ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …
Read More »ಇಂದು ಕಾವೇರಿಗೆ ಯಡಿಯೂರಪ್ಪ ಬಾಗಿನ – ಎರಡೆರಡು ದಾಖಲೆ ಬರೆಯಲಿದ್ದಾರೆ ಸಿಎಂ ಇವರಿಂದ ಪ್ರಕಟಿಸಲಾಗಿದೆ
ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೊರೆತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ.ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ …
Read More »ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ:ಸಿಟಿ ರವಿ
ಬೆಂಗಳೂರು: ಎಸ್‍ಡಿಪಿಐ ನಿಷೇಧ ವಿಚಾರ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದರು.ವಿಧಾನಸೌಧದ ಬಳಿ ಮಾತನಾಡಿದ ಸಿಟಿ ರವಿ ಅವರು, ಯಾವುದೇ ಒಂದು ಘಟನೆ ಮೇಲೆ ನಿಷೇಧದಂತಹ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸ ಆಗುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ನಾಳೆ …
Read More »ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ …
Read More »ಡೇಂಜರ್ ಝೋನ್‍ನಿಂದ ಎಸ್‍ಪಿಬಿ ಪಾರಾಗಿದ್ದು, ಖುಷಿ ತಂದಿದೆ: ತಲೈವಾ
ಚೆನ್ನೈ: ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಡೇಂಜರ್ ಝೋನ್ ನಿಂದ ಪಾರಾಗಿದ್ದು, ಖುಷಿ ತಂದಿದೆ ಎಂದು ನಟ ರಜನಿಕಾಂತ್ ತಿಳಿಸಿದ್ದಾರೆ.ಈ ಸಂಬಂಧ ವಿಡಿಯೋ ಮಾಡಿ ಎಸ್‍ಪಿಬಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ತಲೈವಾ, ಈ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ 71 ವರ್ಷದ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಸದ್ಯ ಡೇಂಜರ್ ಝೋನ್ ನಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ. ಎಸ್‍ಪಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರ …
Read More »ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ
ಹೊಸದಿಲ್ಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ ಮಾಡಿದರು. ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ …
Read More »ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ:ರಮೇಶ್ ಜಾರಕಿಹೋಳಿ.
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ …
Read More »ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ
ಹಾವೇರಿ, : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಸಿ ಪಾಟೀಲ್,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ ಎಂದು ಆರೋಪಿಸಿದರು. ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..! ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ …
Read More »1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಈ ಯೋಜನೆಯಿಂದಾಗಿ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ನೇರವಾಗಿ ರೈತರ ಖಾತೆಗೇ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. 2019-20ನೇ ಸಾಲಿನ ಬೆಳೆವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ …
Read More »74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ.: ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವ ದ ಶುಭಾಶಯಗಳು-ರಮೇಶ್ ಜಾರಕಿಹೊಳಿ, ಜಲಸಂಪನ್ಮೂಲ ಸಚಿವರು.
Read More »
Laxmi News 24×7