Breaking News

ರಾಜಕೀಯ

ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …

Read More »

ವಿಜಯಪುರದಲ್ಲಿ ಕೊರೊನಾ ಸೋಂಕಿತ ವೃದ್ಧೆಯ ಪತಿ ಸಾವು

ವಿಜಯಪುರ: ಕೊರೊನಾ ಸೋಂಕಿತ ವೃದ್ಧೆಯ ಪತಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾಗಿರಬಹುದೇ ಎನ್ನುವ ಪ್ರಶ್ನೆ ಎದ್ದಿದೆ. ಇಂದು ಮಧ್ಯಾಹ್ನ ವೃದ್ಧೆಗೆ ಪಾಸಿಟಿವ್ ಬಂದಿತ್ತು. ಈ ಬೆನ್ನಲ್ಲೇ ವೃದ್ಧೆಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಒಟ್ಟು 24 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು ಇಂದು ರಾತ್ರಿ ವೃದ್ಧೆಯ ಪತಿ(69) ಮೃತಪಟ್ಟಿದ್ದಾರೆ. ಕೊರೊನಾಗೆ ವೃದ್ಧ ಮೃತಪಟ್ಟಿದ್ದಾರೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಸಾವಿಗೀಡಾದ ವ್ಯಕ್ತಿಯ ವೈದ್ಯಕೀಯ ಪರೀಕ್ಷೆಯ ವರದಿಗೆ ವಿಜಯಪುರ ಜಿಲ್ಲಾಡಳಿತ ಈಗ …

Read More »

ರಾಯಬಾಗದ ಕ್ಯಾನ್ಸರ್ ಪೀಡಿತ ಮಹಿಳೆ ಸಮಸ್ಯೆಗೆ ತುರ್ತು ಸ್ಪಂದನೆ: ಬಿ.ಎಸ್.ಯಡಿಯೂರಪ್

ಬೆಂಗಳೂರು –  ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕ್ಯಾನ್ಸರ್ ರೋಗಿಯೊಬ್ಬರಿಗೆ ವ್ಯವಸ್ಥೆಯಾಗಿದ್ದ ಆಪರೇಶನ್ ರದ್ದಾಗಿತ್ತು. ಈ ಕುರಿತು ರೋಗಿಯ ಸಂಬಂಧಿಯೊಬ್ಬರಿಂದ ಬಂದ ಮಾಹಿತಿ ಆಧರಿಸಿ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸೋಮವಾರವೇ ಆಪರೇಶನ್ ಗೆ ವ್ಯವಸ್ಥೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಶಿರಗೂರ ಗ್ರಾಮದ ಬಾಹುಸಾಬ ಲಕ್ಷ್ಮಣ್ ಕಾಂಬಳೆ ಎನ್ನುವವರು ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದರು. “ನಮ್ಮ ಮನೆಯ ಹಿರಿಯ ಮಹಿಳೆ ಕಮಲವ್ವ ಹಿಡಕಲ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. …

Read More »

ಖಾನಾಪುರ ಪೊಲೀಸರು ನಡೆಸಿದ ಮಿಂಚಿನ ದಾಳಿಯಲ್ಲಿ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲಪತ್ತೆ

ಖಾನಾಪುರ: ಗೋವಾ ರಾಜ್ಯದಲ್ಲಿ ತಯಾರಿಸುವ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಖಾನಾಪುರ ಪೊಲೀಸರು ಇಬ್ಬರನ್ನು ಬಂಧಿಸಿ ಟ್ಯಾಂಕರ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಾಲು ಸರಬರಾಜು ಮಾಡಲು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ತೆರಳಿದ್ದ ಬೆಳಗಾವಿಯ ಟ್ಯಾಂಕರ್ ಗೋವಾದಿಂದ ಬೆಳಗಾವಿಯತ್ತ ಬರುವಾಗ ಗೋವಾದ ಭಟ್ಟಿ ಮದ್ಯವನ್ನು ಮತ್ತು 8 ಬಾಕ್ಸ್ ಗೋವಾ ಮದ್ಯವನ್ನು ಹೊತ್ತು ತರುತ್ತಿದ್ದುದನ್ನು ಅರಿತ ಪೊಲೀಸರು ತಾಲ್ಲೂಕಿನ ಕಣಕುಂಬಿ …

Read More »

ಅಕ್ಕಿ ಚೀಲಗಳ ಮಧ್ಯೆ ಅಡಗಿಸಿ ಕಾರ್ಮಿಕರ ಸಾಗಿಸುತ್ತಿದ್ದ ಪಿಕಪ್ ವಾಹನ ವಶಕ್ಕೆ

ಚಿಕ್ಕಮಗಳೂರು : ಅಕ್ಕಿ ಚೀಲವನ್ನು ಆಸರೆಯಾಗಿ ಬಳಸಿಕೊಂಡು ಟಾರ್ಪಲ್ ಮುಚ್ಚಿ ಪಿಕಪ್ ವಾಹನದಲ್ಲಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಗೆ ಹೊರಟಿದ್ದ ವಾಹನವನ್ನು ವಶಕ್ಕೆ ಪಡೆದು ಜಿಲ್ಲಾ ಪೊಲೀಸರು 30 ಜನರನ್ನು ಹಾಸ್ಟೆಲ್ ಒಂದರಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯ ಗಡಿ ಪ್ರದೇಶವಾದ ಬೇಲೂರು ತಾಲೂಕಿನ ಪುರ ಎಸ್ಟೇಟ್ ನಿಂದ ಬಂದಿದ್ದ ಇವರು ತೋಟದಲ್ಲಿ ಕೆಲಸವಿಲ್ಲದೆ ಮಾಲೀಕರು ತಮ್ಮ ಮನೆಗಳಿಗೆ ತೆರಳಲು ತಿಳಿಸಿದ್ದು ಕೆಲಸವಿಲ್ಲದೆ ಹೊಟ್ಟೆ ಬಟ್ಟೆಗೂ ಕಷ್ಟವಾಗಿದೆ ವಾಹನದಲ್ಲಿ ಊರಿಗೆ ಬರುತ್ತಿದ್ದೇವೆ …

Read More »

“ಕೊರೋನಾ‌ ಹರಡುವದಂತೆ ತಡೆಯಲು ಸಾಮಾಜಿಕ‌ ಅಂತರ ಒಂದೇ ಪರಿಹಾರ”

ಬೆಳಗಾವಿ:ಕೊರೋನಾ‌ ಹರಡುವದಂತೆ ತಡೆಯಲು ಸಾಮಾಜಿಕ‌ ಅಂತರ ಒಂದೇ ಪರಿಹಾರ ಆಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಒಳ್ಳೆಯ ಕೆಲಸ‌ ಮಾಡುತ್ತಿದೆ‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು‌ ನಗರದ ಗೃಹ ಕಚೇರಿಯಲ್ಲಿ ಮಾತನಾಡಿ ಪಡಿತರ ‌ವಿತರಣೆಯಲ್ಲಿ‌ ಜನರಿಗೆ ತೊಂದರೆಯಾಗುತ್ತಿರುವುದು ನಿಜವಾಗಿದೆ.ಬೇರೆ ಜಿಲ್ಲೆಗಳಿಂದ ವಲಸೆ ಬಂದವರಿಗೆ ರೇಷನ ನೀಡಲು ನಿರಾಕರಿಸಲಾಗುತ್ತಿದೆ. ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ‌ತರುತ್ತೇನೆ ಎಂದರು. ದುಡಿಯುವ ಕೂಲಿ‌ ಕಾರ್ಮಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಮತ್ತೆ ಹದಿನೈದು ದಿನ‌ …

Read More »

ತಬ್ಲಿಘಿ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು – ಸಿಟಿ ರವಿ

ಬೆಂಗಳೂರು: ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು ಎಂದು ಕನ್ನಡ ಮತ್ತು ಸಂಸ್ಕøತಿ ಖಾತೆಯ ಸಚಿವ ಸಿಟಿ ರವಿ ಪ್ರಶ್ನಿಸಿದ್ದಾರೆ.   ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ವಿಚಾರಕ್ಕೆ, ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ …

Read More »

ಕೊರೊನಾಗಿಂತಲೂ ಭಯಾನಕ ಪೊಲೀಸ್ ವೈರಸ್’

– ಆರೋಪಿಯ ವಿರುದ್ಧ ಎಫ್‍ಐಆರ್ ಮಂಗಳೂರು: ಜಗತ್ತು ಕೊರೊನಾ ಎಂಬ ಮಹಾಮಾರಿಗೆ ನಲುಗಿ ಹೋಗಿದೆ. ವೈದ್ಯರು, ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ರಾತ್ರಿ ಹಗಲೆನ್ನದೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಕೂಡ ಕಟ್ಟು ನಿಟ್ಟಾಗಿ ನಿಯಮ ಪಾಲಿಸುವಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ಪೊಲೀಸರ ಬಗ್ಗೆ ಕಿಡಿಗೇಡಿಯೊಬ್ಬ ಕೀಳು ಮಟ್ಟದ ಪೋಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ …

Read More »

ಗುಣಮುಖರಾದ ಸೋಂಕಿತರಿಗೆ ಹೂ ಗಿಡ, ಹಣ್ಣು ಕೊಟ್ಟು ಬೀಳ್ಕೊಡುಗೆ

ಇದುವರೆಗೂ 8 ಮಂದಿ ಸೋಂಕಿತರು ಗುಣಮುಖ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 5 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಒಂದೇ ಕುಟುಂಬದ ನಾಲ್ವರು ಏಕಕಾಲದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಗುಣಮುಖರಾದ ನಾಲ್ವರನ್ನ ಇಂದು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಂದೇ ಕುಟುಂಬದ ನಾಲ್ವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ಮನೆಗೆ ಹೋಗುವಾಗ ಸರದಿ ಸಾಲಿನಲ್ಲಿ ನಿಂತು …

Read More »

ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ಟ್ವಿಟ್ಟರ್‌ಗೆ ಮರಳಿದ ಪದ್ಮಾವತಿ

ಬೆಂಗಳೂರು: ಸ್ಯಾಂಡಲ್‍ವುಡ್ ಬ್ಯೂಟಿಕ್ವೀನ್ ರಮ್ಯ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಬಂದಿದ್ದು, ಅವರ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಒಂದು ಕಾಲದಲ್ಲಿ ಚಂದನವದ ಬುಹುಬೇಡಿಕೆಯ ನಟಿಯಾಗಿ ಮರೆದಿದ್ದ ರಮ್ಯಾ, ಸದ್ಯ ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಸಖತ್ ಸಕ್ರಿಯವಾಗಿ ಇದ್ದ ರಮ್ಯಾ ಅವರು, ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ್ಯಕ್ಟಿವ್ ಆಗಿ ಇಟ್ಟುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ …

Read More »