Breaking News

ರಾಜಕೀಯ

ಆಹಾರ ಮತ್ತು ಪಾನೀಯ ವಿಭಾಗದಲ್ಲಿ ‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್​ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್​​​​-4 ಬ್ರ್ಯಾಂಡ್​ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್​​-100 ಬ್ರ್ಯಾಂಡ್​ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್​ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್​ ಫೈನಾನ್ಸ್​ ಸಂಸ್ಥೆ ಲಂಡನ್​ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್​ಗಳ ಪಟ್ಟಿಗೆ ಸೇರಿದೆ. ದೇಶದ ಆಹಾರ …

Read More »

ಪೆಟ್ರೋಲ್ ಸುರಿದು ಎಟಿಎಂ ದರೋಡೆಗೆ ಯತ್ನ

ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ.‌ ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್‌ ಸರ್ಕ್ಯೂಟ್​ನಿಂದ …

Read More »

ಪ್ರಾಡ ಕೊಲ್ಹಾಪುರಿ ಪಾದರಕ್ಷೆಗೆ GI ಟ್ಯಾಗ್ ಇದ್ದರೆ ಸಾಲದು:ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಾಡ ಕೊಲ್ಹಾಪುರಿ ಪಾದರಕ್ಷೆಗಳಿಗೆ ಕೇವಲ ಜಿಐ(ಜಿಯಾಗ್ರಾಫಿಕಲ್ ಇಂಡಿಕೇಷನ್) ಟ್ಯಾಗ್ ಇದ್ದರೆ ಸಾಲದು, ಜಾಗತಿಕ ವೇದಿಕೆ ನೀಡುವುದು ನಮ್ಮ ಜವಾಬ್ದಾರಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಫ್ಯಾಷನ್ ಸಂಸ್ಥೆಗಳು ನಮ್ಮ ವಿನ್ಯಾಸಗಳನ್ನು ಅಳವಡಿಸಿಕೊಂಡಾಗ, ಅವರ ಹೆಸರುಗಳು, ಕೆಲಸ ಮತ್ತು ಪರಂಪರೆಯನ್ನು ಪ್ರದರ್ಶಿಸಬೇಕು. ಬದಿಗಿಡಬಾರದು. ಜಿಐ ಟ್ಯಾಗ್ ಅವರಿಗೆ ಕಾನೂನು ಹಕ್ಕುಗಳನ್ನು ಮಾತ್ರ ನೀಡುತ್ತದೆ. ಅವರಿಗೆ ಜಾಗತಿಕ ವೇದಿಕೆಗಳನ್ನು ನೀಡುವುದು ಈಗ …

Read More »

ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದಿರುವುದು

ಶಿವಮೊಗ್ಗ: ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರ ಗ್ರಾಮದ ತೋಟದಕೊಪ್ಪ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಮಾಲೀಕ ನವೀನ್ ಎಂಬವರು ಹೊಸನಗರ ಠಾಣೆಗೆ ದೂರು ನೀಡಿದ್ದಾರೆ. “ಎಂದಿನಂತೆ ನಮ್ಮ ದನಗಳನ್ನು ಮೇಯಲು ಬಿಟ್ಟಿದ್ದೆವು. ಶನಿವಾರ ಸಂಜೆ ಊರಿನ ಜನರು ಫೋನ್ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿದೆ ಎಂದು ವಿಷಯ ತಿಳಿಸಿದರು. ತಕ್ಷಣ ಸ್ಥಳಕ್ಕೆ ಹೋಗಿ ನೋಡಿದಾಗ 9 ವರ್ಷ …

Read More »

ಬಿಬಿಎಂಪಿ ಕಸದ ಲಾರಿಯಲ್ಲಿ ಶವ ಇಟ್ಟು ಪರಾರಿ!

ಬೆಂಗಳೂರು : ಮಹಿಳೆಯೊಬ್ಬರನ್ನು ಹತ್ಯೆಗೈದು ಆಕೆಯ ಮೃತದೇಹವನ್ನು ಕಸದ ಲಾರಿಯಲ್ಲಿ ಹಾಕಿರುವ ಬೆಚ್ಚಿಬೀಳಿಸುವ ಘಟನೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯ ಸ್ಕೇಟಿಂಗ್‌ ಗ್ರೌಂಡ್ ಬಳಿ ನಡೆದಿದೆ. ಸುಮಾರು 30-35 ವಯಸ್ಸಿನ ಮಹಿಳೆಯ ಮೃತದೇಹ ಮೂಟೆಕಟ್ಟಿರುವ ಸ್ಥಿತಿಯಲ್ಲಿ ಬಿಬಿಎಂಪಿಯ ಕಸದ ಲಾರಿಯಲ್ಲಿ ಪತ್ತೆಯಾಗಿದೆ. ಶನಿವಾರ ತಡರಾತ್ರಿ ಆಟೋ ರಿಕ್ಷಾದಲ್ಲಿ ಮೃತದೇಹ ತಂದಿರುವ ದುಷ್ಕರ್ಮಿಗಳು ಕಸದ ಲಾರಿಯಲ್ಲಿರಿಸಿ ಪರಾರಿ ಆಗಿರುವ ಕುರಿತು ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಮೃತಳ ಗುರುತು ಇನ್ನೂ …

Read More »

ಮೂವರು ಐಪಿಎಸ್​ ಆಧಿಕಾರಿಗಳ ಅಮಾನತು ಅಂಗೀಕರಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ …

Read More »

ಎಸಿ ಬೋಗಿಗಳಲ್ಲಿ ಶ್ರೀಮಂತರನ್ನೇ ಟಾರ್ಗೆಟ್​ ಮಾಡಿ ಕಳ್ಳತನ

ಹಾಸನ: ರೈಲುಗಳ ಎಸಿ ಬೋಗಿಗಳಲ್ಲಿ ಪ್ರಯಾಣಿಕರ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ​ ಕಳ್ಳನನ್ನು ಬಂಧಿಸಿರುವ ಅರಸೀಕೆರೆ ರೈಲ್ವೆ ಪೊಲೀಸರು, ಆರೋಪಿಯಿಂದ 22.75 ಲಕ್ಷ ಮೌಲ್ಯದ 218 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಜಿತೇಂದ್ರಕುಮಾರ ಚಾವ್ಲಾ (37) ಬಂಧಿತ ಆರೋಪಿ. ಈತನ ಮೇಲೆ ಮಹಾರಾಷ್ಟ್ರ, ತಮಿಳುನಾಡು ಹಾಗೂ ಉತ್ತರಾಖಂಡ ರೈಲ್ವೆ ಪೊಲೀಸ್​ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸುಮಾರು 13 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿಯು ಪೊಲೀಸ್ …

Read More »

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ:CM

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ: ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿ.ಎಂ ಸೂಚನೆ ಬೆಂಗಳೂರು ಜೂ 29: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ …

Read More »

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ …

Read More »

ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್…

ಮನೆ ಬಿಟ್ಟು ಹೊಗಿದ್ದ ವ್ಯಕ್ತಿ 38 ವರ್ಷದ ಬಳಿಕ ಮನೆಗೆ ವಾಪಸ್.!!! 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋಗಿದ್ದ ಚಂದ್ರಶೇಖರ್… ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕು, ಗೊರಬಾಳ ಗ್ರಾಮದಲ್ಲಿ ಅತ್ಯಂತ ಅಪರೂಪದ ಘಟನೆಗೆ ಇಂದು ಸಾಕ್ಷಿಯಾಯಿತು. 38 ವರ್ಷಗಳ ಹಿಂದೆ, ತನ್ನ 18ನೇ ವಯಸ್ಸಿನಲ್ಲಿ ಮನೆ ಬಿಟ್ಟು ಹೋದ ಚಂದ್ರಶೇಖರ್ ರಾಠೋಡ್, ಇದೀಗ ತಮ್ಮ ಸ್ವಗ್ರಾಮ ಗೊರಬಾಳಕ್ಕೆ ಮರಳಿ ಬಂದಿದ್ದಾರೆ. ಅಂದು ಏನೋ ಕಾರಣಗಳಿಂದ ಮನೆಯನ್ನೇ ಬಿಟ್ಟು ಹೋಗಿದ್ದ ಚಂದ್ರಶೇಖರ್, …

Read More »