Breaking News

ರಾಜಕೀಯ

ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …

Read More »

ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ

ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. …

Read More »

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …

Read More »

25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ

ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …

Read More »

Big Breaking ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಬಗ್ಗೆ ಹೇಳಿದ್ದೇನು ಗೊತ್ತಾ exclusive Byte

ಮಾಜಿ ಸಚಿವರು ಆಗಿರುವ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ತೀವ್ರ ವಾಗ್ದಾಳಿ ನಡೆಸಿದ್ದು, ಅವರಿಗೆ ಇದ್ದಕ್ಕಿದ್ದಂತೆ ಬಿಜೆಪಿ ಮೇಲೆ ಪ್ರೀತಿ ಬಂದಿದೆ, ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹೊರಗಿಟ್ಟು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈಯ್ದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿ, ಪ್ರಕಾಶ ಹುಕ್ಕೇರಿ ಈಗಾಗಲೇ ಬಿಜೆಪಿ ಪರ ವಾಲಿ ಮಾತನಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಗಂಭೀರ …

Read More »

ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ಗೋಕಾಕ: ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಸ್ಪರ್ಧೆ ಮಾಡುವುದಾಗಿಯೂ ಇಂಟ್ರೆಸ್ಟ್ ತೋರಿಲ್ಲ. ಅವರು ಸ್ಪರ್ಧೆ ಮಾಡಲ್ಲ ಅಂತಾ ಹೇಳಿದರು. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದಿಂದ 113 …

Read More »

ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ..

ಮೈಸೂರು: ಇವರು ಯಾರೂ ವಿಲನ್​ ಅಲ್ಲ.. ಯಡಿಯೂರಪ್ಪನವರೇ ವಿಲನ್ ಎಂದು ಮಾತಿನ ಭರದಲ್ಲಿ ‘ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ.. ಹೀರೋ ಎಂದು ಮಾಜಿ ಸಚಿವ S.A. ರಾಮದಾಸ್ ಅವರನ್ನು ತಿದ್ದಲು ಮುಂದಾದರು. ತಕ್ಷಣ ಎಚ್ಚೆತ್ತ ಸೋಮಶೇಖರ್​ ಅದು ವಿಲನ್ ಅಲ್ಲ ಹೀರೋ ಎಂದು ಸರಿಪಡಿಸಿಕೊಂಡರು! ನಗರದಲ್ಲಿ ನಡೆದ ದಸರಾ …

Read More »

. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ.

ಬೆಳಗಾವಿ: ದಿ. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ. ಅವರ ಮನೆಯವರ ಪರವಾಗಿ ನಾನು ಪ್ರಚಾರ ಮಾಡುವೆ ಎಂದು ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ ಬಾಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮಾತು ಕೇಳಿಬಂದಿದೆ. .. ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ ನಾನು ಅವರ ಪರವಾಗಿ ಪ್ರಚಾರ ಮಾಡಿ ನನ್ನ ಮಗನ ರೀತಿ ಅವರನ್ನು ಗೆಲ್ಲಿಸುತ್ತೇ‌ನೆ. ನನ್ನ …

Read More »

ಸಾರಾಯಿ ಸೇವಿಸಬೇಡ ಎಂದು ಪತ್ನಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಪತಿ ಆತ್ಮಹತ್ಯೆ

ಬೆಳಗಾವಿ: ಸಾರಾಯಿ ಸೇವಿಸಬೇಡ ಎಂದು ಪತ್ನಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಶಹಾಪೂರದಲ್ಲಿ ಇಂದು ನಡೆದಿದೆ. ರಾಹುಲ್ ಸಹದೇವ ಸೈನೊಚೆ(30) ಮೃತ ವ್ಯಕ್ತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಮದ್ಯ ವ್ಯಸನಿಗೆ ಅಂಟುಕೊಂಡಿದ್ದ.  ದಸರಾ ಹಬ್ಬ ಹಿನ್ನೆಲೆ ದಿನಸಿಗಾಗಿ  ಪತ್ನಿ  ಹಣ ಬೇಡಿದ್ದು,  ಸಾರಾಯಿ ಸೇವಿಸದಂತೆ ಪತ್ನಿ ಮನವಿ ಮಾಡಿದ್ದಾಳೆ. ಈ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು ಆತ ಎರಡು ದಿನದಿಂದ ಮನೆ …

Read More »

ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ

ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …

Read More »