Home / ರಾಜಕೀಯ (page 40)

ರಾಜಕೀಯ

ಲೋಕಸಭೆ ಅಖಾಡ 2024 ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬೆಳಗಾವಿ: ಟಿಕೆಟ್‌ ಪಡೆಯುವ ವಿಚಾರದಲ್ಲಿ ಸಾಕಷ್ಟು ಆಕ್ಷೇಪಣೆಗಳನ್ನು ಎದುರಿಸಿದ್ದ ಜಗದೀಶ ಶೆಟ್ಟರ್‌ ಈಗ ಒಂದು ಹಂತದ ಆತಂಕ ನಿವಾರಿಸಿಕೊಂಡಿದ್ದಾರೆ. ಪಕ್ಷದ ಪ್ರಮುಖ ಪ್ರಭಾವಿ ನಾಯಕ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾ ನಾಯಕರ ಜತೆ ನಡೆದ ಸಂಧಾನ ಸಭೆ ಹಾಗೂ ಪ್ರಚಾರ ರ್ಯಾಲಿ ಶೆಟ್ಟರ್‌ ಅವರಿಗೆ ನೈತಿಕ ಬಲ ತಂದುಕೊಟ್ಟಿದೆ.   ಸಭೆಯಲ್ಲಿ ಜಗದೀಶ ಶೆಟ್ಟರ್‌ ಬಗ್ಗೆ ನಿರೀಕ್ಷೆ ಮಾಡಿದಂತೆ ಸ್ಥಳೀಯ ಮುಖಂಡರಿಂದ ಹಾಗೂ ಕಾರ್ಯಕರ್ತರಿಂದ ಅಂತಹ ಅಸಮಾಧಾನಗಳು ಕಂಡು ಬರಲಿಲ್ಲ. ಆದರೆ ಟಿಕೆಟ್‌ …

Read More »

‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು;17 ಸೈಟ್, 27 ಎಕರೆ ಕೃಷಿ ಭೂಮಿ:

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಕೊಪ್ಪಳದ ಬಿ.ಟಿ. ಪಾಟೀಲ ನಗರದ ಬಾಡಿಗೆ ಮನೆ, ಗದಗದ ಮನೆ, ಕಚೇರಿ ಹಾಗೂ ರೋಣ ತಾಲೂಕಿನ ಮೆಣಸಗಿಯಲ್ಲಿರುವ ಮನೆ ಸೇರಿ ಒಟ್ಟು ಎಂಟು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಸಹದೇವ ಕೊಪ್ಪಳ …

Read More »

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು

Read More »

ಕಾಂಗ್ರೆಸ್​ ತೊರೆದು ಶಿಂಧೆ ಬಣ ಸೇರ್ಪಡೆಯಾದ ಬಾಲಿವುಡ್​ ನಟ ಗೋವಿಂದ; ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂಬೈ: ಹಿರಿಯ ಬಾಲಿವುಡ್​ ನಟ, ಮಾಜಿ ಸಂಸದ ಗೋವಿಂದ ಗುರುವಾರ (ಮಾರ್ಚ್​ 28) ಕಾಂಗ್ರೆಸ್​ ತೊರೆದು ಶಿವಸೇನೆ (ಏಕನಾಥ್​ ಶಿಂಧೆ ಬಣ) ಸೇರ್ಪಡೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್​ ಶಿಂಧೆ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೋವಿಂದಾ ಅವರು ಮುಂಬೈ ವಾಯುವ್ಯ ಕ್ಷೇತ್ರದಿಂದ ಶಿವಸೇನೆ ಟಿಕೆಟ್ ಪಡೆದು ಸ್ಪರ್ಧಿಸುವ ಇರಾದೆ ಹೊಂದಿದ್ದಾರೆಂದು ಮೂಲಗಳು ತಿಳಿಸಿವೆ. 2004ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೋವಿಂದ ಬಿಜೆಪಿಯ ಧೀಮಂತ …

Read More »

ಕೆ.ಆರ್.ಎಸ್. ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದ ಹೈಕೋರ್ಟ್

ಬೆಂಗಳೂರು: ಕೆ.ಆರ್.ಎಸ್. ಅಣೆಕಟ್ಟಿನ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು ತಜ್ಞರ ತೀರ್ಮಾನವೇ ಅಂತಿಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಣೆಕಟ್ಟೆಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಮೊದಲಿಗಿಂತಲೂ ಈಗ ಹೆಚ್ಚಿದೆ ಎಂದು ನ್ಯಾಯಾಲಯ ತಿಳಿಸಿದೆ.ಸ್ಟೋನ್ ಕ್ರಷರ್ ಗೆ ಅವಕಾಶ ಕೋರಿ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಮಂಚಮ್ಮದೇವಿ ಸ್ಟೋನ್ ಕ್ರಶರ್ ಮತ್ತು ಎಂ ಸ್ಯಾಂಡ್ ಮಾಲೀಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಮುಖ್ಯ …

Read More »

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ.

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ. ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಅರಿಸಿನ ಮುಂತಾದವುಗಳ ಇಳುವರಿ ಕುಸಿಯಲು ಇದು ಕಾರಣವಾಗಿದೆ. ಅಥಣಿ ತಾಲ್ಲೂಕಿನಲ್ಲಿ ದ್ರಾಕ್ಷಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಕಲ್ಲಂಗಡಿ, ಕಾಗವಾಡ ತಾಲ್ಲೂಕಿನಲ್ಲಿ ಹಸಿ ಮೆಣಸಿನಕಾಯಿ, ರಾಯಬಾಗ ತಾಲ್ಲೂಕಿನಲ್ಲಿ ಅರಿಸಿನ, ನಿಪ್ಪಾಣಿ ತಾಲ್ಲೂಕಿನಲ್ಲಿ ತರಕಾರಿ ಹೆಚ್ಚಾಗಿ ಬೆಳೆದಿದ್ದಾರೆ. ನೀರಿಲ್ಲದೇ ತೋಟಗಾರಿಕೆ ಬೆಳೆಯ ಇಳುವರಿ ಈ ಬಾರಿ ಕುಂಠಿತವಾಗಿದೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ …

Read More »

ಅನಧಿಕೃತ ಆನ್‌ಲೈನ್ ಕೇಂದ್ರಕ್ಕೆ ಬೀಗ

ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್‌ಲೈನ್ ಕೇಂದ್ರದ ಮೇಲೆ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಹಾಕಿದೆ. ಸರ್ಕಾರದಿಂದ ಅನುಮತಿ ಪಡೆಯದೇ ಅರಭಾವಿ ಗ್ರಾಮದ ಆನಂದ ಕಡ್ಡಿ ಎಂಬುವವರಿಗೆ ಸೇರಿದ ಕೇಂದ್ರ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿತ್ತು. ಆಧಾರ್, ಪಡಿತರ, ಪಾನ್ ತಿದ್ದುಪಡಿ ಹಾಗೂ ಹೊಸ ಅರ್ಜಿಗಳನ್ನು ಪಡೆಯಲು ಸಾರ್ವಜನಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರು ತಹಶೀಲ್ದಾರ್‌ಗೆ ದೂರು …

Read More »

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Read More »

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

ಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ ಕೆಲಸ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಇಲ್ಲಿ ಬುಧವಾರ ನಡೆದ ಮುಖಂಡರ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮಾಧ್ಯಮವನ್ನೂ ಅವರ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಬಿಜೆಪಿಯವರ ವಿರುದ್ಧ ಮಾತನಾಡಲಾಗದಂತೆ, ಪ್ರಶ್ನಿಸಿ ಬರೆಯಲಾಗದಂತೆ ಮಾಡಿದ್ದಾರೆ. ಭಯದ ವಾತಾವರಣ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದರು.

Read More »

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ:

ಬೆಂಗಳೂರು, ಮಾ.28: ಎಸ್‌ಎಸ್‌ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆಬೆಂಗಳೂರಿನರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ.   …

Read More »