ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಷ್ಟು ದಿನ ನಿರಾಳವಾಗಿದ್ದ ದೊಡ್ಡಬಳ್ಳಾಪುರ ತಾಲೂಕಿಗೂ ಕೊರೊನಾ ಕಾಲಿಟ್ಟಿದ್ದು, 39 ವರ್ಷದ ವ್ಯಕ್ತಿ (ರೋಗಿ ನಂಬರ್-246) ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತ ರೈಲ್ವೆ ಇಲಾಖೆಯಲ್ಲಿ ಟ್ರಾಕ್ ಮಿಷಿನ್ ಮೈಂಟೈನರ್ ಆಗಿದ್ದು, ಮಾರ್ಚ್ 14 ರಿಂದ 18ರ ನಡುವೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ದೆಹಲಿಯ ನಿಜಾಮುದ್ದೀನ್ …
Read More »ಜಮಾತ್ ನಂಜಿಗೆ ಬೆಚ್ಚಿಬಿದ್ದ ಕುಡಚಿ – ಒಂದೇ ಊರಲ್ಲಿ 10ಕ್ಕೆ ಏರಿದ ಸೋಂಕಿತರ ಸಂಖ್ಯೆ
ಬೆಳಗಾವಿ(ಚಿಕ್ಕೋಡಿ): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕರ್ನಾಟಕದಲ್ಲಿಯು ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಚ್ವು ಸೋಂಕಿತರು ಇರುವ ಪಟ್ಟಿಗೆ ಈಗ ಬೆಳಗಾವಿ ಜಿಲ್ಲೆಯು ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಭಾನುವಾರ 14 ಇದ್ದ ಸೊಂಕಿತರ ಸಂಖ್ಯೆ ಸೋಮವಾರಕ್ಕೆ 17ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಬೆಳಗಾವಿ ಜಿಲ್ಲೆ ಡೋಂಜರ್ ಝೋನ್‍ನತ್ತ ಹೆಜ್ಜೆ ಇಟ್ಟಿದೆ. ಸೋಮವಾರ ಮಧ್ಯಾಹ್ನ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಅದರಲ್ಲಿ ಬೆಳಗಾವಿ …
Read More »ವೈದ್ಯಕೀಯ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು: ಡಿಕೆಶಿ
ನೆಲಮಂಗಲ: ವೈದ್ಯಕೀಯ ಸಚಿವ ಕೆ. ಸುಧಾಕರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಕ್ಕಸಂದ್ರ ಗ್ರಾಮದಲ್ಲಿ ನೆಲಮಂಗಲ ಕಾಂಗ್ರೆಸ್ ಕಾರ್ಯಕರ್ತರಿಂದ ಕಾರ್ಯಕ್ರಮ ಆಯೋಜನೆ ಮಾಡಿ ದಿನಸಿ ವಿತರಣೆ ಮಾಡಿದರು. ಲಾಕ್ ಡೌನ್ ಸಂದರ್ಭದಲ್ಲಿ ಸಚಿವ ಸುಧಾಕರ್ ಈಜು ಕೊಳದಲ್ಲಿ ಸ್ವಿಮ್ಮಿಂಗ್ ವಿಚಾರ ಮಾತನಾಡಿದ ಡಿಕೆಶಿ, ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು …
Read More »ಯಡಿಯೂರಪ್ಪ ಪರೋಕ್ಷವಾಗಿ ಏಪ್ರಿಲ್ 15ರಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಸುಳಿವು
ಬೆಂಗಳೂರು: ಲಾಕ್ಡೌನ್ನಿಂದಾಗಿ 22 ದಿನಗಳಿಂದ ರಾಜ್ಯದೆಲ್ಲೆಡೆ ಮಾಲ್, ಬಾರ್, ಪಬ್ಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಡುವ ಸಾಧ್ಯತೆಯಿದೆ. ಲಾಕ್ಡೌನ್ ಅನ್ನು ಏ. 30ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ ಇನ್ನೂ 18 ದಿನ ಸಾರಾಯಿ ಸಿಗುವುದಿಲ್ಲ ಎಂಬ ನಿರಾಸೆ ಮದ್ಯಪ್ರಿಯರನ್ನು ಕಾಡಿತ್ತು. ಆದರೆ, ಈ ಬಗ್ಗೆ ಸದ್ಯದಲ್ಲೇ ಘೋಷಿಸಲಿರುವ ರಾಜ್ಯ ಸರ್ಕಾರ ಬುಧವಾರದಿಂದಲೇ ಸಾರಾಯಿ ಮಾರಾಟಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಹೆಚ್ಚಾಗಿದೆ.ರಾಜ್ಯದಲ್ಲಿ …
Read More »ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು,:ರಮೇಶ ಜಾರಕಿಹೊಳಿ
ಬೆಳಗಾವಿ: ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. …
Read More »ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ಪ್ರಕರಣಗಳು,ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು.
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …
Read More »ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ನಿಧನ
ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು …
Read More »ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ NIMA ವೈದ್ಯ
ಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (NIMA) ಸಂಸ್ಥೆಯ ಹಿರಿಯ ಸದಸ್ಯರಾದ ಡಾ.ಗುರುನಾಥ ಕಂಠಿಯವರು ಏಪ್ರಿಲ್ 4ರಂದು ಹುಬ್ಬಳ್ಳಿಯ ಕ್ವಾರಂಟೈನ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಕ್ವಾರಂಟೈನ್ ಸೇವೆ ಸಲ್ಲಿಸಿದ ಧಾರವಾಡ ಜಿಲ್ಲೆಯ ಪ್ರಪ್ರಥಮ NIMA ವೈದ್ಯಕೀಯ ಸಂಸ್ಥೆಯ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಯುರ್ವೇದ ವೈದ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಭರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ್ ಇವರು ಮಾರ್ಚ್ 9 ರಂದು ಕೊವಿಡ್-19 ಸೇವೆಗಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‍ವೊಂದರ ಕ್ವಾರಂಟೈನ್ …
Read More »ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸಲು ಡಿಸಿಎಂ ಕಾರಜೋಳ ಮನವಿ
ಬೆಂಗಳೂರು. : ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಷ್ಟದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ , ಭಾರತ ರತ್ನ, ಮಹಾ ಮಾನವತಾವಾದಿ ಡಾ. ಬಿ. ಆರ್ . ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಮುಂಭಾಗ ದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಮತ್ತು ಇತರೇ …
Read More »ಅನುಪಮಾ ಪರಮೇಶ್ವರನ್ ಎಫ್‍ಬಿ ಹ್ಯಾಕ್, ಫೋಟೋ ಮಾರ್ಫ್- ಗರಂ ಆದ ನಟಸಾರ್ವಭೌಮ ಬೆಡಗಿ
ಬೆಂಗಳೂರು: ಸಿನಿಮಾ ತಾರೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಗೊಳಿಸುವುದನ್ನು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಇದಕ್ಕಾಗಿ ಹಲವು ನಟಿಯರು ಮುಜುಗರಕ್ಕೆ ಈಡಾಗಿರುವುದೂ ಉಂಟು. ಇದೀಗ ನಟ ಸಾರ್ವಭೌಮ ಬೆಡಗಿ ಸಹ ಇಂತಹದ್ದೇ ಕಷ್ಟಕ್ಕೆ ಸಿಲುಕಿಕೊಂಡಿದ್ದು, ಬೇರೆ ಯುವತಿಯ ದೇಹಕ್ಕೆ ಅನುಪಮಾ ಪರಮೇಶ್ವರನ್ ಮುಖವನ್ನು ಜೋಡಿಸಲಾಗಿದೆ ಇದನ್ನು ಕಂಡ ಅವರು ಆಶ್ಚರ್ಯಕ್ಕೊಳಗಾಗಿದ್ದಾರೆ. ಇಂಟರ್ನೆಟ್ ಜಾಲಾಡಿದರೆ ನೈಜ ಫೋಟೋಗಳಿಗಿಂತ ಫೇಕ್, ಎಡಿಟೆಡ್, ಮಾರ್ಫ್ ಮಾಡಿದ ಫೋಟೋಗಳು ಕಾಣುವುದೇ ಹೆಚ್ಚು. ಅದರಲ್ಲೂ ನಟ, ನಟಿಯರ ಫೋಟೋಗಳನ್ನು …
Read More »
Laxmi News 24×7