ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ …
Read More »ಬಿಡುವಿಲ್ಲದೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ, ಗ್ರಾಹಕರು ಕಂಗಾಲು
ನವದೆಹಲಿ: ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಗೆ 86ರ ಗಡಿಯನ್ನು ದಾಟಿದೆ ಡೀಸೆಲ್ ದರವು ಕಳೆದ ಒಂದು ವರ್ಷದಲ್ಲಿ ಗರಿಷ್ಠ ಏರಿಕೆ ಕಂಡು ಲೀಟರ್ ಗೆ 76ಕ್ಕಿಂತಲೂ ಹೆಚ್ಚಿದೆ. ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ …
Read More »72ನೇ ಗಣರಾಜ್ಯೋತ್ಸವ: ಗೂಗಲ್ ಡೂಡಲ್ದಲ್ಲಿ ಭಾರತದ ಪರಂಪರೆ ಪ್ರದರ್ಶನ
ನವದೆಹಲಿ: ರಾಷ್ಟ್ರದ 72ನೇ ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರಪಂಚದ ಜನಪ್ರಿಯ ಸರ್ಚ್ ಎಂಜಿನ್ ಗೂಗಲ್ ಸಹ ಗಣರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದ್ದು, ದೇಶದ ಕಲೆ ಮತ್ತು ವಾಸ್ತುಶಿಲ್ಪ, ಸಾಂಸ್ಕೃತಿಕ ಮತ್ತು ಏಕತೆಯ ಪರಂಪರೆಯನ್ನು ಡೂಡಲ್‌ನಲ್ಲಿ ಗೂಗಲ್ ಕಟ್ಟಿಕೊಟ್ಟಿದೆ. ಡೂಡಲ್ ಕಲಾಕೃತಿಯಲ್ಲಿ ಕೆಂಪು ಕೋಟೆ ಸೇರಿದಂತೆ ದೇಶದ ಐತಿಹಾಸಿಕ ಕಟ್ಟಡಗಳು, ರಾಷ್ಟ್ರಧ್ವಜದಲ್ಲಿರುವ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ಮುಂಭಾಗದಲ್ಲಿ ದೇಶದ ವಿವಿಧ ಸಂಸ್ಕೃತಿಯ ಜನರನ್ನು ಪ್ರದರ್ಶಿಸುತ್ತಿದೆ. ಗೂಗಲ್ ಎಂಬ ಪದದ …
Read More »ಸಾಮಾಜಿಕ ಅಂತರ, ಚಿಕ್ಕ ರೂಟ್ನಲ್ಲಿ 72ನೇ ಗಣರಾಜ್ಯೋತ್ಸವ ಪರೇಡ್; ರಫೇಲ್ ಪ್ರಮುಖ ಆಕರ್ಷಣೆ
ನವದೆಹಲಿ: ಇಂದು ಭಾರತದ 72ನೇ ಗಣರಾಜ್ಯೋತ್ಸವ. ಈ ಬಾರಿ ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಗಣರಾಜ್ಯೋತ್ಸವ ಸಮಾರಂಭವನ್ನ ಸಂಕ್ಷಿಪ್ತವಾಗಿ ನಡೆಸಲಾಗ್ತಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಬೆಳಗ್ಗೆ 11.25 ಕ್ಕೆ ಮುಕ್ತಾಯಗೊಳ್ಳಲಿದೆ. ರಾಜ್ಪಥ್ನಲ್ಲಿ ನಡೆಯಲಿರುವ ಪಥಸಂಚಲನದ ಮಾರ್ಗವನ್ನ ಕಡಿತಗೊಳಿಸಲಾಗಿದೆ. ಹಾಗೇ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಇಲ್ಲ. ಕಡಿಮೆ ಸಂಖ್ಯೆಯ ಪ್ರೇಕ್ಷಕರು ಮಾತ್ರ ಪರೇಡ್ ವೀಕ್ಷಿಸಲಿದ್ದಾರೆ. 15 ವರ್ಷದೊಳಗಿನ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬರಲು ಅವಕಾಶ …
Read More »ಮುಖ್ಯ ಅತಿಥಿಯಿಲ್ಲದೆ ಗಣರಾಜ್ಯೋತ್ಸ, 50 ವರ್ಷಗಳಲ್ಲಿ ಇದೇ ಮೊದಲು
ನವದೆಹಲಿ, ಜ.26- ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಇಲ್ಲದೇ ಆಚರಿಸಲ್ಪಟ್ಟಿರುವ ಪ್ರಥಮ ಗಣರಾಜ್ಯೋತ್ಸವ ಇದಾಗಿದೆ. ವಿಶ್ವದ್ಯಾಂತ ಕೊರೊನಾ ಸಾಂಕ್ರಾಮಿಕ ವ್ಯಾಪಿಸಿರುವ ಕಾರಣ ಅತಿಥಿಯ ಅನುಪಸ್ಥಿತಿಯಲ್ಲಿ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು. 50 ವರ್ಷಗಳಲ್ಲಿ ಮೊಟ್ಟಮೊದಲ ಬಾರಿಗೆ ಇಂತಹ ಅನಿವಾರ್ಯತೆ ಕಂಡುಬಂತು. ಯುಕೆ ಪ್ರಧಾನ ಮಂತ್ರಿ ಬೋರಿಸ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕ ಮಹಾಮಾರಿ ಕಾರಣದಿಂದ ಅವರ ಅನುಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಧ್ವಜ ಹಾರಿಸುವ …
Read More »ಕೆಂಪುಕೋಟೆಯ ಸಮೀಪ ತಲುಪಿದ ರೈತರ ಟ್ರ್ಯಾಕ್ಟರ್ ರ‍್ಯಾಲಿ
ಹೊಸದಿಲ್ಲಿ,ಜ.26: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂಬ ನಿಟ್ಟಿನಲ್ಲಿ ರೈತರು ಗಣರಾಜ್ಯೋತ್ಸವ ದಿನವಾದ ಇಂದು ರಾಷ್ಟ್ರ ರಾಜಧಾನಿ ದಿಲ್ಲಿಗೆ ಟ್ರ್ಯಾಕ್ಟರ್ ರ‍್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಪರಿಸ್ಥಿತಿಯು ಕೈ ಮೀರುವ ಹಂತದಲ್ಲಿದ್ದು, ಪೊಲೀಸರು ನಿರಂತರ ಅಶ್ರುವಾಯು ಸಿಡಿಸುತ್ತಿದ್ದಾರೆ ಹಾಗೂ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಈ ನಡುವೆ ರೈತರು ಭಾರತೀಯ ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಬಳಿ ಜಮಾವಣೆಗೊಂಡು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತಿದ್ದಾರೆ ಎಂದುವರದಿ ಮಾಡಿದೆ. ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಬಳಿ ಇದೀಗ …
Read More »ಕೊರೊನಾ ಅವಧಿಯಲ್ಲಿ ಭಾರತದ 100 ಬಿಲಿಯನೇರ್‌ಗಳ ಆದಾಯ ಏರಿಕೆ
ನವದೆಹಲಿ : ವಿಶ್ವಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ವ್ಯಾಪಿಸಿ ಜಾಗತಿಕ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟು ಮಾಡಿದೆ. ಈ ಮಹಾಮಾರಿ ಪ್ರಭಾವ ನಮ್ಮ ದೇಶದ ಆರ್ಥಿಕತೆ ಮೇಲೂ ಆಗಿದೆ. ಆದರೆ, ನಮ್ಮ ಶತಕೋಟಿ ಶ್ರೀಮಂತರ ಆರ್ಥಿಕ ಸ್ಥಿತಿ ಮೇಲೆ ಮಾತ್ರ ಕಿಂಚಿತ್ತು ಪರಿಣಾಮ ಆಗಿಲ್ಲ ಎಂಬುದು ಆಶ್ಚಯಕರ ಸಂಗತಿ! ಕೋವಿಡ್-19 ಸಾಂಕ್ರಾಮಿಕ ರೋಗ ವಿಶ್ವಕ್ಕೆ ಅಪ್ಪಳಿಸಿದ ಪರಿಣಾಮ ಪ್ರಪಂಚಾವೇ ಲಾಕ್‍ಡೌನ್ ಆಗಿತ್ತು. ಜÁಗತಿಕ ಆರ್ಥಿಕ ಸ್ಥಿತಿ ಸ್ತಬ್ಧವಾಗಿತ್ತು. ಬೃಹತ್ …
Read More »ವಿದ್ಯಾವಂತ ಪೋಷಕರು ಮೂಢನಂಬಿಕೆಗೆ ಬಲಿಯಾಗಿ ತಮ್ಮ ಇಬ್ಬರು ಮಕ್ಕಳನ ಹತ್ಯೆ
ಕೋಲಾರ: ವಿದ್ಯಾವಂತ ಪೋಷಕರು ಮೂಢನಂಬಿಕೆಗೆ ಬಲಿಯಾಗಿ ತಮ್ಮ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದ ಅಲೈಕ್ಯ(27) ಮತ್ತು ಬಿಬಿಎ ಕಲಿಯುತ್ತಿದ್ದ ಸಾಯಿದಿವ್ಯ (22) ಹೆತ್ತವರಿಂದಲೇ ಹತ್ಯೆಯಾದವರು. ಸಾಯಿದಿವ್ಯ ಎ.ಆರ್‍ರೆಹಮಾನ್ ಮ್ಯೂಸಿಕ್ ಅಕಾಡೆಮಿ ವಿದ್ಯಾರ್ಥಿ ಕೂಡಾ ಆಗಿದ್ದಾರೆ. ತಂದೆ ಪುರುಷೋತ್ತಮ್ ನಾಯ್ಡು ಸರ್ಕಾರಿ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ತಾಯಿ ಪದ್ಮಜಾ ಅವರು ಖಾಸಗಿ ಕಾಲೇಜಿನಲ್ಲಿ ಉಪ …
Read More »ನಾಳೆ ಮಾಧುಸ್ವಾಮಿ, ಆನಂದ್ ಸಿಂಗ್ ರಾಜೀನಾಮೆ?
ಬೆಂಗಳೂರು: ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಖಾತೆ ಕಿತ್ತಾಟ ಮುಂದುವರಿದಿದೆ. ಈಗ ಕ್ಯಾಬಿನೆಟ್‌ನಲ್ಲಿ ಪ್ರಭಾವಿಗಳಾಗಿರುವ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 9 ದಿನದಲ್ಲಿ ಮೂರನೇ ಬಾರಿ ನಡೆದಿರುವ ಖಾತೆಗಳ ಪುನರ್ ಹಂಚಿಕೆಯಲ್ಲಿ ಸಚಿವರಾದ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರ ಖಾತೆ ಮತ್ತೆ ಬದಲಾಗಿದೆ. ಅದರಲ್ಲೂ ಸಚಿವ ಮಾಧುಸ್ವಾಮಿಯ ಖಾತೆಗಳಲ್ಲಿ ಸತತ ಮೂರನೇ ಬಾರಿ ಬದಲಾವಣೆಯಾಗಿದೆ. ಕಾನೂನು ಮತ್ತು …
Read More »ಮಾರ್ಚ್ ನಂತರ ಶಾಸಕ ಮಹೇಶ್ ಕುಮಠಳ್ಳಿ ಸಚಿವರಾಗ್ತಾರೆ : ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …
Read More »
Laxmi News 24×7