ಬೆಳಗಾವಿ-ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ,ನಿರ್ದೇಶಕರ ಸ್ಥಾನಕ್ಕೆ ಅಕ್ಟೋಬರ್ 22 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಬೆಳಗಾವಿ ಜಿಲ್ಲೆಯ ಹತ್ತು ತಾಲ್ಲೂಕುಗಳಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ,ಚಿಕ್ಕೋಡಿ ತಾಲ್ಲೂಕಿನಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಮತ್ತು ಶಾಸಕ ಗಣೇಶ್ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆಯಲಿದೆ. ಮುಂದುವರಿಸಲು ಸ್ಕ್ರೋಲ್ ಮಾಡಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ, …
Read More »ಇಂದು ಬೆಳಗಾವಿ ಕಂದಾಯ ಇಲಾಖೆ ಸಚಿವ ಆರ್.ಅಶೋಕ ಭೇಟಿ ನೀಡಿ,
ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ ಸುರಿಸಿದ್ದಾರೆ. https://youtu.be/-mjImckkvpc *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …
Read More »ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ
ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕರೆ ನೀಡಿದರು. https://youtu.be/-mjImckkvpc ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ …
Read More »ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆ
ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.
Read More »ಕಾರಜೋಳ ಪುತ್ರ ಅವರ ಆರೋಗ್ಯ ಸ್ಥಿತಿ ಗಂಭೀರ
ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.
Read More »ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …
Read More »ಆರ್ ನಗರ ಕ್ಷೇತ್ರದ ಉಪ ಚುನಾವಣೆ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ.
ಬೆಂಗಳೂರು: ಸದ್ಯ ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಆರ್.ಆರ್ ನಗರ ಕ್ಷೇತ್ರದ ಉಪ ಚುನಾವಣೆ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ. ಇದೀಗ ಇದೇ ಚುನಾವಣಾ ರಣಕಣ ಮತ್ತಷ್ಟು ರಂಗೇರುತ್ತಿದೆ. ಪ್ರಚಾರ ಕಾರ್ಯಕ್ಕಾಗಿ ಭರ್ಜರಿ ಸಿದ್ಧತೆಯನ್ನೇ ಮಾಡಿಕೊಳ್ಳುತ್ತಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರದಲ್ಲಿ ಭಾಗಿಯಾಗುವಂತೆ ಜೋಡೆತ್ತುಗಳಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಹೌದು.. 2019ರ ಸಾರ್ವತ್ರಿಕ ಚುನಾವಣೆ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೋಡಿ …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ.
ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ತವರು ಕ್ಷೇತ್ರದಿಂದ ಕಳೆದ ಆರು ತಿಂಗಳಿನಿಂದ ದೂರವಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಭಾನುವಾರ ವಿಶ್ರಾಂತಿ ಪಡೆದು ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಸಬಾ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ, ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಮತ್ತು …
Read More »ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,
ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರ ನೇಮಕಾತಿ ಆದೇಶ ಹೊರಡಿಸುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಉಪನ್ಯಾಸಕರಾಗಿ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳು ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರವನ್ನು ಆಗ್ರಹಿಸಿ ಶನಿವಾರ ಆರನೇ ದಿನವೂ ಪಿಯು ಮಂಡಳಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದರು. ಕೊರೊನಾ ವೈರಸ್ ಸಂದರ್ಭದಲ್ಲಿ ಮಳೆ, ಗಾಳಿ ನಡುವೆಯೂ ಉಪನ್ಯಾಸಕರು ಹೆಚ್ಚು ಕಾಲ ಧರಣಿ ಮುಂದುವರೆಸಿ …
Read More »ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …
Read More »
Laxmi News 24×7