Breaking News

ರಾಜಕೀಯ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ನಮ್ಮ ಹಠವಲ್ಲ, ರಿಕ್ವೆಸ್ಟ್ ಮಾತ್ರ: ಸಚಿವ ಸತೀಶ್ ಜಾರಕಿಹೊಳಿ

ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ನಮ್ಮದೇನು‌ ಹಠ ಇಲ್ಲ. ಹೈಕಮಾಂಡ್​ಗೆ ರಿಕ್ವೆಸ್ಟ್ ಮಾತ್ರ ಮಾಡಿದ್ದೇನೆ. ಮುಂದಿನ ನಿರ್ಧಾರ ವರಿಷ್ಠರಿಗೆ ಬಿಟ್ಟದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಹೋಗಿ ಹೈಕಮಾಂಡ್‌ಗೆ ಪ್ರಾರ್ಥನೆ ಮಾಡುವುದು‌ ಮಾತ್ರ. ಹೈಕಮಾಂಡ್ ಬಳಿ ಹೇಳಲು ನಮ್ಮ ಪಕ್ಷದಲ್ಲಿ ಎಲ್ಲರೂ ಸ್ವತಂತ್ರರಿದ್ದಾರೆ. ಅಂತಿಮವಾಗಿ ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ …

Read More »

ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವಿಕೆ ಪ್ರಕ್ರಿಯೆ ವಿಸ್ತರಣೆ ಮಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ನಡೆದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು, ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ …

Read More »

ಗಂಗಾವತಿ : ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋದ ತೆಲಂಗಾಣದ ವೈದ್ಯೆ –

ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್​​ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್​ ರಾವ್ ಎಂದು ಗುತಿಸಲಾಗಿದೆ. ಇವರು ಹೈದರಾಬಾದ್​​ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ …

Read More »

ಬೆಳಗಾವಿ ಜಿಲ್ಲಾ ಟಿವ್ಹಿ ಮೀಡಿಯಾ ಸಂಘ ಅಸ್ತಿತ್ವಕ್ಕೆ

ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು.‌ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ ಟಿವಿ …

Read More »

ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…

ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು… ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬವಾಗುವುದು …

Read More »

ಬೆಂಗಳೂರಿನ‌ ಗವಿಗಂಗಾದೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಮಕರ ಸಂಕ್ರಮಣದ ದಿನದಂದು ಸೂರ್ಯ ಸ್ಪರ್ಶ ಮಾಡುವದನ್ನ ನಾವು ಕೇಳಿದ್ದೇವೆ.ಆದರೆ ಇಲ್ಲೊಂದು ಶಿವನ‌ ದೇವಸ್ಥಾನದಲ್ಲಿ ದಿನನಿತ್ಯ ಈಶ್ವರಲಿಂಗಕ್ಕೆ ಸೂರ್ಯದೇವ ಸ್ಪರ್ಶ ಮಾಡಿ ಹೋಗುತ್ತಿರುವದು ಕೌತುಕಕ್ಕೆ ಕಾರಣವಾಗಿದೆ.

ಬೆಂಗಳೂರಿನ‌ ಗವಿಗಂಗಾದೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಮಕರ ಸಂಕ್ರಮಣದ ದಿನದಂದು ಸೂರ್ಯ ಸ್ಪರ್ಶ ಮಾಡುವದನ್ನ ನಾವು ಕೇಳಿದ್ದೇವೆ.ಆದರೆ ಇಲ್ಲೊಂದು ಶಿವನ‌ ದೇವಸ್ಥಾನದಲ್ಲಿ ದಿನನಿತ್ಯ ಈಶ್ವರಲಿಂಗಕ್ಕೆ ಸೂರ್ಯದೇವ ಸ್ಪರ್ಶ ಮಾಡಿ ಹೋಗುತ್ತಿರುವದು ಕೌತುಕಕ್ಕೆ ಕಾರಣವಾಗಿದೆ. ಹಾಗಾದ್ರೆ ಈ ವಿಶೇಷ ದೇವಸ್ಥಾನ ಇರುವದಾದರೂ ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ. : ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹಳೇ ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಐತಿಹಾಸಿಕ ಈಶ್ವರಲಿಂಗ ದೇವಸ್ಥಾನ ಅಚ್ಚರಿಗೆ ಸಾಕ್ಷಿಯಾಗಿದೆ. ದೇವಸ್ಥಾನದಲ್ಲಿ ಪ್ರತಿನಿತ್ಯ …

Read More »

ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?

ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು? ಅಧಿಕಾರ ಸೂತ್ರ ಹಂಚಿಕೆ ವಿಚಾರ ಡಿ.ಕೆ.ಶಿ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಸಿಎಂ ಸಿದ್ಧರಾಮಯ್ಯ ಹೇಳಿಕೆ ಅಧಿಕಾರ ಸೂತ್ರ ಹಂಚಿಕೆ ಕುರಿತು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಪವರ ಶೇರಿಂಗಗೆ ಸಂಬಂಧಿಸಿದಂತೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಎಂದಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ …

Read More »

ಬಾಗಪ್ಪ ಹರಿಜನ, ಕೊಲೆ ಮಾಡಿದ ಆರೋಪಿಗಳು

ವಿಜಯಪುರ, ಫೆಬ್ರವರಿ 14: ಭೀಮಾತೀರದ ನಟೋರಿಯಸ್​ ರೌಡಿ ಬಾಗಪ್ಪ ಹರಿಜನ (Bagappa Harijan) ಹತ್ಯೆ ಪ್ರಕರಣ ವಿಜಯಪುರ (Vijayapura) ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್​ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), …

Read More »

ತರಕಾರಿ ಖರೀದಿಸುತ್ತಿದ್ದ ಮಹಿಳೆಯ ಜೇಬಿನಲ್ಲೇ ಫೋನ್ ಸ್ಫೋಟ: ಇದಕ್ಕೆ ಕಾರಣವೇನು?, ಎಚ್ಚರ ಬಹಿಸುವುದು ಹೇಗೆ?

ಫೋನ್ ಬಿದ್ದು ಒಡೆದರೆ ಅಂತಹ ಪರಿಸ್ಥಿತಿಯಲ್ಲಿ ಬ್ಯಾಟರಿಯ ಒಳಗಿನ ರಚನೆಯು ಹಾನಿಗೊಳಗಾಗಬಹುದು. ಇದು ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗಬಹುದು. ಇದಲ್ಲದೆ, ಫೋನ್ ಅನ್ನು ದೀರ್ಘಕಾಲದವರೆಗೆ ಸೂರ್ಯನ ಬೆಳಕಿನಲ್ಲಿ ಇರಿಸಿದರೆ ಅಥವಾ ಯಾವುದೇ ಮಾಲ್‌ವೇರ್‌ನಿಂದಾಗಿ ಪ್ರೊಸೆಸರ್ ಮೇಲೆ ಅತಿಯಾದ ಒತ್ತಡ ಹೇರಿದರೆ, ಅದು ಬ್ಯಾಟರಿಗೆ ಹಾನಿಯನ್ನುಂಟುಮಾಡುತ್ತದೆ. ಬಹಳ ಆಘಾತಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸುತ್ತಿರುವುದನ್ನು ಕಾಣಬಹುದು. ಅದೇ ಕ್ಷಣದಲ್ಲಿ, …

Read More »

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಮುದ್ರಿಸಿದ ಮದ್ಯ ಕಂಪನಿ

ದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು ಮದ್ಯ ಕಂಪೆನಿ ತನ್ನ ಬಿಯರ್‌ ಕ್ಯಾನ್‌ಗಳಲ್ಲಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿಯವರ ಫೋಟೋವನ್ನು ಪ್ರಿಂಟ್‌ ಮಾಡಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಕಂಡು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಿಟೀಷರ ದಾಸ್ಯದಿಂದ ದೇಶವವನ್ನು ಮುಕ್ತಗೊಳಿಸುವುದರ ಜೊತೆಗೆ …

Read More »