Breaking News

ರಾಜಕೀಯ

ಶಿಕ್ಷಣ ಸಚಿವರ ಸಂದೇಶ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗೆ

ಬೆಂಗಳೂರು, ಮಾ.16- ಮಾರ್ಚ್ 4ರಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ ಈವರೆಗೆ ಸುಲಲಿತವಾಗಿ ನಡೆದಿದ್ದು, ಇನ್ನೂ ಏಳು ದಿನಗಳ ಕಾಲ ನಡೆಯಲಿರುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಎದುರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ. ಈಗಾಗಲೇ 39 ವಿಷಯಗಳ ಪರೀಕ್ಷೆ ಮುಗಿದಿದೆ. ಇನ್ನೂ 7 ಪರೀಕ್ಷೆಗಳು ನಡೆಯಬೇಕಿದೆ. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯಿರಿ. ವಿಜಯಪುರದಲ್ಲಿ ಯಾರೋ ಇಬ್ಬರು ಕಿಡಿಗೇಡಿಗಳು ಮಾಡಿದ ಕೃತ್ಯದಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವದಂತಿ …

Read More »

ಕವಟಗಿಮಠ ಪುತ್ರಿ ವಿವಾಹ: ಸಿಎಂ ಭೇಟಿಗೂ ಮುನ್ನವೇ ಕಾಲ್ಕಿತ್ತ ಉಮೇಶ ಕತ್ತಿ

ಬೆಳಗಾವಿ: ಸಚಿವ ಸ್ಥಾನದ ಬಹು ನೀರಿಕ್ಷೆಯಲ್ಲಿದ್ದ ಬಿಜೆಪಿಯ ಹಿರಿಯ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಯಾಗದೆ ಹೊಗಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದೆ. ಇದರ ನಡುವೆಯೂ ಸಹ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿಯ ಮದುವೆ ಬೆಳಗಾವಿಯಲ್ಲಿ ನಡೆದಿದೆ. ಈ ಸಮಾರಂಭಕ್ಕೆ ಆಗಮಿಸಿದ ಉಮೇಶ ಕತ್ತಿ ಅವರು, ಸಿಎಂ ಅವರು ಬರುವುದಕ್ಕೂ …

Read More »

ಖಾಲಿ ಸರ್ಕಾರಿ ಕಟ್ಟಡಗಳನ್ನು ಕೊರೋನ ಚಿಕಿತ್ಸೆಗೆ ಬಳಸಿ : ಎಚ್‌ಡಿಕೆ ಸಲಹೆ

ಬೆಂಗಳೂರು,ಮಾ.15-ಕೊರೋನ ವೈರಸ್ ಸೋಂಕಿತರಿಗೆ ಖಾಲಿ ಇರುವ ಸರ್ಕಾರಿ ಕಟ್ಟಡಗಳನ್ನು ಚಿಕಿತ್ಸೆ ನೀಡಲು ಬಳಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ ಎಂದು ಅವರು ಟ್ವೀಟ್‍ನಲ್ಲಿ ಪ್ರಶ್ನಿಸಿದ್ದಾರೆ. ಕೊರೋನ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮವಾಗಿದ್ದು ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಆಸ್ಪತ್ರೆ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೂ ಚಿಕಿತ್ಸೆ ನೀಡುವ …

Read More »

“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್”

“ಮನೆ ಮನೆಯಲ್ಲೂ ಪೋಷಣ್ ಪಕ್ವಾಡ್” ನಿಪ್ಪಾಣಿ ಮತಕ್ಷೇತ್ರದ ಯಮಗರ್ಣಿ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ ಕಟ್ಟಡದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ, ಯವರ ಪೋಷಣ ಅಭಿಯಾನದ ಮುಂದವರೆದ ಪೋಷಣ ಪಕ್ವಾಡ್ ಯೋಜನೆಯ ತಿಳವಳಿಕೆ ಕಾರ್ಯಕ್ರಮದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ …

Read More »

ಮದುವೆಗಳನ್ನು ಮುಂದೂಡಲು ಆದೇಶಿಸಿ ತಾನೇ ಭವ್ಯ ಮದುವೆಯಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ

ಕೊರೊನಾ ವೈರಸ್‌ ಹರಡುವಿಕೆಯ ಮುನ್ನೆಚ್ಚರಿಕೆಯ ಕ್ರಮವಾಗಿ 100 ಜನರಿಗಿಂತ ಹೆಚ್ಚು ಸೇರುವ ವಿವಾಹಗಳನ್ನು ಮುಂದೂಡುವಂತೆ ಆದೇಶಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಬೆಳಗಾವಿಯಲ್ಲಿ ಭವ್ಯ ವಿವಾಹದಲ್ಲಿ ಭಾಗಿಯಾಗಿ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಉದ್ಯಮ್‌ ಬಾಗ್‌ ಕೈಗಾರಿಕಾ ಪ್ರದೇಶದ ಶಗುನ್‌ ಗಾರ್ಡ್‌‌ನ್ಸ್‌ನಲ್ಲಿ ನಡೆದ ಬಿಜೆಪಿ ಎಂಎಲ್‌ಸಿ ಮಹಾಂತೇಶ್‌ ಕವತಗಿಮಠ್‌ರವರ ಮಗಳ ಮದುವೆಯಲ್ಲಿ ಯಡಿಯೂರಪ್ಪನವರು ಭಾಗವಹಿಸಿದ್ದು ಆ ಮದುವೆಯಲ್ಲಿ ಸುಮಾರು 3000ಕ್ಕಿಂತ ಹೆಚ್ಚಿನ ಜನ ಭಾಗವಹಿಸಿದ್ದರು ಎನ್ನಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಸೇರಿದಂತೆ ಹಲವಾರು …

Read More »

ಸುದ್ದಿ ಶೀಘ್ರದಲ್ಲೇ ಬಿಜೆಪಿ ಸರಕಾರ ಪತನಗೊಳ್ಳಲಿದೆ: ತಿಮ್ಮಾಪೂರ ವಿಶ್ವಾಸ

ಬೆಳಗಾವಿ:ಬಿಜೆಪಿಯಲ್ಲಿ ತೀವ್ರತರಹದ ಭಿನ್ನಮತದ ಬೆಂಕಿ ಕಾಣಿಸಿಕೊಂಡಿದ್ದು ರಾಜ್ಯ ಬಿಜೆಪಿ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ’ ಎಂದು ವಿಧಾನಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪೂರ ಹೇಳಿದ್ದಾರೆ‌. ಅವರು ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಸಚಿವ ಸಂಪುಟದಲ್ಲಿ ಅರ್ಧದಷ್ಟು ಮಂದಿ ನಮ್ಮ ಪಕ್ಷದಿಂದ ಹೋದವರೇ ಇದ್ದಾರೆ. ಅವರೆಲ್ಲರೂ ಅಸಮಾಧಾನಗೊಂಡಿದ್ದಾರೆ. ಒಬ್ಬರ ಮುಖದಲ್ಲೂ ಕಳೆ ಇಲ್ಲ. ಇದು, ಸರ್ಕಾರಕ್ಕೆ ಮುಳುವಾಗಲಿದೆ’ ಎಂದಿದ್ದು, ಶೀಘ್ರದಲ್ಲೇ ಸರಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ. ಸರ್ಕಾರ ಬೀಳಲೆಂದು ನಾವು ಯಾವುದೇ ತಂತ್ರಗಳನ್ನು ಮಾಡಬೇಕಾದ …

Read More »

ಕೊರೊನಾ ವೈರಸ್: ಕೆಎಲ್ಇ ಆಸ್ಪತ್ರೆ ವಿಶೇಷ ಮನವಿ ಜನಸಂದಣಿ ತಪ್ಪಿಸಲು ಸಹಕರಿಸಿ -ಡಾ. ಎಂ ವಿ ಜಾಲಿ ಮನವಿ

ಕೊರೊನಾ ವೈರಸ್: ಕೆಎಲ್ಇ ಆಸ್ಪತ್ರೆ ವಿಶೇಷ ಮನವಿ ಜನಸಂದಣಿ ತಪ್ಪಿಸಲು ಸಹಕರಿಸಿ -ಡಾ. ಎಂ ವಿ ಜಾಲಿ ಮನವಿ ಬೆಳಗಾವಿ – ಕೊರೊನಾ ವೈರಸ್ ಅಲ್ಲಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ವಿಶೇಷ ಮನವಿ ಮಾಡಿದೆ. ವಿವಿಧ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ದಾಖಲಾಗಿರುವ ರೋಗಿಗಳನ್ನು ನೋಡಲು ಅವರ ಸಂಬಂಧಿಕರು ಆಸ್ಪತ್ರೆಗೆ ಭೇಟಿ ನೀಡುವುದನ್ನು ನಿಲ್ಲಿಸಿ, ರೋಗಿಗಳಿಗೆ ಚಿಕಿತ್ಸೆ …

Read More »

ಮಾರ್ಕೆಂಡೇಯ ನದಿಗೆ ಅಡ್ಡಲಾಗಿ 250 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಾಣ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ:ಮಾರ್ಕೆಂಡೇಯ ನದಿಗೆ ಅಡ್ಡಲಾಗಿ 250 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಾಣ : ಸಚಿವ ರಮೇಶ ಜಾರಕಿಹೊಳಿ ಬೃಹತ್ ನೀರಾವರಿ ಇಲಾಖೆಯಿಂದ ನಗರದ ಹೊರವಲಯದಲ್ಲಿರುವ ಮಾರ್ಕೆಂಡೇಯ ನದಿಗೆ ಅಡ್ಡಲಾಗಿ 250 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ರವಿವಾರದಂದು ನಗರದ ಹೊರವಲಯದಲ್ಲಿ ಗಟ್ಟಿ ಬಸವಣ್ಣ ಮಲ್ಟಿಪರ್ಪಜ ಯೋಜನೆಯ ಸ್ಥಳ ಪರೀಶಿಲನೆ ನಡೆಸಿ ಮಾತನಾಡುತ್ತಾ ಈ ಯೋಜನೆ ನನ್ನ ಬಾಲ್ಯದ ಕನಸಾಗಿದ್ದು, ಸರಕಾರದಿಂದ …

Read More »

ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ

ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ  ರಾಜ್ಯದಲ್ಲಿ 100 ಜನ ಕೊರೋನಾ ಶಂಕಿತರ ಮೇಲೆ ನಿಗಾ/ಕೊರೋನಾ ವೈರಸ್ ತಡೆಯಲು ಸರ್ಕಾರ ಸನ್ನದ್ಧ/ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ಸರಕಾರ ಕೊರೋನಾ ಎದುರಿಸಲು ಸನ್ನದ್ದವಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ 100ಜನ ಕರೋನಾ ಶಂಕಿತರ ಮೇಲೆ ನಿಗಾ ಇಡಿಸಲಾಗಿದೆ. ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಅವರು ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಾಂತೇಶ್ ಕವಟಗಿಮಠ …

Read More »

Be Alert : ಭಾರತದಲ್ಲಿ ಕೊರೊನ ಪೀಡಿತರ ಸಂಖ್ಯೆ 103ಕ್ಕೇರಿಕೆ..!

ನವದೆಹಲಿ/ಮುಂಬೈ, ಮಾ.15- ದೇಶದಲ್ಲಿ ಮಾರಕ ಕೊರೊನಾ ಸೋಂಕಿನ ದೃಢೀಕೃತ ಪ್ರಕರಣಗಳ ಸಂಖ್ಯೆ 103ಕ್ಕೆ ಏರಿದೆ. ಅಲ್ಲದೆ ಇನ್ನೂ ಹಲವು ಶಂಕಿತರಲ್ಲಿ ಮತ್ತಷ್ಟು ಸೋಂಕು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಮುಂದಿನ 24 ತಾಸುಗಳಲ್ಲಿ ಈ ಸಂಖ್ಯೆಯಲ್ಲಿ ಏರಿಕೆಯಾಗುವ ಆತಂಕವಿದೆ. ದೇಶದಲ್ಲಿ ಅತ್ಯಂತ ಹೆಚ್ಚು ಸೋಂಕು ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಅಲ್ಲಿ ಕೊರೊನಾ ಪೀಡಿತರ ಸಂಖ್ಯೆ 31ಕ್ಕೇರಿದೆ. ಕೇರಳ ಎರಡನೆ ಸ್ಥಾನದಲ್ಲಿದ್ದು , ಅಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ …

Read More »