Breaking News

ರಾಜಕೀಯ

ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಆಕ್ರೋಶ

ಬೆಂಗಳೂರು,ಸೆ.14- ರಾಜ್ಯದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಸಪ್ತಾಹ ಕಾರ್ಯಕ್ರಮ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಗರದಲ್ಲಿಂದು ತಮ್ಮ ಆಕ್ರೋಶ ವ್ಯಕ್ತಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಕನ್ನಡ ಚಳವಳಿ ಕೇಂದ್ರ ಸಮಿತಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿ ಹಿಂದಿ ದಿವಸ್ ಆಚರಣೆಯನ್ನು ತೀವ್ರವಾಗಿ ವಿರೋಧಿಸಿದರು. ಆನಂದ್ ರಾವ್ ವೃತ್ತದ ಬಳಿ ಹಿಂದಿ ಸಪ್ತಾಹ ಕಾರ್ಯಕ್ರಮದ …

Read More »

ಜಮೀರ್ ಪರ ಮಾತಾಡಿ ಸಿದ್ದರಾಮಯ್ಯನವರು ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಸಚಿವ ಜಗದೀಶ್ ಶೆಟ್ಟರ್​

ಧಾರವಾಡ : ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್​ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು ಕ್ಯಾಸಿನೋಗೂ ಹೋಗ ಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಅಂತಾ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. …

Read More »

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ರಾಮನಗರ:   ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ.   …

Read More »

ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಗೋಕಾಕ: ಹಿಂದಿ, ಇಂಗ್ಲೀಷ ನಂತರ ಮೊದಲು ಕರ್ನಾಟಕದಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಬೇಕು, ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದ ಹಿಲ್ ಗಾರ್ಡನ್ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ದೇಶ್ಯಾದ್ಯಂತ ಹಿಂದಿ ಹೇರಿಕೆಗೆ ನಡೆದಿತ್ತು. ಹಲವು ರಾಜ್ಯಗಳು ಇದನ್ನು ಖಂಡಿಸಿದ್ದವು. ಮೊದಲು ಪ್ರಾದೇಶಿಕ ಭಾಷೆಗೆ ಒತ್ತು ನೀಡಬೇಕು. ಇಲ್ಲಿಯವರೆಗೂ ಕನ್ನಡ …

Read More »

ನಾಯಕತ್ವ ಬದಲಾವಣೆ ಕೇಳಿದ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಮತ್ತು ಸಿಎಂ ಬದಲಾವಣೆ ಕೇಳಿರುವ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ಕೆಲ ಲಿಂಗಾಯತ ಶಾಸಕರೇ ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದು, ವಯಸ್ಸಿನ ಕಾರಣ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಪ್ರವಾಸಕ್ಕೂ ಮುನ್ನವೇ ದೆಹಲಿಗೆ ಭೇಟಿ ನೀಡಿರುವ ಮಾಜಿ ಸಿಎಂ, ಸಚಿವ ಜಗದೀಶ್ ಶೆಟ್ಟರ್ ಹಿರಿಯ ನಾಯಕರನ್ನ ಭೇಟಿ ಮಾಡಿ, ನಾಯಕತ್ವ ಬದಲಾವಣೆ ಕುರಿತು ತಮ್ಮ ಅಭಿಪ್ರಾಯವನ್ನ ತಿಳಿಸಿದ್ದಾರೆ. ಹೈ ಪ್ರಶ್ನೆಯ ಸಂದೇಶ: …

Read More »

ಆರೆಸ್ಸೆಸ್‌ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ

ಬೆಳಗಾವಿ: ಆರೆಸ್ಸೆಸ್‌ ರೀತಿ ಯಲ್ಲಿ ನಮ್ಮ ಶತ್ರುಗಳಿಗೂ ತರಬೇತಿ ನೀಡುವುದಿಲ್ಲ. ಆರೆಸ್ಸೆಸ್‌ಗೂ ಕಾಂಗ್ರೆಸ್‌ ತರಬೇತಿ ಶಿಬಿರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ. ಕೆ. ಹರಿಪ್ರಸಾದ್‌ ಅವರು ಸ್ಪಷ್ಟಪಡಿಸಿದರು.   ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ ರೀತಿಯ ಸಂಘಟನೆ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟಪ್ರಭಾದಲ್ಲಿ ನಾ.ಸು. ಹರ್ಡೀಕರ ಸಮಾಧಿ ಸ್ಥಳದಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, …

Read More »

ರೈತರಿಗೆ ತೊಂದರೆಯಾದರೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿ.ಸಿ ಪಾಟೀಲ

ಬೆಳಗಾವಿ: ನಗರಕ್ಕೆ ಸೋಮವಾರ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.   ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ …

Read More »

ಚಾರ್ಮಾಡಿಯಲ್ಲಿ ಕಾರ್ ಪಲ್ಟಿ- ಐವರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು: ರಸ್ತೆಯಲ್ಲಿ ತೀವ್ರ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನಗ್ಗಿ ಮುಗುಚಿಕೊಂಡು ಬಿದ್ದಿದೆ. ಕೂದಲೆಳೆ …

Read More »

ಬೈಕ್‍ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿತ್ತು ಮರದ ಕೊಂಬೆ……..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಳೆಯ ಮರಗಳಿಂದಾಗಿ ಹಲವು ಅನಾಹುತಗಳು ಸಂಭವಿಸುತ್ತಿರುವುದು ತಿಳಿದೇ ಇದೆ. ಬಿಬಿಎಂ ಮಾತ್ರ ಇಂಹ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸುತ್ತಿಲ್ಲ. ಇದೀಗ ಮತ್ತೊಂದು ಅನಾಹುತ ಸಂಭವಿಸಿದ್ದು, ಬೈಕ್ ಸವಾರರೊಬ್ಬರ ಮೇಲೆ ಮರದ ಕೊಂಬೆ ಬಿದ್ದು ತೆಲೆ ತೀವ್ರ ಪೆಟ್ಟಾಗಿದೆ. ನಗರದ ತಿಲಕ್ ನಗರದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಈ ಘಟನೆಯಿಂದಾಗಿ ಬೈಕ್ ಸವಾರರು ಭಯಭೀತರಾಗಿದ್ದಾರೆ. ಸಂಚರಿಸುವಾಗ ನಮ್ಮ ತಲೆ ಮೇಲೆ ಕೊಂಬೆಗಳು ಬಿದ್ದರೆ ಹೇಗೆ ಎಂದು …

Read More »

ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು

ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ. ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು …

Read More »