ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್‍ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್‍ನಲ್ಲಿ …
Read More »ಕುಮಟಳ್ಳಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ರಮೇಶ್ ಜಾರಕಿ ಹೊಳಿ
ಬೆಳಗಾವಿ, ಫೆ.22-ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಇದೇ 26ರಂದು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕಣಕುಂಬಿಗೂ ಭೇಟಿ ನೀಡಲಿದ್ದೇನೆ. ಗೋವಾ ಮುಖ್ಯಮಂತ್ರಿ ಬೇಕಾದರೆ ನ್ಯಾಯಾಲಯದ ಮೊರೆ ಹೋಗಲಿ. ಮಹದಾಯಿ ವಿಚಾರದಲ್ಲಿ ನಮ್ಮ ಪರ ನ್ಯಾಯ ಸಿಗುವ ವಿಶ್ವಾಸವಿದೆ. ನೀರಾವರಿ ಯೋಜನೆಯಲ್ಲಿ ಯಾವುದೇ ತಾರತಮ್ಯ ಒದಗಿಸುವುದಿಲ್ಲ. …
Read More »ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು:ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ
ರಾಮನಗರ: ಪಾಕ್ ಪರ ಘೋಷಣೆ ಕೂಗುತ್ತಿರುವುದನ್ನು ನೋಡಿ ನಿಜವಾಗಿಯೂ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು ಅಂತ ಹೇಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮುಂದೆ ಇನ್ಯಾರು ಆ ರೀತಿ ಮಾಡಬಾರದು, ಆ ರೀತಿ ಕ್ರಮ ಕೈಗೊಂಡರೆ ಬೇರೆಯವರಿಗೂ …
Read More »ದೇಶದೆಲ್ಲೆಡೆ ಸಡಗರದ ಮಹಾ ಶಿವರಾತ್ರಿ, ದೇಗುಲಗಳಲ್ಲಿ ಮಹಾದೇವನಿಗೆ ವಿಶೇಷ ಪೂಜೆ
ಫೆ.21- ಮಹಾಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದೆಲ್ಲೇಡೆ ಇರುವ ಶಿವ ದೇವಾಲಯಗಳು ಮತ್ತು ಭವ್ಯ ಪ್ರತಿಮೆಗಳ ಸ್ಥಳಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಹಾ ಶಿವರಾತ್ರಿ ಪ್ರಯುಕ್ತ ದೇಶಾದ್ಯಂತ ಹಲವಾರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾಗರಣೆ ನಿಮಿತ್ತ ಅಹೋರಾತ್ರಿವಿವಿಧ ಸಮಾರಂಭಗಳು ಆಯೋಜಿತವಾಗಿವೆ. ಶಿವನ ದೇಗುಲಗಳಲ್ಲಿ ಭಕ್ತರು ಉಪವಾಸ ಮತ್ತು ಜಾಗರಣೆ ಮೂಲಕ ಶಿವ ಸ್ಮರಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ವಿಶ್ವವಿಖ್ಯಾತ ಕಾಶಿ ವಿಶ್ವನಾಥ ದೇವಾಲಯ, ಕರ್ನಾಟಕದ ಕಾಡು …
Read More »ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ:ಸಚಿವರಾದ ರಮೇಶ್ ಜಾರಕಿಹೊಳಿ
ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ… ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ …
Read More »(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ
ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ 10 ಲಕ್ಷ ಭದ್ರತಾ ಠೇವಣಿ ಹಾಗೂ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಆಯೋಜಕರೇ ಹೊತ್ತುಕೊಳ್ಳಬೇಕು ಶಾಂತಿಯುತ ಪ್ರತಿಭಟನೆ ನೆಪದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಬೆಂಗಳೂರು,ಫೆ.21-ಕೇಂದ್ರ ಸರ್ಕಾರದ ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ನಿನ್ನೆ ಫ್ರೀಡಂಪಾರ್ಕ್‍ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಮೂಲ್ಯ ಲಿಯೋನ …
Read More »ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು:ಡಿ.ಕೆ ಶಿವಕುಮಾರ್
ಬೆಂಗಳೂರು: ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು ಅಂತ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಆಕೆಯ ಭಾಷಣಗಳನ್ನು ನಾನು ನೋಡಿದ್ದೇನೆ. ಅದರಲ್ಲಿ ಆಕೆ ಈಗ ಹೇಳಿದ ಮಾತನ್ನು ಕೇಳಿರಲಿಲ್ಲ. ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ನೀಡಬೇಕಿತ್ತು. ಆದರೆ ಮಧ್ಯದಲ್ಲಿ ಏನೋ …
Read More »ದುಷ್ಕರ್ಮಿಗಳು ನಾನು ಗುಂಡಾ, ಅಯೋಗ್ಯ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ.
ಧಾರವಾಡ: ದುಷ್ಕರ್ಮಿಗಳು ನಾನು ಗುಂಡಾ, ಅಯೋಗ್ಯ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಗುಂಡಾ, ಅಯೋಗ್ಯ ಆಗಿದ್ದರೆ ಅದನ್ನ ತುಂಬಿದ ಸಭೆಯಲ್ಲಿ ಸಾಬೀತು ಪಡಿಸಲಿ. ಆರೋಪವನ್ನ ಸಾಬೀತು ಮಾಡಿದರೇ ಮೂರುಸಾವಿರ ಮಠದ ಕರ್ತೃ ಗದ್ದುಗೆ ಎದುರೇ ಪ್ರಾಣ ಬಿಡುತ್ತೇನೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸವಾಲ್ ಹಾಕಿದ್ದಾರೆ. ಧಾರವಾಡ ಲಿಂಗಾಯತ ಭವನದಲ್ಲಿ ನಡೆದ ಭಕ್ತರ ಮತ್ತು ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮೂರುಸಾವಿರ ಮಠದ ಗದ್ದುಗೆಗಾಗಿ ಸಭೆಗಳನ್ನು ಮಾಡುತ್ತಿಲ್ಲ. …
Read More »ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು
ಬೆಂಗಳೂರು, ಫೆ.20- ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಲುವಾಗಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 7,770 ಶಾಲಾ ಕೊಠಡಿಗಳು ಬಿದ್ದು ಹೋಗಿವೆ. ಅವುಗಳ ರಿಪೇರಿಗೆ 1500 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಬೇಕಾಗಿದೆ ಎಂದಾಗ ಸಚಿವ ಸುರೇಶ್‍ಕುಮಾರ್ ಮಾತನಾಡಿ, 7,770 …
Read More »ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ
ಗೋಕಾಕ: ಗ್ರಾಮಗಳ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಆಶೋತ್ತರಗಳು ಪೂರ್ಣವಾಗ ಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರ ಅತ್ಯಾವಶ್ಯಕವಾಗಿದೆ. ನೂತನ ತಾಲೂಕು ಪಂಚಾಯತಗಳಲ್ಲಿ ಸಾಮಥ್ರ್ಯ ಸೌಧ ನಿರ್ಮಾಣಕ್ಕೆ 45 ಲಕ್ಷ ರೂ.ಗಳು ಮಂಜೂರಿಸಲಾಗುವದು ಎಂದು ಮೈಸೂರಿನ ಎಸ್.ಐ.ಆರ್.ಡಿ ತರಭೇತಿ ಸಂಯೋಜಕ ಸಿ.ವಿಜಯಕುಮಾರ ಹೇಳಿದರು. ಅವರು ನಗರದ ಸಾಮಥ್ರ್ಯ ಸೌಧ, ತಾಪಂ ಕಛೇರಿಗಳಲ್ಲಿ ಜರುಗಿದ ಜನಪ್ರತಿನಿಧಿಗಳ ಸ್ಯಾಟಕಾಮ್ ತರಭೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಸ್ಥಳ ಪರಿಶೀಲನೆ ಮಾಡಿದರು. ಜನಪ್ರತಿನಿಧಿಗಳು ಅಗತ್ಯ …
Read More »
Laxmi News 24×7