ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ …
Read More »ಇತರರು ತಲೆಹಾಕುವುದು ಸರಿಯಲ್ಲ’: ಅರ್ಚಕ ನಾರಾಯಣ ಆಚಾರ್ ಪುತ್ರಿಯರ ವಿವಾಹ ವಿಚಾರ
ಮಡಿಕೇರಿ: ‘ತಲಕಾವೇರಿಯಲ್ಲಿ, ಗುಡ್ಡ ಕುಸಿತದಿಂದ ಮೃತಪಟ್ಟ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪುತ್ರಿಯರು ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದಾರೆ. ಆದರೆ, ಅವರ ವೈಯಕ್ತಿಕ ವಿಚಾರದಲ್ಲಿ ಬೇರೆಯವರು ತಲೆಹಾಕುವುದು ಸರಿಯಲ್ಲ’ ಎಂದು ಕುಟುಂಬದ ಹಿರಿಯ ಸದಸ್ಯ ಜಯಪ್ರಕಾಶ್ ರಾವ್ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು. ‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ- ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. …
Read More »ಅಕ್ಟೋಬರ್ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ
ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …
Read More »ಸ್ಥಳೀಯ ಉದ್ಯಮಿಗಳೇ ಹೂಡಿಕೆಗೆ ಮುಂದಾಗಿ: ಸಚಿವ ಶೆಟ್ಟರ
ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …
Read More »ಇಂದಿನಿಂದ ಅನ್‍ಲಾಕ್ 4.0 ಜಾರಿ – ವ್ಯಾಪಾರಕ್ಕೆ ಮುಕ್ತವಾಯ್ತು ಕೆ.ಆರ್ ಮಾರ್ಕೆಟ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮತ್ತೆ ಆರಂಭವಾಗಿದೆ. ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ- ವ್ಯವಹಾರ ಕಳೆದ ಐದು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಮಾರ್ಕೆಟ್ ನ ಮಳಿಗೆಗಳಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಿಲಾಗಿತ್ತು. ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶವಿರಲಿಲ್ಲ. ಇದೀಗ ಇಂದಿನಿಂದ ಅನ್‍ಲಾಕ್ 4.0 ಜಾರಿಯಾಗುತ್ತಿದ್ದು, ಕೆ.ಆರ್ ಮಾರ್ಕೆಟ್ ಬೀದಿ ಬದಿಯ ವ್ಯಾಪರ ಬಲು ಜೋರಾಗಿದೆ. ಮಾರ್ಕೆಟ್ ಹೊರಗಡೆ ಸಾಮಾಜಿಕ ಅಂತರ ಮರೆತು …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
ಬೆಂಗಳೂರು : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಐದು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ರಕ್ಷಣಾ, ಆರ್ಥಿಕ, ವಿದೇಶಾಂಗ ವ್ಯವಹಾರ ಸಚಿವರಾಗಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು. ದೂರದೃಷ್ಟಿಯುಳ್ಳವರಾಗಿದ್ದ ಅವರು ಭಾರತ ಕಂಡ ಅತ್ಯುತ್ತಮ ಸಂಸದ ಹಾಗೂ ಸಮರ್ಥ ರಾಜಕಾರಣಿ . ದೇಶದ …
Read More »ಸಿಎಸ್‍ಕೆ ಬದಲು ಐಪಿಎಲ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ಯಾ ಆರ್‌ಸಿಬಿ?
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್‍ನ ಫೈನಲ್‍ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್‍ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್‍ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು …
Read More »ಮಟಮಟ ಮಧ್ಯಾಹ್ನ ಬರ್ತಾರೆ – ಫೇಕ್ ದಾಖಲೆ ಹಿಡಿದು ಮನೆ ಧ್ವಂಸ ಮಾಡ್ತಾರೆ
ಬೆಂಗಳೂರು: ಕೊರೊನಾ ಸಮಯದಲ್ಲಿಯೇ ಡೆಡ್ಲಿ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಗೆ ಎಂಟ್ರಿಯಾಗಿದೆ. ಸುಳ್ಳು ದಾಖಲೆ ಸೃಷ್ಟಿಸಿ ಮನೆ ಧ್ವಂಸ ಮಾಡಿದ ಘಟನೆ ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿ ಮುನೇಶ್ವರ ಟೆಂಪಲ್ ಬಳಿ ನಡೆದಿದೆ. ಹೌದು. ಖದೀಮರ ತಂಡವೊಂದು ಮಟಮಟ ಮಧ್ಯಾಹ್ನವೇ ಬಂದು ಜೆಸಿಬಿ ಮೂಲಕ ಮನೆ ಕೆಡವಿ ಮನೆಯಲ್ಲಿದ್ದ ಹಣ, ಒಡವೆ, ವಸ್ತುಗಳನ್ನ ಕದ್ದೊಯ್ದಿದೆ. ಈ ವೇಳೆ ಪ್ರಶ್ನೆ ಮಾಡಿದ ಮನೆಯಲ್ಲಿದ್ದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಸಿದ್ದಲ್ಲದೆ, ಹಲ್ಲೆ ಮಾಡಿದ ಆರೋಪ …
Read More »ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …
Read More »
Laxmi News 24×7