Breaking News

ರಾಜಕೀಯ

ಕಾಮಗಾರಿ ನಡೆಯುತ್ತಿದ್ದ ಜಾಗದ ಮೋರಿಯೇ ಇತನ ಬಾಳಿಗೆ ಕಂಟಕ

ಬೆಂಗಳೂರು, (ಜನವರಿ 03): ಬೆಂಗಳೂರಿನ ಹೆಸರಘಟ್ಟ ರಸ್ತೆಯ ಲಕ್ಷ್ಮಿಪುರದ ನಿವಾಸಿ ಹರೀಶ್ ನಿನ್ನೆ ರಾತ್ರಿ 9.5ರ ಸುಮಾರು ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ‌ ಹರೀಶ್, ರಾತ್ರಿ ಊಟ ತೆಗೆದುಕೊಂಡು ತನ್ನ ಮನೆಗೆ ಹೊರಟಿದ್ದ. ಈ ವೇಳೆ ರಸ್ತೆಯ ಪಕ್ಕದಲ್ಲಿನ ತಡೆಗೋಡೆ ಇಲ್ಲದ ಜಾಗಕ್ಕೆ ಹೋಗಿ ಮೂರ್ತ ವಿಸರ್ಜನೆಗೆ ಹೋಗಿದ್ದಾನೆ ಅಷ್ಟೇ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದ್ದಾನೆ. ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು …

Read More »

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ಸಹ ಸತೀಶ್​ನ ಲವ್ ಪ್ರಪೋಸ್​ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ …

Read More »

ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ

ನಾಳೆ ಶನಿವಾರ ಒಂದು ದಿನ ಕಳೆದರೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಕರ್ನಾಟಕ ನಾಲ್ಕು ನಿಗಮಗಳ ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು …

Read More »

ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು

ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು …

Read More »

ರಾತ್ರಿ ಔತಣಕೂ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ

ಬೆಂಗಳೂರು(ಜ.03): ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.  ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ …

Read More »

ಬಿಜೆಪಿಯವರು ಎಲ್ಲರ ರಾಜೀನಾಮೆ ಕೇಳುತ್ತಾರೆ

ಬೆಂಗಳೂರು: ನಾವೆಲ್ಲರೂ ನಮ್ಮ ಇಲಾಖೆಯ ಕಾರ್ಯವೈಖರಿಯ ರಿಪೋರ್ಟ್ ಕಾರ್ಡ್ ಅನ್ನು ಹೈಕಮಾಂಡ್​​ಗೆ ನೀಡಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.‌ ಬೆಂಗಳೂರಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಮ್ಮ‌ ಬಳಿ ರಿಪೋರ್ಟ್ ಕೇಳಿತ್ತು, ಕೊಟ್ಟಿದ್ದೇವೆ. ಇಲಾಖೆಯ ಕೆಲಸ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೇಳಿದ್ದರು. ಸಚಿವರೆಲ್ಲರೂ ಅವರವರ ಕಾರ್ಯವೈಖರಿ ಬಗ್ಗೆ ವರದಿ ನೀಡಿದ್ದಾರೆ ಎಂದರು. ಸಚಿವ ಸಂಪುಟ ಪುನರ್​​ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬಳಿಯೇ ನೀವು ಕೇಳಬೇಕು. …

Read More »

ಐಶ್ವರ್ಯ ಗೌಡ ಮನೆ ಜಾಲಾಡಿದ ಪೊಲೀಸರು

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿಸಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಆರ್.ಆರ್.ನಗರ ಪೊಲೀಸರು, ಸರ್ಚ್ ವಾರೆಂಟ್ ಪಡೆದು ಬುಧವಾರ ಆರೋಪಿ ಐಶ್ವರ್ಯ ಗೌಡ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. 3.25 ಕೋಟಿ ರೂ. ಹಾಗೂ 430 ಗ್ರಾಂ ಚಿನ್ನಾಭರಣ ವಂಚಿಸಿರುವುದಾಗಿ ಆರೋಪಿಸಿ ಶಿಲ್ಪಾ ಗೌಡ ಎಂಬವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ …

Read More »

ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಯತ್ನಾಳ್

ಬೆಂಗಳೂರು: ಬಿಜೆಪಿಯಿಂದ ನನ್ನನ್ನು ಯಾಕೆ ಉಚ್ಛಾಟನೆ ಮಾಡುತ್ತಾರೆ. ನನ್ನನ್ನು ಉಚ್ಛಾಟಿಸಲಾಗುತ್ತದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಜೊತೆಗೂ ಸಹ ನನಗೆ ಅಡ್ಜಸ್ಟ್​ಮೆಂಟ್ ಇಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …

Read More »

ಬಿಜೆಪಿಯ ಮಾಜಿ ಶಾಸಕರಾದ ಎಸ್.‌ ಎ ರಾಮದಾಸ್‌ ಹಾಗೂ ಎಲ್.‌ ನಾಗೇಂದ್ರ ಲೋಕಾಯುಕ್ತ ವಿಚಾರಣೆಗೆ ಹಾಜರು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಹಂಚಿಕೆ ವಿಚಾರ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಇಂದು ಬಿಜೆಪಿಯ ಮಾಜಿ ಶಾಸಕರಾದ ಎಸ್.‌ ಎ ರಾಮದಾಸ್‌ ಹಾಗೂ ಎಲ್.‌ ನಾಗೇಂದ್ರ ಅವರನ್ನ ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ರಾಮದಾಸ್‌ 5 …

Read More »

ಹಾವೇರಿಯಲ್ಲಿ ಗಾಡಾ ಸ್ಪರ್ಧೆ

ಹಾವೇರಿ : ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆಗಳು ಎಂದು ಹೋರಿ ಬೆದರಿಸುವ ಸ್ಪರ್ಧೆ, ಗಾಡಾ ಓಡಿಸುವ ಸ್ಪರ್ಧೆ ಮತ್ತು ಟಗರು ಕಾಳಗ. ಸುಗ್ಗಿ ಮುಗಿಯುತ್ತಿದ್ದಂತೆ ರೈತರು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಈ ರೀತಿಯ ಸ್ಪರ್ಧೆ ಆಯೋಜಿಸುತ್ತವೆ. ಹೊಸವರ್ಷ ಮತ್ತು ಸಂಕ್ರಾಂತಿ ಅಂಗವಾಗಿ ಹಾವೇರಿಯಲ್ಲಿ ಖಾಲಿ ಗಾಡಾ ಓಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೂ ಸಾವನ್ನಪ್ಪಿದ ಕೊಬ್ಬರಿ ಹೋರಿಗಳ ಸವಿನೆನಪಿಗಾಗಿ ಗಾಡಾ ಸ್ಫರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಹಾವೇರಿ, ಬೆಳಗಾವಿ, ಮಹಾರಾಷ್ಟ್ರ …

Read More »