ ರವಿ ನಾಯಕೋಡಿ ಮಾತನಾಡಿ, ಕಳೆದ ಏಳು ದಶಕಗಳು ಕಳೆಯುತ್ತಾ ಬಂದರೂ ಸಮಾಜದ ಮೇಲೆ ವಂಚನೆ, ಶೋಷಣೆ, ದಬ್ಬಾಳಿಕೆ ನಿರಂತರ …

Read More »

ಸರಕಾರಿ ಜಾಗ ಅತಿಕ್ರಮಣ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಮತ್ತೊಂದು ಪ್ರತಿಭಟನೆ

ಸರಕಾರಿ ಜಾಗ ಅತಿಕ್ರಮಣ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಮತ್ತೊಂದು ಪ್ರತಿಭಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ 2 ಗುಂಟೆ ಸರಕಾರಿ ಜಾಗವನ್ನು ಗ್ರಾಮ ಪಂಚಾಯಿತಿ ಪಿಡಿಒ ಬೇರೆಯವರಿಗೆ ಈ ಸ್ವತ್ತು ಮಾಡಿಕೊಟ್ಟಿದ್ದಾರೆಂದು ಚಿಕ್ಕಬಾಗೇವಾಡಿ ಗ್ರಾಮಸ್ಥರು ಹಾಗೂ ರೈತರು ಪ್ರತಿಭಟನೆ ನಡೆಸಿದ್ದರು ಈ ಪ್ರತಿಭಟನೆ ಬೆನ್ನಲ್ಲೇ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸರಿಯಾದ ದಾಖಲೆ ಇಲ್ಲದಿರುವುದು ಕಂಡುಬಂದಿದ್ದು ಹೀಗಾಗಿಚಿಕ್ಕಬಾಗೇವಾಡಿ ಗ್ರಾಮ ಪಂಚಾಯತಿಯ ಪಿಡಿಒ ಅಧಿಕಾರಿಯನ್ನು ವರ್ಗಾವಣೆ ಮಾಡಲಾಯಿತು …

Read More »

ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಲಿ ಎಂದು ಶ್ರೀ ಬಸವ ಪ್ರಕಾಶ ಸ್ವಾಮೀಜಿ ಹಾರೈಸಿದರು.

ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಬಿದರ ಜಿಲ್ಲೆಯ ಬಸವ ಕಲ್ಯಾಣದಲ್ಲಿ 40 ಅಡಿ ಬ್ರಿಡ್ಜ್, ಹಾಗೂ 3 ಕೋಟಿ ರೂಪಾಯಿ ಸಿಸಿ ರಸ್ತೆ ನಿರ್ಮಾಣ…! ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಲಿ ಎಂದು ಶ್ರೀ ಬಸವ ಪ್ರಕಾಶ ಸ್ವಾಮೀಜಿ ಹಾರೈಸಿದರು. ಈ ಸಂದರ್ಭದಲ್ಲಿ ಬಸವ ಧರ್ಮ ಪೀಠ, ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾ ಸಭೆ, ಬಸವ ಪರ ಸಂಘಟನೆಗಳಿಂದ ಸಚಿವ …

Read More »