ನವದೆಹಲಿ: ಜನವರಿ 1, 2021ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, 2017ಕ್ಕಿಂತ ಹಿಂದಿನ ಹಾಗೂ ನಂತರದ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಲಾಗಿದೆ. 2021ರ ಜನವರಿಯಿಂದ ಇದು ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. 2017ರ ಡಿಸೆಂಬರ್ 1 ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ …
Read More »ಸಿದ್ದರಾಮಯ್ಯನಾಯಕತ್ವಕ್ಕೆ ಕಾಂಗ್ರೆಸ್ಸಿನಲ್ಲಿಬೆಲೆಯಿಲ್ಲ: ನಳಿನ್ ಕುಮಾರ್
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಅನ್ನಿಸಿದೆ. ಹೀಗಾಗಿ ಮೂಲೆ ಗುಂಪಾಗುವ ಭಯವಿದೆ. ಅದಕ್ಕೋಸ್ಕರ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ 10 ಜಿಲ್ಲೆಗಳ ಮೂರು ವಿಭಾಗದ ತರಬೇತಿ ಶಿಬಿರ ನಡೆಯುತ್ತಿದೆ. ಶಿರಾ ಹಾಗೂ ಆರ್‍ಆರ್‍ನಗರ, ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ …
Read More »ಅತ್ಯಾಚಾರ ಎಸಗಿ, ಕೊಲೆದೇಹವನ್ನು ಕಾಡಿನಲ್ಲಿ ಎಸೆದು ಪರಾರಿ
ಹಾವೇರಿ: ಮಹಿಳೆಯನ್ನು ಬೈಕ್‍ನಲ್ಲಿ ಕರೆ ತಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ, ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. …
Read More »ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್
ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಮಧ್ಯಂತರ ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಅರ್ನಾಬ್ ರನ್ನು ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಕರೆದೊಯ್ಯಲಾಗಿದೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೊನಾ ಕಾರಣದಿಂದಾಗಿ ಅಲಿಭಾಗ್ ನಲ್ಲಿರುವ …
Read More »ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಸೆಂಥಿಲ್ ಮೂಲತ: ತಮಿಳುನಾಡಿನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ವಿರುದ್ಧ ಸಿಡಿದೆದ್ದು ಸೆಂಥಿಲ್ 2019ರ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಿದ್ದರು. ಸಿಎಎ ಹಾಗೂ …
Read More »ವಿನಯ್ ಕುಲಕರ್ಣಿ ಬಂಧನಕ್ಕೆ ಪ್ರಹ್ಲಾದ್ ಜೋಶಿ ಒತ್ತಡವೇ ಕಾರಣ: ಸಿದ್ದು
ಶಿವಮೊಗ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಡವೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ಅವರ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಡವಿದೆ. ವಿನಯ್ ಕುಲಕರ್ಣಿ ಪ್ರಹ್ಲಾದ್ ಜೋಶಿ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಬಂಧನಕ್ಕೆ ಕಾರಣ ಎಂದು ಆರೋಪಿಸಿದರು. …
Read More »ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …
Read More »ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …
Read More »ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ
ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
Read More »ಸೋದರತ್ತೆಯೊಂದಿಗೆ ಅಕ್ರಮ ಸಂಬಂಧ – ಯುವಕನನ್ನು ಕೊಂದು ನೇಣು ಹಾಕಿದ ಪತಿ
ಚಾಮರಾಜನಗರ: ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಕಂಡಯ್ಯನಪಾಲ್ಯದ ಪ್ರಕಾಶ್ (30) ಕೊಲೆಯಾದ ವ್ಯಕ್ತಿ. ಪ್ರಕಾಶ್ ವಾರಿಗೆಯಲ್ಲಿ ಸೋದರತ್ತೆಯಾಗುವ ಶಿವನ ಸಮುದ್ರದ ಲಕ್ಷ್ಮೀ ಎಂಬಾಕೆಯೊಂದಿಗೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ಪತಿ ಮನೆಯವರಿಗೆ ತಿಳಿದು 5 ದಿನಗಳ ಹಿಂದೆ ತಮ್ಮ ಕೋಮಿನ ಪಂಜಾಯ್ತಿ ಕರೆದು ತೀರ್ಮಾನ ಮಾಡಿದ್ದರು ಎಂದು ತಿಳಿದು …
Read More »
Laxmi News 24×7