ಮೈಸೂರು: ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಚಾಮುಂಡಿ ಬೆಟ್ಟ ಗ್ರಾಮ ಹಾಗೂ ಇಲ್ಲಿನ ನಾಗರಿಕ ಬಂಧುಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಚಲನವಲನಗಳು ಕಂಡುಬಂದಿರುವುದಾಗಿ ವರದಿಯಾಗಿದೆ. ಈ ವಿಷಯದ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು …
Read More »ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆ
ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆಗಳಲ್ಲಿ ಪಾಲ್ಗೊಂಡು, ಮುಂಬರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.
Read More »ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಬುಧವಾರದಂದು* *ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ-* ನಾನು ಮತ್ತು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. …
Read More »ಸಿಸಿಬಿ ಪೊಲೀಸ್ ಸಿಬ್ಬಂದಿಯ ಸೋಗಿನಲ್ಲಿ ಬಾಂಗ್ಲಾ ಪ್ರಜೆಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದಲ್ಲಿ ಬಂಧಿಸಲಾಗಿದೆ. ರಾಜ್ಯ ಜನ ಸದ್ಭಾವನಾ ಸಂಘಟನೆಯ ಸದಸ್ಯರು ನೀಡಿದ್ದ ದೂರಿನ ಅನ್ವಯ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್‌ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ …
Read More »‘ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ’
ಬೆಂಗಳೂರು: ಕೋಮು ಭಾವನೆಗಳನ್ನು ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದರು. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ …
Read More »ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು
ಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರ ಎಂದರೆ ವೃಷಭ ರೂಪಿ ಶನೇಶ್ವರ ಮೂಕಪ್ಪಸ್ವಾಮಿ ಈ ನಿಧಿಗಳ್ಳರನ್ನು ಪತ್ತೆ ಮಾಡಿದೆ ಎಂದು ಗ್ರಾಮಸ್ಥರು ಹೇಳಿದ್ದು, ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಹಾನಗಲ್ ತಾಲೂಕು ಮಲಗುಂದ ಗ್ರಾಮದ ಹೊರವಲಯದಲ್ಲಿ ಕೋಣಕಲ್ಲು ಭರಮಪ್ಪ ದೇವರ ಕಲ್ಲು ಇತ್ತು. ಅದರ ಕೆಳಗೆ ಸಾಕಷ್ಟು ನಿಧಿ ಇದೆ ಎಂಬ ಆಸೆಗೆ …
Read More »ಮೂನ್ನೂರು ರೂಪಾಯಿ ಹಣಕ್ಕಾಗಿ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ
ಬಳ್ಳಾರಿ: ಕುಡಿದ ಮತ್ತಿನಲ್ಲಿ ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನ ಬಳಿ ಇದ್ದ ಮೂನ್ನೂರು ರೂಪಾಯಿ ಕಸಿದುಕೊಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಶುಕ್ರವಾರ (ಸೆ. 5ರಂದು) ನಡೆದಿದೆ. ಸೋಮವಾರ ಆರೋಪಿಗಳನ್ನು ಬಂಧಿಸಲಾಗಿದ್ದು, ಮೃತಪಟ್ಟ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇನ್ನೂ ತಡರಾತ್ರಿ ನಡೆದ ಕಾರಣ ಆರಂಭದಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಯಾರೋ ಗಿಡದ ಪೊದೆಯಲ್ಲಿ ಮಲಗಿಕೊಂಡಿದ್ಧಾರೆ ಎಂದು ನೋಡಿಲ್ಲ. ಮಧ್ಯಾಹ್ನದ ನಂತರ ಸ್ಥಳೀಯರೊಬ್ಬರು ಪೊಲೀಸರಿಗೆ …
Read More »ಅಂಬಾವಿಲಾಸ ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರ ಅದ್ಭುತ
ಮೈಸೂರು: ಮೈಸೂರಿನ ಪ್ರಮುಖ ಆಕರ್ಷಣೆ ಅಂಬಾವಿಲಾಸ ಅರಮನೆ. ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಈ ಅಂಬಾವಿಲಾಸ ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರದ ಇತಿಹಾಸ ಏನು? ಎಂಬ ಕುತೂಹಲಕಾರಿ ಅಂಶಗಳನ್ನು ಒಳಗೊಂಡ ವಿಶೇಷ ವರದಿ ಇಲ್ಲಿದೆ. ಮೈಸೂರು ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರ ನೋಡುವುದೇ ಒಂದು ಖುಷಿ. ಮೈಸೂರು ಅರಮನೆಯ ದೀಪಾಲಂಕಾರಕ್ಕೆ ಒಟ್ಟು 96,700 ವಿಶೇಷ ಬಲ್ಬ್ಗಳನ್ನು ಅಳವಡಿಸಲಾಗುತ್ತದೆ. ವಿಶೇಷವೆಂದರೆ ಹಳೆಯ ಮಾದರಿಯ ಬುರುಡೆಯ ಆಕಾರದ ಎಂ ಆಕೃತಿಯ ತಂತಿಯನ್ನೊಳಗೊಂಡ 15 ವ್ಯಾಟ್ ಸಾಮರ್ಥ್ಯದ …
Read More »ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ… ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದೆ. ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದು, ವಸತಿ ಇಲಾಖೆಯಿಂದ ರಾಜ್ಯದಲ್ಲಿ ಕೈಗೊಂಡಿರುವ ಕೆಲಸಗಳು ಹಾಗೂ ಮುಂದೆ ಕೈಗೊಳ್ಳಲ್ಲಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಹಲವಾರು …
Read More »ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ; ತಾಯಿ, ಓರ್ವ ಮಗ ಪಾರು
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ ಕಾಲುವೆ ಬಳಿ ಮಂಗಳವಾರ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮರೂರ ಹತ್ತಿರ ಹಾದುಹೋಗುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, 7 ವರ್ಷ ಹಾಗೂ ಏಳು ತಿಂಗಳು ವಯಸ್ಸಿನ ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ. ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮತ್ತು …
Read More »