ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ …
Read More »ಹೇಳಿದ್ದು 10,100 ಬೆಡ್ ಅಂತ,ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ.
ಬೆಂಗಳೂರು,ಜು25- ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್‍ಗಳಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳು ಸಿಗುತ್ತಿಲ್ಲ. ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರು ಹೊರ ವಲಯದ ಮಾದಾವರದ ಬಿಐಇಸಿಯಲ್ಲಿ ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ. ಇಲ್ಲಿ 10,100 ಬೆಡ್‍ಗಳ ಬೃಹತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈವರೆಗೆ ಕೇವಲ 5 ಸಾವಿರ ಬೆಡ್‍ಗಳನ್ನು ಮಾತ್ರ ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆಗೆ ಲಭ್ಯವಿರುವುದು 1 ಸಾವಿರ ಬೆಡ್‍ಗಳು ಮಾತ್ರ ಎಂದು ಸ್ವತಃ ಬಿಬಿಎಂಪಿ ಆಯುಕ್ತರೇ …
Read More »ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್
ಮಂಗಳೂರು: ನಾಡಿನೆಲ್ಲೆಡೆ ನಾಗರಪಂಚಮಿ. ಆದರೆ ಈ ಕೊರೊನಾ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ. ಇಂದು ನಡೆಯುತ್ತಿರುವ ನಾಗರಪಂಚಮಿ ಪೂಜೆಗೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಾಗರಪಂಚಮಿಗೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದರೆ ಈ ಬಾರಿ ಅರ್ಚಕರಿಂದ ಮಾತ್ರ …
Read More »ಕೆಎಂಸಿಯಲ್ಲಿ ಕೊರೊನಾ ಚಿಕಿತ್ಸೆ ನಡುವೆ ಪುತ್ತಿಗೆ ಶ್ರೀಗಳಿಂದ ಪ್ರತಿದಿನ ಪೂಜೆ
ಉಡುಪಿ: ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಹರಡಿದ್ದು, ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಸ್ವಾಮೀಜಿ ವಿಶ್ರಾಂತಿಯ ಜೊತೆಗೆ ನಿರಂತರ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ. ಅನುಷ್ಠಾನಗಳನ್ನು ಮಾಡುತ್ತಿದ್ದಾರೆ. ಆaಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಗಮನಸೆಳೆದಿದೆ. ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ತಮ್ಮ ಶಾಖಾಮಠಗಳನ್ನು ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.
ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ …
Read More »ಗದಗ್ನಲ್ಲಿ ಮೂಲಭೂತ ಸೌಕರ್ಯವಿಲ್ಲದೇ ಪರದಾಡುತ್ತಿರುವ ಸ್ಥಳೀಯರು: ಕ್ಯಾರೇ ಎನ್ನದ ಜನಪ್ರತಿನಿಧಿಗಳು
ಗದಗ(ಜು.23): ಗದಗ ಜಿಲ್ಲೆ ನರಗುಂದ ತಾಲೂಕಿನ ಮೂಗನೂರು ಎನ್ನುವ ಗ್ರಾಮದಲ್ಲಿ ಸಾಕಷ್ಟು ವರ್ಷಗಳ ನಂತರ ಸುಮಾರು ನಲವತ್ತು ಕುಟುಂಬಗಳಿಗೆ ಇಂದಿರಾ ಆವಾಸ್ ಯೋಜನೆಯಡಿ ಅರ್ಹ ಫಲಾನುಭವಿಗಳ ಅನ್ವಯ ಆಶ್ರಯ ಮನೆ ದೊರೆತಿವೆ. ಮೂಲಭೂತ ಸೌಕರ್ಯಗಳ ಸಮೇತ ಆಶ್ರಯ ಕಾಲೋನಿ ನಿರ್ಮಿತವಾಗಬೇಕಾಗಿತ್ತು. 1995ರಲ್ಲಿಯೇ ಜನತಾ ಮನೆಗಳು ನಿರ್ಮಾಣವಾಗಿವೆ. ಆದರೆ ಅಂದಿನಿಂದ ಈವರೆಗೂ ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲಿನ ನಿವಾಸಿಗಳಿಗೆ ಸಿಕ್ಕಿಲ್ಲ. ಮಳೆಗಾಲ ಬಂತೆಂದರೆ ಸಾಕು ಇಲ್ಲಿನ ರಸ್ತೆಗಳೆಲ್ಲ ಕೆಸರುಗದ್ದೆಗಳಾಗಿ ಮಾರ್ಪಾಡಾಗುತ್ತವೆ. ಇಂತಹ …
Read More »ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ
ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು …
Read More »ಸೆಪ್ಟೆಂಬರ್ 5ಕ್ಕೆ ಶಾಲೆಗಳ ಬಾಗಿಲು ತೆರೆಯಲು ಸಿದ್ಧತೆ……
ಹೈದರಾಬಾದ್: ಆಂಧ್ರ ಪ್ರದೇಶ ಸರ್ಕಾರ ಸೆಪ್ಟೆಂಬರ್ 5ಕ್ಕೆ ಶಾಲೆಗಳ ಬಾಗಿಲು ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೊರೊನಾ ಅಂಕಿ ಸಂಖ್ಯೆಗಳ ಅನುಗುಣವಾಗಿ ಮುಂದಿನ ದಿನಗಳಲ್ಲಿ ಈ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆಂಧ್ರ ಸರ್ಕಾರ ತಿಳಿಸಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಜೊತೆಗಿನ ಸಭೆ ಬಳಿಕ ಮಾಧ್ಯಮಗಳ ಜೊತ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಪು ಸುರೇಶ್, ಸೆಪ್ಟೆಂಬರ್ 5ಕ್ಕೆ ಶಾಲೆ ಆರಂಭಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಆದ್ರೆ ಅಂತಿಮ ನಿರ್ಧಾರ …
Read More »ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ : ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..! ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು …
Read More »
Laxmi News 24×7