ಬೆಂಗಳೂರು: ಸುಳ್ಳು ಹುಟ್ಟಿದ್ದೇ ಆರ್ ಎಸ್ ಎಸ್ ನಿಂದ, ಸುಳ್ಳು ಹೇಳುವುದೇ ಆರ್ ಎಸ್‍ಎಸ್‍ನ ಅಜೆಂಡವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್‍ಎಸ್‍ನ ಪಾತ್ರವೇನಿದೆ ಅವರ ಬಲಿದಾನವೇನಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನೆಹರು ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಆರ್ ಎಸ್‍ಎಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು. ನೆಹರು ನಿಧನರಾದಾಗ ಇಡೀ ವಿಶ್ವವೇ ಸಂತಾಪ ವ್ಯಕ್ತಪಡಿಸಿತ್ತು. ನ್ಯೂಯಾರ್ಕ್ ಟೈಮ್ಸ್ ಆಧುನಿಕ …
Read More »ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ
ಮುಂಬೈ, :- ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಬಳಸಬೇಕು. ದೇವರ ಪ್ರತಿಮೆ, ಪವಿತ್ರ ಗ್ರಂಥಗಳು ಸೇರಿದಂತೆ ಯಾವುದೇ ವಸ್ತುಗಳನ್ನು ಮುಟ್ಟುವಂತಿಲ್ಲ. ತೀರ್ಥ, ಪ್ರಸಾದ ವಿತರಣೆಯನ್ನು ನಿಷೇಸಲಾಗಿದೆ. ಪಾದರಕ್ಷೆಗಳನ್ನು ಧಾರ್ಮಿಕ ಕೇಂದ್ರಗಳಿಂದ …
Read More »ಬಿಹಾರ ಎಫೆಕ್ಟ್ – ದೊಡ್ಡ ಪಕ್ಷಗಳ ಜೊತೆಗಿನ ಮೈತ್ರಿಗೆ ನೋ ಎಂದ ಅಖಿಲೇಶ್ ಯಾದವ್
ಲಕ್ನೋ: ರಾಷ್ಟ್ರೀಯ ಪಕ್ಷಗಳು ಸೇರಿದಂತೆ ದೊಡ್ಡವರ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಾದೇಶಿಕ ಪಕ್ಷವಾಗಿರುವ ಬಿಎಸ್‍ಪಿ ಜೊತೆಗೂ ತಾವು ಹೋಗಲ್ಲ ಎಂಬುದನ್ನ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ನೇತೃತ್ವದ ಪ್ರಗತಿಶೀಲ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಚುನಾವಣೆಯಲ್ಲಿ ಜಸ್ವಂತ್ ನಗರದ ವಿಧಾನಸಭಾ ಕ್ಷೇತ್ರಗಳನ್ನ ಬಿಟ್ಟುಕೊಡಲು …
Read More »ಕೆಎಎಸ್ ಅಧಿಕಾರಿ ಸುಧಾ ಅವರ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ
ಬೆಂಗಳೂರು,ನ.14- ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಡಾ.ಜಿ.ಸುಧಾ ಅವರ ಅಕ್ರಮ ಆಸ್ತಿ ಮತ್ತಷ್ಟು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ದೊರೆತಿರುವ ಚಿನ್ನ, ಹಣ ಹಾಗೂ ಆಸ್ತಿ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಪಟ್ಟಿ ಮಾಡಿ ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ನ.7ರಂದು ಕೆಎಎಸ್ ಅಧಿಕಾರಿ ಸುಧಾ ಅವರ ಮನೆ ಹಾಗೂ ಪರಿಚಯಸ್ಥರ ಮನೆಗಳು ಸೇರಿದಂತೆ ಏಳು ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ ಆಸ್ತಿಗೆ ಸಂಬಂಧಪಟ್ಟ …
Read More »ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ
ಬೆಂಗಳೂರು, ನ.14- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಲ್ಲಿ ಯಾವುದೇ ಪಕ್ಷ ಅಥವಾ ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸಿಲ್ಲ. ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ …
Read More »ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧದ 570ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ
ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿದ್ದ 570 ಕ್ರಿಮಿನಲ್ ಪ್ರಕರಣ ಬೆಂಗಳೂರು, ನ.13: ಸಚಿವರು, ಶಾಸಕರು, ಜನಪ್ರತಿನಿಧಿಗಳ ವಿರುದ್ಧದ 570 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸಚಿವ ಸಂಪುಟದ ನಿರ್ಣಯ ಪ್ರಶ್ನಿಸಿ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಡಿ.9ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ ಅರ್ಜಿದಾರರ …
Read More »ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ …
Read More »ಹೈಕಮಾಂಡ್ ನಡೆ ತೀವ್ರ ಕುತೂಹಲ ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ? ಸಿಎಂ ದೆಹಲಿಗೆ ತೆರಳುವ ಸಾಧ್ಯತೆ
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಡೆ ತೀವ್ರ ಕುತೂಹಲ ಹುಟ್ಟಿಸಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ ಗೊತ್ತಾಗಲಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹೈಕಮಾಂಡ್ ಮನಸ್ಸು ಮಾಡಿದ್ರೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಹೈಕಮಾಂಡ್ ಜೊತೆ ಮುಖಾಮುಖಿಯಾಗಿ ಭೇಟಿಯಾಗಿ ಸಿಎಂ ಮಾತುಕತೆ ನಡೆಸಲಿದ್ದಾರೆ. ಒಂದು ವೇಳೆ ಹೈಕಮಾಂಡ್ ಈಗ ಬೇಡ ಅಂದ್ರೆ ಡಿಸೆಂಬರ್ ಗೆ ಮುಂದೂಡಿಕೆಯಾಗುವ ಸಾಧ್ಯತೆಗಳು ಕೂಡ ಇವೆ. ಅಷ್ಟೇ ಅಲ್ಲ ಸಿಎಂ ದೆಹಲಿ …
Read More »ರವಿಬೆಳೆಗೆರೆ ಅವರ ಅಭಿನಯದ ಮಿಂಚು ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ
ಬೆಂಗಳೂರು, ನ.13- ಕಾದಂಬರಿಕಾರ, ಲೇಖಕ, ನಿರೂಪಕ ಹೀಗೆ ನಾನಾ ಮಜಲುಗಳಲ್ಲಿ ಗುರುತಿಸಿಕೊಂಡಿದ್ದ ರವಿಬೆಳೆಗೆರೆಯವರ ಹೆಜ್ಜೆ ಗುರುತುಗಳು ಬಣ್ಣದ ಲೋಕದಲ್ಲೂ ಮೂಡಿವೆ. ಸಿನಿಮಾಲೋಕ ಹಾಗೂ ಸಿನಿಮಂದಿ ಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ರವಿಬೆಳೆಗೆರೆ ಅವರು ರವಿಶ್ರೀವಾತ್ಸ ನಿರ್ದೇಶನದ ಗಂಡ ಹೆಂಡತಿ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಗಮನ ಸೆಳೆದರು. ನಂತರ ಗುರುದೇಶಪಾಂಡೆ ನಿರ್ದೇಶಿಸಿದ್ದ ವಾರಸ್ದಾರ, ಶಿವರಾಜ್‍ಕುಮಾರ್ ಅಭಿನಯದ ಮಾದೇಶ, ಡೆಡ್ಲಿ ಸೋಮ ಚಿತ್ರಗಳಲ್ಲೂ ತಮ್ಮ ಅಭಿನಯದ ಮಿಂಚು ಹರಿಸಿದ್ದರು. ಡೆಡ್ಲಿ ಸೋಮ ಸಿನಿಮಾಕ್ಕೆ ರವಿಬೆಳೆಗೆರೆ …
Read More »ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ
ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ. ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …
Read More »
Laxmi News 24×7