Breaking News

ರಾಜಕೀಯ

ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು:H.D.K.

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ …

Read More »

“ತಾಯಿ-ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ಬೇರೆ ಮಾಡುತ್ತಿದೆ ರಾಜ್ಯ ಸರ್ಕಾರ”

ಬೆಂಗಳೂರು, – ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್ ಆರೋಪಿಸಿದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಬರೆದಿರುವ ರೈತರ ಭದ್ರತೆ, ದೇಶದ ಭದ್ರತೆ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಆಹಾರ ಭದ್ರತೆ ಸಾಧಿಸಿದೆ, ರೈತರ ಬದುಕು ಮಾತ್ರ ಸುಧಾರಣೆಯಾಗಿಲ್ಲ. ಕಾರ್ಮಿಕರ ಸಂಕಷ್ಟಗಳು …

Read More »

C.M.ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿ, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ

ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ. ಅಲ್ಲದೆ ಸಚಿವಾಕಾಂಕ್ಷಿಗಳ ಎದೆ ಬಡಿತವನ್ನು ಹೆಚ್ಚಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಸಮಯ ನಿಗದಿಯಾಗಿದೆ. ಎರಡರಿಂದ ಮೂರು ದಿನಗಳ ಕಾಲ ಸಿಎಂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವರಿಷ್ಠರನ್ನು ಹಾಗೂ ವಿವಿಧ ಸಚಿವಾಲಯಗಳ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ವರಿಷ್ಠರ ಜೊತೆ …

Read More »

ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ………..

ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಮಿತ್ …

Read More »

ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ

ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …

Read More »

ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೋಜು-ಮಸ್ತಿ

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್‍ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …

Read More »

ಕ್ಯಾಸಿನೋಗೆ ನಾನೊಬ್ಬನೇ ಹೋಗಿಲ್ಲ.28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ.

ಬೆಂಗಳೂರು,ಸೆ.12- ನಾನು ಕೊಲೊಂಬೊಗೆ ಹೋಗಿದ್ದೇನೆ. ಕ್ಯಾಸಿನೋದಲ್ಲೂ ಭಾಗವಹಿಸಿದ್ದೇನೆ. ಅದೇನೂ ಅಕ್ರಮ ಚಟುವಟಿಕೆಯಲ್ಲ. ಡ್ರಗ್ಸ್ ಜಾಲದಲ್ಲಿ ನಾನು ಭಾಗವಹಿಸಿದ್ದರೆ ನನ್ನನ್ನು ಗಲ್ಲಿಗೇರಿಸಲಿ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋ ಅಕ್ರಮವಲ್ಲ. ಕೇಂದ್ರ ಸರ್ಕಾರ ಅದನ್ನು ನಿಷೇಧಿಸಿಲ್ಲ. ನಾನು ಸೇರಿದಂತೆ ಬಹಳಷ್ಟು ರಾಜಕಾರಣಿಗಳು   ಜೆಡಿಎಸ್‍ನಲ್ಲಿದ್ದಾಗ 28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ. ಹೋಗಬಾರದೆಂದು ಯಾವ ನಿಯಮವೂ ಇಲ್ಲ. ನಾನೇನೂ ಪಾಕಿಸ್ತಾನಕ್ಕೆ …

Read More »

ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಮಾತ್ರ ಕುಮಾರ್ ಸ್ವಾಮಿ ಅವರು ಕೊಲಂಬೊ ಹೋಗಿ ದ್ರಂತೆ…

ಬೆಂಗಳೂರು, ಸೆ.12- ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು …

Read More »

ಡ್ರಗ್ಸ್ ಪ್ರಕರಣ ರಾಜ್ಯಾದ್ಯಂತ ತನಿಖೆ ಆಗಬೇಕು:ಸತೀಶ ಜಾರಕಿಹೊಳಿ 

ಧಾರವಾಡ:   ಡ್ರಗ್ಸ್ ಪ್ರಕರಣ ರಾಜ್ಯಾದ್ಯಂತ ತನಿಖೆ ಆಗಬೇಕುಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಒತ್ತಾಯಿಸಿದ್ದಾರೆ. ಡ್ರಗ್ಸ್ ವಿಚಾರವಾಗಿ  ನಗರದಲ್ಲಿ  ಶನಿವಾರ ಮಾಧ್ಯಮದವರೊಂದಿಗೆ  ಪ್ರತಿಕ್ರಿಯಿಸಿದ ಅವರು, ಪ್ರಕರಣ ತನಿಖೆ ಬೇಗ ಬೇಗ ಮಾಡಬೇಕಿತ್ತು.ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ .  ಇನ್ನೂ ಕಾಲ ಮೀರಿಲ್ಲ.  ರಾಜ್ಯಾದ್ಯಂತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದರು. ಎಐಸಿಸಿ ಕಾರ್ಯಕಾರಿ ಸಮಿತಿ ಬದಲಾವಣೆ ವಿಚಾರ ಮಾತನಾಡಿ,  ಕೆಲಸ ಮಾಡುವ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ

ಧಾರವಾಡ:  ಲ್ಯಾಪ್ ಟಾಪ್  ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ  ಆಗ್ರಹಿಸಿ ಕಳೆದ ಮೂರು  ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ  ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.  ಕೊರೊನಾ ಸಂಕಷ್ಟದಿಂದಾಗಿ  ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ  ಮೊದಲು  ಲ್ಯಾಪ್ ಟ್ಯಾಪ್ ವಿತರಿಸುವುದಾಗಿ  ಹೇಳಿದ ವಿವಿ, ಇದೀಗ  …

Read More »