Breaking News

ರಾಜಕೀಯ

ಜೆಡಿಎಸ್ ಪಕ್ಷ ತೀರಿಸುವ ಕೆಲಸ ನಡೆಯುತ್ತಿದೆ : ಗಂಭೀರ ಆರೋಪ

ನಾಗಮಂಗಲ  : ಜಿಲ್ಲಾಡಳಿತ ಜೆಡಿಎಸ್‌ ಪಕ್ಷವನ್ನು ತೀರಿಸುವ ಕೆಲಸ ಮಾಡುತ್ತಿದೆ. ಜನರಿಂದ ಆಯ್ಕೆಯಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಕನಿಷ್ಠ ಪ್ರಯತ್ನವನ್ನೂ ಮಾಡುತ್ತಿಲ್ಲ. ಜನರಿಂದ ತಿರಸ್ಕೃತರಾದವರೇ ಅಧಿಕಾರಿಗಳಿಗೆ ಗಾಡ್‌ಫಾದರ್‌ಗಳಾಗಿದ್ದಾರೆ ಎಂದು ನಾಗಮಂಗಲ ಶಾಸಕ ಕೆ.ಸುರೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಾಗಮಂಗಲ ಶಾಸಕ ಕೂಡ ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. …

Read More »

`LPG’ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ ಹಾಕುತ್ತಿದೆ : ಈಶ್ವರ್ ಖಂಡ್ರೆ ಕಿಡಿ

ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನು ಧೀಡಿರ್ ಆಗಿ ರದ್ದುಗೊಳಿಸುವ ಮೂಲಕ ಮಧ್ಯಮ ವರ್ಗದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ್ ಖಂಡ್ರೆ, ಈಶ್ವರ್ ಖಂಡ್ರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ.‌ ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ …

Read More »

ಸತೀಶ ಜಾರಕಿಹೊಳಿ ಟೈಗರ್ ಗ್ಯಾಂಗ್ ಬಗ್ಗೆ ಹೇಳಿದ್ದೇನು….

ಗೋಕಾಕ:  ನಗರದಲ್ಲಿ  ಹಲವು ವರ್ಷಗಳಿಂದ ಸಕ್ರಿಯವಾಗಿದ್ದ ಟೈಗರ್ ಗ್ಯಾಂಗ್ ನ್ನು  ತಡವಾದರು ಕೂಡ ಪೊಲೀಸರು ಬಂಧಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ.  ನಿಷ್ಪಕ್ಷಪಾತ ತನಿಖೆಯಿಂದ ಮತ್ತಷ್ಟು ಮಾಹಿತಿ  ಹೊರ ಬರಲಿ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??   ಟೈಗರ್ ಗ್ಯಾಂಗ್ ಬಂಧನ ವಿಚಾರವಾಗಿ ನಗರದಲ್ಲಿ …

Read More »

ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. …

Read More »

ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …

Read More »

ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …

Read More »

ಅಭಿವೃದ್ಧಿಯೇ ನಮ್ಮ ಗುರಿ: ರಮೇಶ ಜಾರಕಿಹೊಳಿ

ಗೋಕಾಕ: ‘ಜನರಿಗೆ ಮೂಲ ಸೌಕರ್ಯ ಒದಗಿಸಲು ಸಂಕಲ್ಪ ತೊಟ್ಟಿದ್ದೇವೆ. ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿ’ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ದುರದುಂಡಿ ಗ್ರಾಮದಲ್ಲಿ ಆರ್‌ಡಿಪಿಆರ್‌, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3ರಡಿ ದುರದುಂಡಿ- ಬಡಿಗವಾಡ-ಮಲ್ಲಾಪೂರ ಪಿಜಿ ರಸ್ತೆ ಸುಧಾರಣೆ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಬಿಜೆಪಿಯು ಸಮಗ್ರ ಪ್ರಗತಿ ಬಯಸಿದ್ದು, ಇದರ …

Read More »

ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಆಂಧ್ರ ಮತ್ತೆ ನಂ.1: 17ನೇ ಸ್ಥಾನಕ್ಕೆ ಕರ್ನಾಟಕ ಕುಸಿತ!

ನವದೆಹಲಿ : ಉದ್ಯಮಸ್ನೇಹಿ ವಾತಾವರಣ ಹೊಂದಿರುವ ರಾಜ್ಯಗಳ ವಾರ್ಷಿಕ ರಾರ‍ಯಂಕಿಂಗ್‌ ಶನಿವಾರ ಪ್ರಕಟಗೊಂಡಿದ್ದು, ಆಂಧ್ರಪ್ರದೇಶ ಸತತ 3ನೇ ಬಾರಿಗೆ ಮೊದಲ ಸ್ಥಾನ ಗಳಿಸಿದೆ. ಆದರೆ ಕಳೆದ ಸಲ 8ನೇ ಸ್ಥಾನದಲ್ಲಿದ್ದ ಕರ್ನಾಟಕ ಈ ಸಲ 17ನೇ ಸ್ಥಾನಕ್ಕೆ ಇಳಿದಿದೆ. 2019ರ ಔದ್ಯಮಿಕ ಸುಧಾರಣೆ ಕ್ರಿಯಾಯೋಜನೆಗಳನ್ನು ರಾಜ್ಯಗಳು ಜಾರಿಗೊಳಿಸಿದ್ದನ್ನು ಆಧರಿಸಿ ಉದ್ದಿಮೆ ಹಾಗೂ ಆಂತರಿಕ ವ್ಯಾಪಾರ ಇಲಾಖೆ ಈ ಶ್ರೇಯಾಂಕ ಸಿದ್ಧಪಡಿಸಿದೆ. ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಿಸುವ ಉದ್ದೇಶದಿಂದ ಕಳೆದ 5 …

Read More »

ವಿವಿಧ ರಾಜ್ಯಗಳ 47 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿ,ಸೆ.5- ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 47 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದರು. ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಲಿಂಕ್ ಮೂಲಕ ಪ್ರಶಸ್ತಿಗಳನ್ನು ನೀಡಿ ಮಾತನಾಡಿದ ರಾಷ್ಟ್ರಪತಿಯವರು, ಉತ್ತಮ ಕಟ್ಟಡ, ದುಬಾರಿ ಸೌಲಭ್ಯಗಳು ಇರುವ ಶಿಕ್ಷಣ ಸಂಸ್ಥೆಗಳಿಂದ ಉತ್ತಮ ವಿದ್ಯಾರ್ಥಿಗಳು ಸೃಷ್ಟಿಯಾಗುವುದಿಲ್ಲ. ಬದಲಿಗೆ ಒಳ್ಳೆಯ ಶಿಕ್ಷಕರಿಂದ ಮಾತ್ರ ಉತ್ತಮ ವಿದ್ಯಾರ್ಥಿಗಳು ಸೃಷ್ಟಿಯಗುತ್ತಾರೆ. ಆ ಮೂಲಕ ಉತ್ತಮ …

Read More »

ಉಪ ಚುನಾವಣೆಗೆದಿನಾಂಕವನ್ನೇ ನಿಗದಿಪಡಿಸಿಲ್ಲ,ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ,

ಬೆಂಗಳೂರು, ಸೆ.5- ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿಪಡಿಸಿಲ್ಲ, ಆದರೂ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ, ಬಿಜೆಪಿಗೆ ಇಲ್ಲಿ ಯಾವುದೇ ನೆಲೆ ಇಲ್ಲ, ಆದರೆ ಶಿರಾ ಕ್ಷೇತ್ರ, ಬಿಜೆಪಿ ಸಂಸದ ಆನೇಕಲ್ ನಾರಾಯಣ ಸ್ವಾಮಿ ಪ್ರತಿನಿಧಿಸುವ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬಿ ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಪ್ರಧಾನ …

Read More »