Breaking News

ರಾಜಕೀಯ

ಮೋದಿಜಿ ನಿರುದ್ಯೋಗಿಗಳ ಕಷ್ಟ ನೋಡಲು ಯಾವ ಕನ್ನಡಕ ಬೇಕು ಹೇಳಿ, ತರಿಸಿಕೊಡ್ತೀವಿ”

ಬೆಂಗಳೂರು, ಸೆ.3- ನಿರುದ್ಯೋಗಿಗಳ ಕಷ್ಟ ನೋಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾವ ರೀತಿಯ ಕನ್ನಡಕಬೇಕು ಹೇಳಿ. ಅದು ಎಷ್ಟೇ ಖರ್ಚಾರಲಿ, ಎಲ್ಲೇ ಇರಲಿ ತರಿಸಿಕೊಡುತ್ತೇವೆ ಎಂದು ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂರ್ಯಗ್ರಹಣ ನೋಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡುವರೆ ಲಕ್ಷ ರೂಪಾಯಿ ಖರ್ಚು ಮಾಡಿ ಜಪಾನ್‍ನಿಂದ ಕನ್ನಡಕವೊಂದನ್ನು ತರಿಸಿಕೊಂಡಿದ್ದರು. ದುರಾದೃಷ್ಟವಶಾತ್ ಮೋಡ ಕವಿದಿದ್ದರಿಂದ ಸೂರ್ಯಗ್ರಹಣ …

Read More »

ಜಿಎಸ್‌ಟಿ ನಷ್ಟ ಭರ್ತಿಗೆ 11324 ಕೋಟಿ ರೂ ಸಾಲ.: ಕೇಂದ್ರದ ಒಂದನೇ ಆಯ್ಕೆ ಒಪ್ಪಿದ ರಾಜ್ಯ!

ಬೆಂಗ: ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ಪರಿಹಾರದ ಕುರಿತು ಕೇಂದ್ರ ಸರ್ಕಾರ ನೀಡಿದ ಎರಡು ಆಯ್ಕೆಗಳ ಪೈಕಿ ರಾಜ್ಯಕ್ಕೆ ಹೆಚ್ಚು ಅನುಕೂಲವಾಗುವ ಮೊದಲನೇ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪ್ರಕಾರ, 18,289 ಕೋಟಿ ಪರಿಹಾರ ಪಡೆಯಲು ತೀರ್ಮಾನಿಸಿದೆ. 18,289 ಕೋಟಿ ರು,ಅಥವಾ 25,508 ಕೋಟಿ ರು. ಪರಿಹಾರದ 2 ಆಯ್ಕೆಗಳನ್ನು ಕೇಂದ್ರ ಸರ್ಕಾರ ನೀಡಿತ್ತು. ಈ ಕುರಿತ ಮೌಲ್ಯಮಾಪನ ಮಾಡಿದ ಬಳಿಕ ರಾಜ್ಯದ ಹಣಕಾಸುಗಳಿಗೆ ಅನುಕೂಲವಾಗುವ ಒಟ್ಟು …

Read More »

ಗ್ರೇಡ್ 2 ಶಿಕ್ಷಕರ ಬಡ್ತಿ, ವಿವಿಧ ಬೇಡಿಕೆಗೆ ಸಚಿವ ಸುರೇಶ್ ಕುಮಾರ್ ಭರವಸೆ; ಧರಣಿ ಕೈಬಿಟ್ಟ ಪರಿಷತ್ ಸದಸ್ಯರು

ಬೆಂಗಳೂರು : ಮೈಸೂರು ವಿಭಾಗದಲ್ಲಿ ಪ್ರೌಢ ಶಾಲಾ ಗ್ರೇಡ್-2 ಸಹ ಶಿಕ್ಷಕರಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಣ ಸಚಿವರ ಕಚೇರಿ ಎದುರು ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ವಿಧಾನಪರಿಷತ್ ಸದಸ್ಯರು ವಾಪಸು ಪಡೆದಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಕುರಿತಂತೆ ಬುಧವಾರ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್. ಎಲ್. ಭೋಜೆಗೌಡ ಮತ್ತು ರಮೇಶ್ ಗೌಡ ಜೊತೆ ಸಭೆ …

Read More »

ಅಲ್ಪಸಂಖ್ಯಾತ ವಸತಿ ಶಾಲೆಗಳಲ್ಲಿ ದಾಖಲಾತಿ ಇಳಿಕೆಯಾದಲ್ಲಿ ಕಠಿಣ ಕ್ರಮ; ಸಚಿವ ಶ್ರೀಮಂತ ಪಾಟೀಲ್ ಎಚ್ಚರಿಕೆ

ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಅವರು, ಬುಧವಾರ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು, ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್ ನಾಗೇಶ್, ಶಾಸಕಿ ರೂಪಕಲಾ, ಪರಿಷತ್ ಶಾಸಕ ಗೋವಿಂದರಾಜು, ಡಿಸಿ ಸಿ ಸತ್ಯಭಾಮ ಭಾಗಿಯಾಗಿದ್ದರು, ಸಭೆಯಲ್ಲಿ ನೇಕಾರರ ಜೊತೆಗೆ ಚರ್ಚಿಸಿದ ಸಚಿವರು ಸಮಸ್ಯೆಗಳು ಇದ್ದಲ್ಲಿ ಇಲಾಖೆ ಅಧಿಕಾರಿಗಳ ಸಹಾಯ ಪಡೆಯಿರಿ …

Read More »

ಶಿರಾ ಉಪಚುನಾವಣೆ: ಜೆಡಿಎಸ್​ನಿಂದ ಯಾರಾಗ್ತಾರೆ ಅಭ್ಯರ್ಥಿ?

ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ . ಜೆಡಿಎಸ್​ನಿಂದ ಶಾಸಕರಾಗಿದ್ದ ಬಿ. ಸತ್ಯನಾರಾಯಣ್ ಅವರು ಆಗಸ್ಟ್ 4 ರಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಥಾನ ತೆರವಾಗಿದ್ದು, ಖಾಲಿ ಇರುವ ಶಾಸಕ ಸ್ಥಾನ ತುಂಬಲು ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಜೋರಾಗಿದೆ. ಸದ್ಯದ ಮಟ್ಟಿಗೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್​ಗೆ ಉತ್ತಮವಾದ ವಾತಾವರಣ ಇದೆ. 2018 ರಲ್ಲಿ ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರವಾದ ಇಲ್ಲಿಂದ ಜೆಡಿಎಸ್ …

Read More »

ಬೆಳೆ-ಮನೆ ಹಾನಿ ಪ್ರಾಮಾಣಿಕ ಸರ್ವೇಗೆ ಸೂಚನೆ

ರಾಮದುರ್ಗ: ಪ್ರವಾಹದಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ಮನೆಗಳ ಸರ್ವೇ ಕಾರ್ಯವನ್ನು ಜಂಟಿಯಾಗಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಮಾಡಬೇಕು. ಏನಾದರೂ ಲೋಪದೋಷ ಎಸಗಿದಲ್ಲಿ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಖಡಕ ಸೂಚನೆ ನೀಡಿದರು. ಸ್ಥಳೀಯ ತಾಪಂ ಸಭಾಭವನದಲ್ಲಿ ಮಂಗಳವಾರ ಪ್ರವಾಹಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿ ತಪ್ಪು ನಡೆಯಬಾರದು. ಆ ಸಂದರ್ಭದಲ್ಲಿ ಮಾಡಿದ ತಪ್ಪು ಇನ್ನೂವರೆಗೂ ಬಗೆಹರಿಯುತ್ತಿಲ್ಲ. ನೋಡಲ್‌ …

Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಬಸ್ ಪಾಸ್ ದರ ಏರಿಕೆ ಇಲ್ಲ : ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ …

Read More »

ನಾಡಹಬ್ಬ ದಸರಾ ಆಚರಣೆಗೆ ಹೆಚ್ಚಿದ ಒತ್ತಡ: ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸಭೆ

ಬೆಂಗಳೂರು: ಕರೊನಾ ಸಾಂಕ್ರಾಮಿಕ ರೋಗದ ಕಾರಣ ಮುಂದಿಟ್ಟು ನಾಡಹಬ್ಬ ಮೈಸೂರು ದಸರಾ ಆಚರಣೆ ಕೈಬಿಡಬಾರದು ಎಂಬ ಒತ್ತಡ ಹೆಚ್ಚುತ್ತಿದೆ. ಮೈಸೂರು ದಸರಾ ನಡೆಯುವುದೇ ಇಲ್ಲವೇ ಎಂಬ ಸಂದೇಹ ಹೆಚ್ಚಾದ ಕಾರಣ ಈ ಒತ್ತಡ ಹೆಚ್ಚಾಗಿದೆ. ಈ ನಡುವೆ, ಕಳೆದ ತಿಂಗಳು ಕಾವೇರಿ ನದಿಗೆ ಬಾಗಿನ ಸಮರ್ಪಿಸಲು ತೆರಳುವ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಆಚರಣೆ ಬಗ್ಗೆ ತೀರ್ಮಾನಿಸಲು ಚಿಂತನೆ ನಡೆದಿದೆ. ಶೀಘ್ರವೇ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ …

Read More »

ಸಾರ್ವಜನಿಕ ಅಸ್ತಿ ನಾಶ ಮಾಡಿದ ಪಿಎಫ್‌ಐ ಸದಸ್ಯರ ಸ್ವತ್ತು ಮುಟ್ಟುಗೋಲಿಗೆ ಯುಪಿ ಸರ್ಕಾರ ಕ್ರಮ

ಮುಜಪ್ಫರ್‌ನಗರ: ಸಿಎಎ ವಿರೋಧಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿ ಸಾರ್ವಜಕ ಅಸ್ತಿ ನಾಶ ಮಾಡಿದ್ದ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ನಾಲ್ವರು ಸದಸ್ಯರಿಂದ ನಷ್ಟ ಭರ್ತಿ ಮಾಡಲು ಉತ್ತರಪ್ರದೇಶ ಸರಕಾರ ಕ್ರಮ ಕೈಗೊಂಡಿದೆ. ಡಿಸೆಂಬರ್‌ ತಿಂಗಳಲ್ಲಿ ಉತ್ತರಪ್ರದೇಶದ ಕೈರಾನದಲ್ಲಿ ಸಿಎಎ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಇದರಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟಗೊಂಡಿತ್ತು. ಇದರ ಸಂಪೂರ್ಣ ಮಾಹಿತಿ ಕಲೆಹಾಕಿದ ಪೊಲೀಸರು, ಈಗ ದೊಂಬಿ ಪ್ರಚೋದಕರಿಂದ ನಷ್ಟ ಭರ್ತಿಗೆ ಕ್ರಮ ಕೈಗೊಂಡಿದ್ದಾರೆ. …

Read More »

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …

Read More »