ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು …
Read More »ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೆ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ಪ್ರದೇಶಾಭಿವೃದ್ದಿ ಇಲಾಖೆಯಿಂದ (ನಂಜುಂಡಪ್ಪ ಆಯೋಗ) 95 ಲಕ್ಷ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ …
Read More »ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ : ಸತೀಶ್ ಜಾರಕಿಹೊಳಿಯ
ಶಿರಸಿ: ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ. ಇದರಲ್ಲಿ ಅತ್ಯಂತ ಮುಖ್ಯವಾದ ಪಾತ್ರ ಕಾರ್ಯಕರ್ತರದ್ದಾಗಿರುತ್ತದೆ. ವಿಧಾನಸಭೆ, ಲೋಕಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಯಾವ ಚುನಾವಣೆಯೇ ಆಗಿರಲಿ ನಾವೆಲ್ಲ ಒಗ್ಗೂಡಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತೋಟಗಾರರ ಕಲ್ಯಾಣಮಂಟಪದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ …
Read More »ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …
Read More »ಹೊಸ ಕಾರ ಬರ್ತಿದೆ ಇದು ಹಾರುತ್ತೆ ಮತ್ತೆ ಓಡುತ್ತೆ ರಸ್ತೆ ಮೇಲೆ..
ಆಂಸ್ಟರ್ಡ್ಯಾಮ್: ಗುಜರಾತಿನಲ್ಲಿ ಘಟಕ ತೆರೆದಿರುವ ನೆದರ್‌ಲ್ಯಾಂಡ್‌ನ ಪಾಲ್ -ವಿ ಕಂಪನಿಯ ಹಾರುವ ಕಾರು ಮುಂದಿನ ಎರಡು ವರ್ಷದಲ್ಲಿ ರಸ್ತೆಯಲ್ಲಿ ಇಳಿಯಲಿದೆ. ಈ ವರ್ಷದ ಫೆಬ್ರವರಿಯಿಂದ ವೇಗ, ಬ್ರೇಕ್, ಎಮಿಷನ್, ಶಬ್ಧಮಾಲಿನ್ಯ ಸೇರಿದಂತೆ ವಿವಿಧ ಡ್ರೈವಿಂಗ್ ಪರೀಕ್ಷೆಗಳನ್ನು ಕಾರು ಎದುರಿಸಿತ್ತು. ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮೈಕ್ ಸ್ಟೇಕಲನ್‌ಬರ್ಗ್ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆಗಳ ಜೊತೆ ಹಲವು ವರ್ಷಗಳ ಕಾಲ ಸಹಕಾರ ನೀಡಿ ನಾವು ಈ ಮೈಲಿಗಲ್ಲನ್ನು ಸೃಷ್ಟಿಸಿದ್ದೇವೆ. ನೆಲ ಮತ್ತು ಆಕಾಶದಲ್ಲಿ …
Read More »ಸಿಎಂ B.S.Y.ವಿರುದ್ಧM.T.B.ಗರಂ.!
ಬೆಂಗಳೂರು, ನ.27- ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡುವುದಾಗಿ ಹೇಳುತ್ತಾರೆ. ಆದರೆ, ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಾಗಲೆಲ್ಲಾ ಮಂತ್ರಿ ಮಾಡ್ತೀನಿ ಅಂತಾರೆ. ಆದರೆ, ಇನ್ನೂ ದೃಢ ನಿರ್ಧಾರ ಪ್ರಕಟಿಸಿಲ್ಲ …
Read More »B.S.Y.ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Read More »ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ.
ಬೆಂಗಳೂರು: ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಿಗ್ ಗಿಫ್ಟ್ ನೀಡಲಿದ್ದಾರೆ. ಮೊನ್ನೆಯಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಬಂಪರ್ ಗಿಫ್ಟ್ ನೀಡಲಿದ್ದಾರೆ. ಲಿಂಗಾಯತ ಓಲೈಕೆಗೆ ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ …
Read More »ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …
Read More »
Laxmi News 24×7