Breaking News

ರಾಜಕೀಯ

ಇಂದಿನಿಂದ SSLC ಪರೀಕ್ಷೆ ಆರಂಭ- ವಿದ್ಯಾರ್ಥಿಗಳೇ ಭಯ ಬೇಡ…….

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 8,48,203 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 10.30 ರಿಂದ 1.30 ವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡ್ಕೊಂಡಿದೆ. ಎಲ್ಲಾ ಕಡೆ ಎರಡೆರಡು ಬಾರಿ ಸ್ಯಾನಿಟೈಸ್ …

Read More »

ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕುತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ…..

ಹಾವೇರಿ: ಕೊರೊನಾ ವಾರಿಯರ್ಸ್‍ಗಳಿಗೂ ಸೋಂಕು ತಗುಲಿದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಷ್ಕಾಳಜಿ ತೋರುತ್ತಿದೆ. ಅದರಲ್ಲೂ ಈ ಜಿಲ್ಲೆಯಲ್ಲಿನ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ ಮಾಡೋ ಸಿಬ್ಬಂದಿಯಂತೂ ಕಾಳಜಿಯನ್ನೆ ವಹಿಸ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಆಗಿರೋ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಅದರಲ್ಲೂ ಹಾವೇರಿ ಜಿಲ್ಲೆಯಲ್ಲಿ ದೃಢಪಟ್ಟಿರೋ ಬಹುತೇಕ ಪ್ರಕರಣಗಳು ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರು. ಹೀಗಿದ್ದರೂ ಕ್ವಾರಂಟೈನ್ ಕೇಂದ್ರಗಳಲ್ಲಿನ ಜನರ ತಪಾಸಣೆ …

Read More »

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….

ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …

Read More »

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘

2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …

Read More »

ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಯನ್ನು ಅರಿತುಕೊಳ್ಳಲು ಸಮ ಗ್ರ ತನಿಖೆಯಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ. ದೇವೇಗೌಡರು ತಮ್ಮ ಅಭಿಪ್ರಾಯವನ್ನು ಪ್ರಕಟಣೆ ಮೂಲಕ ಹೊರಹಾಕಿದ್ದಾರೆ. ಲಡಾಖ್ ನಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಘಟನೆಯಿಂದ ದೇಶದ ಜನರು ದಿಗ್ಬ್ರಮೆ ಗೊಂಡಿದ್ದಾರೆ. ಅಲ್ಲಿನ ವಾಸ್ತವ ಸಂಗತಿ ಏನು ಎಂಬುವುದರ ಬಗ್ಗೆ ತಿಳಿಯಲು ಸಮಗ್ರ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೂ ಮಾಧ್ಯಮದವರಿಂದ …

Read More »

ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚೀನಾ-ಭಾರತದ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಕುರಿತಂತೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಂದಿಂಚನ್ನೂ ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು.   ಪ್ರಧಾನಿಗಳ ಈ ಹೇಳಿಕೆಯನ್ನೇ ಟ್ಯಾಗ್ ಮಾಡಿ ಟ್ವಿಟ್ ಮಾಡಿರುವ ರಾಹುಲ್‍ಗಾಂಧಿ ಅವರು ಚೀನಿಯರ ಆಕ್ರಮಣದಿಂದ ಕಂಗೆಟ್ಟು …

Read More »

ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು

ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …

Read More »

ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ

ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಯುವರಾಜ ಕದಂ, ಉಪಾಧ್ಯಕ್ಷ ಮಹಾದೇವಿ ಖಾನಗೌಡರ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷರ ಕಚೇರಿಯಲ್ಲಿ ಶುಕ್ರವಾರ ಸನ್ಮಾನಿಸಿದ ಅವರು, ಎಪಿಎಂಸಿ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ ಎಂದರು. ಈ …

Read More »

ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……

  ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …

Read More »

ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …

Read More »