ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆ ಯತ್ನದ ವೇಳೆ ಮಾಜಿ …
Read More »ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ
ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್‌ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …
Read More »ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್
ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ನಾನು ಅಸ್ಸಾಂನ ಬಿಜೆಪಿ ಸಿಎಂ ಅಭ್ಯರ್ಥಿಯಲ್ಲ: ರಂಜನ್ ಗೊಗೊಯ್
ನವದೆಹಲಿ: ನಾನು ಅಸ್ಸಾಂನ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿಯಲ್ಲ ಎಂದು ಸುಪ್ರೀಂ ಕೋರ್ಟ್‍ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಂದಿನ ವರ್ಷ ಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ ಶನಿವಾರ ಬೆಳಗ್ಗೆ ಹೇಳಿದ್ದರು. ಈ ವಿಚಾರವಾಗಿ ಇಂದು ಮಾತನಾಡಿರುವ …
Read More »ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …
Read More »ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!
ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …
Read More »ಸಚಿವರು ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್‌ವೈ ಹರ್ಷ
ಶ್ರೀರಂಗಪಟ್ಟಣ : ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ …
Read More »ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …
Read More »ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ
ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‌ಎಎಲ್‌ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ 11.15 …
Read More »ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.
ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …
Read More »
Laxmi News 24×7