Breaking News

ರಾಜಕೀಯ

ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ …

Read More »

ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಬೆಂಬಲಿಸಿ: ಶಾಸಕ ಸತೀಶ್ ಜಾರಕಿಹೊಳಿ

ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ …

Read More »

ಯೋಗ, ಯೋಗ್ಯತೆ ಇರುವ ಯಾರು ಬೇಕಾದರೂ ಸಿಎಂ ಆಗಬಹುದು: ಸಿ.ಟಿ.ರವಿ

ಕೊಪ್ಪಳ: ಸಮಗ್ರ ಕರ್ನಾಟಕದ ಯೋಗ ಯೋಗ್ಯತೆ ಇದ್ದವರು ಯಾರು ಬೇಕಾದರು ಸಿಎಂ ಆಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಈ ಮಾತು ಆಡಲು ವಿಶ್ವಾಸ ಬಂದಿದ್ದರೆ ಅದು ಕರ್ನಾಟಕ ಏಕೀಕರಣದಿಂದ ಏಕೀಕರಣ ಆಶಯಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು. ಯತ್ನಾಳರಷ್ಟು ಬುದ್ಧಿವಂತ ನಾನಲ್ಲ, ನಾನು ಪಕ್ಷದ, ಜನರ ನೆಲೆಯಲ್ಲಿ ಕೆಲಸ ಮಾಡುವವನು. ಸಮಗ್ರ …

Read More »

ಕಾರಣ ಕೊಡದೇ ಯತ್ನಾಳರನ್ನ ಪಕ್ಷದಿಂದ ಉಚ್ಛಾಟಿಸಬೇಕು: ಕೆ.ಎಸ್.ಈಶ್ವರಪ್ಪ

ಕೊಪ್ಪಳ: ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೆಲವರು ಬಾಯಿ ಚಪಲಕ್ಕೆ ಮೂರ್ಖತನದ ಹೇಳಿಕೆ ನೀಡುತ್ತಿರುತ್ತಾರೆ. ಇತ್ತೀಚೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಲ್ಲರಿಗೂ ನಿಮ್ಮ ಕ್ಷೇತ್ರದ ಸಮಸ್ಯೆ ಏನು ಅಂತ ಕೇಳಿ, ಬಗೆಹರಿಸಿಕೊಳ್ಳುವಂತೆ ಹೇಳಿದ್ದರು. ಆ ಸಭೆಯಲ್ಲಿ ಸುಮ್ಮನೆ ಬಾಯಿ ಮಚ್ಚಿ ಕುಳಿತುಕೊಂಡು, ಉತ್ತರನ …

Read More »

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವರ ಕರೆ.

  ಪ್ರಧಾನ ಮಂತ್ರಿಗಳಾದ *ಶ್ರೀ ನರೇಂದ್ರ ಮೋದಿ* ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, …

Read More »

ನಿಗದಿತ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಈವರೆಗೂ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.

ಬೆಂಗಳೂರು : ವಿಧಾನಸಭೆಯ 74 ಸದಸ್ಯರು ಮತ್ತು ವಿಧಾನಪರಿಷತ್‌ನ 44 ಸದಸ್ಯರು (ಒಟ್ಟು 118 ಶಾಸಕರು) ನಿಗದಿತ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಈವರೆಗೂ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಬಿ.ಸಿ.ಪಾಟೀಲ್‌, ಕೆ.ಎಸ್‌.ಈಶ್ವರಪ್ಪ, ಬಿ.ಶ್ರೀರಾಮುಲು, ಎಚ್‌.ನಾಗೇಶ್‌, ಎಸ್‌.ಟಿ.ಸೋಮಶೇಖರ್‌, ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದ್ದಾರೆ. ವಿಧಾನಸಭೆಯ 74 ಸದಸ್ಯರ ಪೈಕಿ 34 ಬಿಜೆಪಿ, 25 ಕಾಂಗ್ರೆಸ್‌, 12 …

Read More »

ಬಸ್ ಪ್ರಯಾಣಿಕರಿಗೆ ಗುಡ್‌ ನ್ಯೂಸ್..!

ಬೆಂಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಟಿಕೆಟ್‌ಗಳಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಗಮ ನೀಡುವ ಪ್ರತಿ ಟಿಕೆಟ್‌ನಲ್ಲಿ ‘ಮಾಸ್ಕ್‌ ಧರಿಸಿ’, ‘ದೈಹಿಕ ಅಂತರ ಪಾಲಿಸಿ’, ‘ಕೈಗಳ ಸ್ವಚ್ಛತೆ ಕಾಪಾಡಿ’, ‘ಆರಂಭಿಕ ಕೋವಿಡ್‌-19 …

Read More »

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ, ಸಿಎಂ ವಿರುದ್ಧ ಯತ್ನಾಳ್ ಯಾವುದೇ …

Read More »

ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಗೋಕಾಕ: ‘ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಸಂಬಂಧಿತ ತಿದ್ದುಪಡಿ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಕೃಷಿ ಉತ್ಪನ್ನಗಳು, ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ …

Read More »

ಸಚಿವ ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ,ನೀಡಬೇಕೆಂದು  ಭಾರತೀಯ ದಲಿತ  ಪ್ಯಾಂಥರ್ ಸಂಘದ ಜಿಲ್ಲಾಧ್ಯಕ್ಷ ಡಾ. ಮಹಾಲಿಂಗಪ್ಪ ಕೋಲಕಾರ ಆಗ್ರಹಿಸಿದ್ದಾರೆ.

ಬೆಳಗಾವಿ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ , ಹಾವೇರಿ ಜಿಲ್ಲೆಯ ನೆಹರು ಓಲೆಕಾರ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು  ಭಾರತೀಯ ದಲಿತ  ಪ್ಯಾಂಥರ್ ಸಂಘದ ಜಿಲ್ಲಾಧ್ಯಕ್ಷ ಡಾ. ಮಹಾಲಿಂಗಪ್ಪ ಕೋಲಕಾರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಪ್ರಮುಖ ಪಾತ್ರವಿದೆ. ಅಂತಹ ಪ್ರಭಾವಿ ನಾಯಕರಿಗೆ ಈಗ ಸಿಎಂ ಬಿಎಸ್ ಯಡಿಯೂರಪ್ಪನವರು …

Read More »