Breaking News

ರಾಜಕೀಯ

ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಾಹುಕಾರ್

ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಮಕ್ಕಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಅವರ ಪಾಲಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲು ಹಾಗೂ ಅಗತ್ಯ ಚಿಕಿತ್ಸಾ ವ್ಯವಸ್ಥೆಗಳನ್ನು ತಕ್ಷಣ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ …

Read More »

ನಿಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ

ಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ ವಿದ್ಯುತ್ ಸಂಘದ ಚುನಾವಣೆಯಲ್ಲಿ ದಿ.ಅಪ್ಪಣ್ಣಗೌಡ ಪಾಟೀಲರ ಪೆನೆಲ್ ನ್ನು ಆಶೀರ್ವದಿಸಿದರೆ ಉತ್ಕೃಷ್ಟ ದರ್ಜೆಯ ಸೇವೆ- ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜೊಲ್ಲೆಗೆ ಸಾಥ್ ನೀಡಿದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಕೇಶ್ವರ – ದಿ. ಅಪ್ಪಣ್ಣಗೌಡ ಪಾಟೀಲರ ಪೆನೆಲ್ ಬೆಂಬಲಿಸಿ ಆಶೀರ್ವಾದ ಮಾಡಿದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಸಹಕಾರಿ ಸಂಘವು ಅಭಿವೃದ್ಧಿ ಪಥದತ್ತ ಸಾಗುವುದಲ್ಲದೇ ಗ್ರಾಹಕರಿಗೆ ಉತ್ತಮ ದರ್ಜೆಯ …

Read More »

ನದಿಯಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್: 10 ಜನರು ದುರ್ಮರಣ

ಉತ್ತರಾಖಂಡದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆ ನಡುವೆ ಟ್ರ್ಯಾಕ್ಟರ್ ಒಂದು ನದಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಟನ್ಸ್ ನದಿಯಲ್ಲಿ ಈ ಗಹ್ಟನೆ ನಡೆದಿದೆ. ಕಾರ್ಮಿಕರಿದ್ದ ಟ್ರ್ಯಾಕ್ಟರ್ ನದಿಗೆ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ನಡುವೆಯೇ ನದಿ ದಾಟುವ ವೇಳೆ …

Read More »

ವಿಶೇಷಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇ‌ರ್ ವಿತರಣೆ

ವಿಶೇಷಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇ‌ರ್ ವಿತರಣೆ ನನ್ನ ಸಹೋದರರಾದ ಶ್ರೀ ಅಶ್ವತ್ ವೈದ್ಯ ಅವರು ಸವದತ್ತಿಯ ಗೃಹ ಕಚೇರಿಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಯೋಗದೊಂದಿಗೆ, ವಿಶೇಷ ಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇರ್ ಹಾಗೂ ಇನ್ನಿತರ ಉಪಕರಣಗಳನ್ನು ವಿತರಿಸಿದರು.

Read More »

ವಿರೋಧ ಪಕ್ಷದ ಶಾಸಕರಿಗೆ ತಲಾ ₹25 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರ ತೀರ್ಮಾನ

ಬೆಂಗಳೂರು: ವಿಪಕ್ಷಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಹಂಚಿಕೆ ಮಾಡಿದೆ. ಈಗಾಗಲೇ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಮಂಜೂರು ಮಾಡಿ, ಕ್ರಿಯಾ ಯೋಜನೆ ಸಲ್ಲಿಸಲು ಸೂಚಿಸಿದ್ದ ಸರ್ಕಾರ, ಇದೀಗ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ‌ 25 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ. ಅನುದಾನ ಹಂಚಿಕೆ ಸಂಬಂಧ ಪ್ರತಿಪಕ್ಷ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ …

Read More »

ಗ್ರೇಟರ್ ಬೆಂಗಳೂರು ಟೌನ್‌ಶಿಪ್​ಗೆ ವಿರೋಧ: ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಟೌನ್ ಶಿಪ್​​ಗೆ ಭೂ ಸ್ವಾಧೀನ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು, ಇಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭೂ‌ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಇಂದು ಭೇಟಿ ನೀಡಿತ್ತು. …

Read More »

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಏನು ನಮೂದಿಸಬೇಕೆಂದು ನಾಳೆ ನಿರ್ಧಾರ: ವಚನಾನಂದ ಶ್ರೀ

ಹಾವೇರಿ: ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಏನು ನಮೂದು ಮಾಡಬೇಕು ಎಂಬ ಬಗ್ಗೆ ಇದೇ ಸೆಪ್ಟಬರ್​ 17 ರಂದು (ಬುಧವಾರ) ಸ್ಪಷ್ಟ ನಿರ್ಧಾರ ತಗೆದುಕೊಳ್ಳುತ್ತೇವೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದರು. ನಗರದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಲಿಯವರೆಗೂ ಪಂಚಮಸಾಲಿಗಳು ಯಾವುದೇ ನಿರ್ಧಾರ ಕೈಗೊಳ್ಳಬಾರದು. ಪಂಚಮಸಾಲಿ ವಿಚಾರದಲ್ಲಿ ಕರ್ನಾಟಕದ ಯಾವುದೇ ಮಠ, ಸ್ವಾಮೀಜಿಗಳ ಹೇಳಿಕೆಗಳಿಗೆ ಕಿವಿಗೊಡಬೇಡಿ ಎಂದು ಕರೆ ನೀಡಿದರು. ಪಂಚಮಸಾಲಿಗಳಿಗೂ …

Read More »

ಮೈಸೂರು ಅರಮನೆಯ ದರ್ಬಾರ್ ಹಾಲ್​ನಲ್ಲಿ ರತ್ನಖಚಿತ ಸ್ವರ್ಣ ಸಿಂಹಾಸನದ ಜೋಡಣೆ

ಮೈಸೂರು: ರಾಜವಂಶಸ್ಥರು ಅರಮನೆಯಲ್ಲಿ ನವರಾತ್ರಿ ಪೂಜಾ ಕೈಂಕರ್ಯಗಳನ್ನು ನಡೆಸುವ ಹಿನ್ನೆಲೆಯಲ್ಲಿ ಇಂದು ದರ್ಬಾರ್ ಹಾಲ್​​ನಲ್ಲಿ ಮಹಾರಾಣಿ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಸಿಬ್ಬಂದಿ ಹಾಗೂ ನುರಿತ ಗೆಜ್ಜಗಳ್ಳಿಯವರು ರತ್ನಖಚಿತ ಸ್ವರ್ಣ ಸಿಂಹಾಸನದ ಜೋಡಣೆ ಕಾರ್ಯ ನಡೆಸಿದರು. ಇದಕ್ಕೂ ಮುನ್ನ ದರ್ಬಾರ್ ಹಾಲ್​​ನಲ್ಲಿ ಗಣಪತಿ ಹೋಮ, ಚಾಮುಂಡಿ ತಾಯಿಯ ಪೂಜೆ, ಹೋಮ-ಹವನಗಳನ್ನು ನೆರವೇರಿಸಲಾಯಿತು. ಬಳಿಕ ಭದ್ರತಾ ಕೊಠಡಿಯಲ್ಲಿದ್ದ ಸಿಂಹಾಸನವನ್ನು ತಂದು ಜೋಡಿಸಲಾಯಿತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸಾರ್ವಜನಿಕರಿಗೆ ಅರಮನೆ …

Read More »

ಸಂಕಷ್ಟ ಬಂದಾಗ ಸಿದ್ಧರಾಮಯ್ಯಗೆ ಕುರುಬರು ನೆನಪಾಗ್ತಾರೆ: ಹೆಚ್.ವಿಶ್ವನಾಥ್

ಮೈಸೂರು: ಸಿಎಂ ಸಿದ್ಧರಾಮಯ್ಯ ತಮ್ಮ ಬೆಳವಣಿಗೆಗಾಗಿ ಕುರುಬರ ತನು ಮನ ಎಲ್ಲವನ್ನೂ ಬಳಸಿಕೊಂಡು ಮೇಲೆ ಬಂದಿದ್ದಾರೆ. ಆದರೆ ಕುರುಬ ಸಮುದಾಯಕ್ಕಾಗಿ ಅವರು ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಈಗ ತಮಗೆ ಸಂಕಷ್ಟ ಬಂದಿದೆ. ಅದಕ್ಕಾಗಿ ಕುರುಬರು ನೆನಪಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಇದು ಸ್ವಾಗತಾರ್ಹ ಎಂದರು. ಸಿದ್ದರಾಮಯ್ಯ …

Read More »

ಎರಡು ನೂರಾ ಒಂದನೇ ಜಯಂತೋತ್ಸವ ವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಅರ್ಥಪೂರ್ಣವಾಗಿ ಆಚರಿಸಬೇಕೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿಪರ ಹೋರಾಟ ಸಮಿತಿಯು ಆಗ್ರಹ

ಬೆಳಗಾವಿ: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮದ ಕಹಳೆ ಮೊಳಗಿಸಿದ ವೀರರಾಣಿ ಕಿತ್ತೂರ ಚನ್ನಮ್ಮಾಜಿಯವರ ೨೦೦ನೇ ಜಯಂತಿಯನ್ನು ಕಳೆದ ವರ್ಷ ಅದ್ದೂರಿಯಾಗಿ ಆಚರಿಸಲಾಗಿದೆ ಈ ಬಾರಿಯೂ ಈ ಬಾರಿಯೂ ಎರಡು ನೂರಾ ಒಂದನೇ ಜಯಂತೋತ್ಸವ ವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಅರ್ಥಪೂರ್ಣವಾಗಿ ಆಚರಿಸಬೇಕೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿಪರ ಹೋರಾಟ ಸಮಿತಿಯು ಆಗ್ರಹಿಸಿದೆ ಈ ಸಂಬಂಧವಾಗಿ ಆರ್ ಸಿ ಯು ಕುಲಪತಿಗಳಾದ ಪ್ರೊ.ಸಿ.ಎಂ. ತ್ಯಾಗರಾಜ ಅವರನ್ನು ಭೇಟಿ ಮಾಡಿದ ನಿಯೋಗವು ಮನವಿಯನ್ನು …

Read More »