ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯ ಸೇರುವುದಂತೂ ಪಕ್ಕಾ ಆಗಿದೆ. ಅದಕ್ಕೂ ಮುನ್ನ ತನ್ನೂರು ಕರೂರಿನಲ್ಲಿ ಜನರೊಂದಿಗೆ ಬೆರೆತು ವಿವಿಧ ಚಟುವಟಿಕಗೆಳಲ್ಲಿ ಅವರು ತೊಡಗಿಕೊಂಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಇತ್ತೀಚೆಗೆ ತಮಿಳು ವಾಹಿನಿಯೊಂದಕ್ಕೆ ಅವರ ನೀಡಿರುವ ಸಂದರ್ಶನ ತಮಿಳುನಾಡಿನ ರಾಜಕೀಯದಲ್ಲಿಯೇ ಸಂಚಲನ ಸೃಷ್ಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಪಮೌಲ್ಯೀಕರಣವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಕಚೇರಿಯನ್ನು ಸಾರ್ವಜನಿಕರ ಸಂಪರ್ಕಕಕ್ಕೂ ಲಭ್ಯವಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತವನ್ನು ಮೆಚ್ಚಿದ್ದು …
Read More »ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …
Read More »800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!
ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ. ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡ್ಕೊಂಡ!
ಭೋಪಾಲ್: ಚೀನಿ ವೈರಸ್ ಕೋವಿಡ್ 19 ನಮ್ಮ ದೇಶಕ್ಕೂ ಒಕ್ಕರಿಸಿದ ಬಳಿಕ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಕಾಲಿಟ್ಟರೆ ದಂಡ ಕೂಡ ಬೀಳುತ್ತದೆ. ಅಂತೆಯೇ ಮಾಸ್ಕ್ ಧರಿಸದೇ ಬಂದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಭಾನುವಾರ ಕಟ್ಟುನಿಟ್ಟಿನ ಲಾಕ್‍ಡೌನ್ ಹೇರಲಾಗಿತ್ತು. ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್‍ಡೌನ್ ಒಂದೇ …
Read More »ಲಾಕ್‍ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್‍ವೈ ಸರ್ಕಾರ: ಸವದಿ
ನವದೆಹಲಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …
Read More »ಉಗ್ರರ ಬಹುದೊಡ್ಡ ಸಂಚು ವಿಫಲ- 8 ಕೆಜಿ ತೂಕದ 2 ಐಇಡಿ ನಿಷ್ಕ್ರಿಯ
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಉಗ್ರರ ಬಹುದೊಡ್ಡ ಸಂಚನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಶ್ಮೀರ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ 4 ಗ್ರೆನೆಡ್ ಲಾಂಚರ್, 3 ಚೀನಿ ಗ್ರೆನೆಡ್, ಎಕೆ-47 ಮತ್ತು ಒಂದು ಬಾಂಬ್ ವಶ ಪಡಿಸಿಕೊಂಡಿದ್ದಾರೆ. ಪೂಂಛ್ ಜಿಲ್ಲೆಯ ಲೊರ್ನಾ ಇಲಾಖೆಯಲ್ಲಿ ಉಗ್ರರು ಬಚ್ಚಿಟ್ಟಿದ್ದ 8 ಕೆಜಿ ತೂಕದ ಎರಡು ಐಇಡಿ ಮತ್ತು ಎರಡು ಹ್ಯಾಂಡ್ ಗ್ರೆನೆಡ್ ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. …
Read More »ಕಾಫಿನಾಡ ಕಾಡಲ್ಲಿ ಬಂಗಾರದ ಕಾಡೆಮ್ಮೆ ಪತ್ತೆ…………
ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ ಕಾಟಿ ತಳಿಯ ಈ ಕಾಡೆಮ್ಮೆ ಬಂಗಾರದ ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡ ಅರಣ್ಯದಲ್ಲಿ ಇತ್ತು. ಆಗ ಇಂದರ್ಫಿಸ್ಟ್ …
Read More »ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ
ಬೆಂಗಳೂರು,-ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …
Read More »ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ
ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …
Read More »ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ
ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್ ಯಡಿಯೂರಪ್ಪ ನಮನ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್‍ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …
Read More »
Laxmi News 24×7