Breaking News

ರಾಜಕೀಯ

ಮೇಘನಾ ರಾಜ್ ಬಳಿ ಕ್ಷಮೆ ಕೋರಿದ ಇಂದ್ರಜಿತ್ ………..

ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಬರೆದ ಪತ್ರದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕ್ಷಮೆ ಕೋರಿದ್ದಾರೆ.ಮಾತನಾಡಿದ ಇಂದ್ರಜಿತ್, ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು. ಈ ಸಂಬಂಧ ನಾನು ಬಹಿರಂಗ …

Read More »

ಎನ್‍ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ

ಬೆಂಗಳೂರು: ಎರಡು ಬಾರಿ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಡ್ರಗ್ ತೆಗೆದುಕೊಂಡಿರೋದಾಗಿ ನಟಿ ರಾಗಿಣಿ ದ್ವಿವೇದಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಗೆಳೆಯ ರವಿಶಂಕರ್ ತಂದುಕೊಟ್ಟಿದ್ದ ಎಂಡಿಎಂಎ ಡ್ರಗ್ ಮನೆಯಲ್ಲಿಯೇ ಬಳಕೆ ಮಾಡಿದ್ದೇನೆ ಎಂದು ರಾಗಿಣಿ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ಬಾರಿಯೂ ರವಿಶಂಕರ್ ಡ್ರಗ್ಸ್ ತಂದಿದ್ದನು. ಇತ್ತ ರಾಗಿಣಿ, ರವಿಶಂಕರ್ ಮತ್ತು ರಾಹುಲ್ ಬಳಸುತ್ತಿದ್ದ ಮೊಬೈಲ್ ಮಾಹಿತಿಯನ್ನ ಪುನಃ ಕಲೆ ಹಾಕಲಾಗಿದೆ. …

Read More »

ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು.

ಗೋಕಾಕ್: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »

ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ: ಡಿ.ಕೆ .ಶಿ.

ಬೆಂಗಳೂರು: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಕಳೆದ ಅಗಸ್ಟ್ 25ರಂದು ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲ ದಿನಗಳು ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ …

Read More »

ಈ ಶಿಕ್ಷಕ, ಶ್ರೇಷ್ಠ ತತ್ವಜ್ಞಾನಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್

ಭಾರತದ ಮೊದಲ ಉಪರಾಷ್ಟ್ರಪತಿಯಾಗಿ, ರಾಷ್ಟ್ರಪತಿಗಳಾಗಿ, ರಷ್ಯಾದ ರಾಯಭಾರಿಯಾಗಿ, ಇನ್ನೂ ಮೊದಲಾದ ದೇಶದ ಅತ್ಯುನ್ನತ ಹುದ್ದೆಗಳನ್ನು, ಉನ್ನತ ಹುದ್ದೆಗೆ ಏರಿದವರು ಈ ಶಿಕ್ಷಕ, ಶ್ರೇಷ್ಠ ತತ್ವಜ್ಞಾನಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರು. ಅವರು ಓರ್ವ ಶಿಕ್ಷಕರಾಗಿ ಶಿಕ್ಷಕ ಸ್ಥಾನದ ಘನತೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಮೇಲ್ಮಟ್ಟಕ್ಕೆ ಕೊಂಡೊಯ್ದವರು. ಅವರ ಹುಟ್ಟಿದ ದಿನ ಸೆಪ್ಟಂಬರ್ 5ನ್ನು ದೇಶದ ತುಂಬೆಲ್ಲಾ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವಂತೆ ಮಾಡಿದರು. ಪ್ರಾಚೀನ ಕಾಲದಿಂದಲೂ ಗುರುವಿನ ಮಹಿಮೆ ತಿಳಿಯದವರಾರೂ ಇಲ,್ಲ ನಮ್ಮ …

Read More »

ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ನಟಿ ಸಂಯುಕ್ತ ಹೆಗ್ಡೆ

ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಗೇಟ್ …

Read More »

ವೃತ್ತಿಯಲ್ಲಿ ಟೆಕ್ಕಿ, ಪ್ರವೃತ್ತಿಯಲ್ಲಿ ಡ್ರಗ್ಸ್ ದಂಧೆಯ ಕಿಂಗ್ ಪಿನ್- ವಿರೇನ್ ಖನ್ನಾ ಬಂಧನ

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್‍ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕುರಿತು ಖಚಿತ ಮಾಹಿತಿಗಳನ್ನು ಕಲೆಹಾಕಿದ್ದ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಆತ ದೆಹಲಿಯಲ್ಲಿರುವ ಮಾಹಿತಿ ಲಭಿಸಿತ್ತು. …

Read More »

ಅಕ್ಕ ಪ್ರಿಯತಮನ ಜೊತೆ ಕಾಣೆಯಾಗಿದ್ದಾಳೆ ಎಂದು ತಿಳಿದು ತಂಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ

ಉಡುಪಿ: ಅಕ್ಕ ಪ್ರಿಯತಮನ ಜೊತೆ ಕಾಣೆಯಾಗಿದ್ದಾಳೆ ಎಂದು ತಿಳಿದು ತಂಗಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಂಜಲ್ತಾರ್ ಎಂಬಲ್ಲಿ ನಡೆದಿದೆ. ಶ್ವೇತಾ ಮೃತ ಸಹೋದರಿ. ಮಾಳದ ನಿವಾಸಿ ಎರಡು ದಿನಗಳ ಹಿಂದೆ ಸ್ಥಳೀಯ ಫುಡ್ ಪ್ರೋಡಕ್ಷನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭುವನ್ ಜೊತೆ ಪರಾರಿಯಾಗಿದ್ದಳು. ಇಂದು ಯುವತಿ ತನ್ನ ಸಹೋದರಿ ಶ್ವೇತಾಳಿಗೆ ಫೋನ್ ಮಾಡಿದ್ದಾಳೆ. ಈ ವೇಳೆ ತನಗೆ ನಿಶ್ಚಯವಾದ ಹುಡುಗನ ಜೊತೆ ವಿವಾಹವಾಗಲು ಇಷ್ಟ …

Read More »

ರಾಜಕಾರಣಿಗಳು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ: ಮುತಾಲಿಕ್ ಕಿಡಿ

ತುಮಕೂರು: ವಿಚಾರಣೆ, ನೋಟಿಸ್ ಎಂದು ಕಾಲಹರಣ ಮಾಡುವ ನಾಟಕ ಮಾಡಬೇಡಿ. ದಾಖಲೆಗಳಿದ್ದರೆ ಮುಲಾಜಿಲ್ಲದೆ ನಟಿಯರನ್ನು ಬಂಧಿಸಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ವಿಚಾರಣೆ, ನೋಟಿಸ್ ನೀಡುತ್ತೇವೆಂದು ನಾಟಕ ಆಡುತ್ತೀರಾ, ಬೆಂಕಿ ಇದ್ದಾಗಲೇ ಹೊಗೆ ಬರೋದು. ನಿಮ್ಮ ಬಳಿ ದಾಖಲೆಗಳಿರುವುದರಿಂದಲೇ ದಾಳಿ ಮಾಡಿದ್ದೀರಿ. ವಶಕ್ಕೆ ಪಡೆದರೂ ನಟಿಗೆ ಭಯ ಇಲ್ಲ, ಅವರನ್ನು ಅರೆಸ್ಟ್ ಮಾಡಿ. ರಾಜಕಾರಣಿಗಳಿಗೆ ದುಡ್ಡು ಕೊಟ್ಟರೆ …

Read More »

ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ B.S.Y.: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ …

Read More »