Breaking News

ರಾಜಕೀಯ

ಸಾರಿಗೆ ಬಸ್​ ದರ ಪರಿಷ್ಕರಣೆಗೆ ಹುಬ್ಬಳ್ಳಿ ಸಾರ್ವಜನಿಕರ ಅಭಿಪ್ರಾಯ

ಹುಬ್ಬಳ್ಳಿ: ರಾಜ್ಯ ಸರ್ಕಾರ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರ ಪರಿಷ್ಕರಿಸುವ ನಿರ್ಧಾರ ಕೈಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆಯಾಗುತ್ತಿರುವುದಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಶಿಕುಮಾರ್ ಹಿರೇಮಠ ಎಂಬವರು ಪ್ರತಿಕ್ರಿಯಿಸಿ, “ಬಸ್​ ದರ ಏರಿಕೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವದರ ಜೊತೆಗೆ …

Read More »

ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್​ ದರ, ನಾವ್​ ಏನ್​ ಮಾಡೋಣ ನೀವೇ ಹೇಳಿ’

ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್​ ದರ, ನಾವ್​ ಏನ್​ ಮಾಡೋಣ ನೀವೇ ಹೇಳಿ’: ವಡಗಾವ ನಿವಾಸಿ ಸಂಜಯ ಜಯಗೌಡ ಅವರು ಮಾತನಾಡಿ, ”ರಾಜ್ಯ ಸರ್ಕಾರ ಇಷ್ಟು ದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿತ್ತು. ಆದರೆ, ಈಗ ಬಸ್ ದರ ಏರಿಸಿ ಪುರುಷರ ಹಣವನ್ನು ಮಹಿಳೆಯರಿಗೆ ಕೊಡುತ್ತಿರುವುದು ಸರಿಯಲ್ಲ. ದುಡಿಯುವ ಕೈಗಳಿಗೆ ಕೆಲಸ ಕೊಡಿ. ಅವರೇ ನಿಮಗೆ …

Read More »

ಯುವತಿಯ ಕುಟುಂಬದವರ ಮೇಲೆ ಹಲ್ಲೆ ಮಾಡಿ ಆತ್ಮಹತ್ಯೆ ಮಾಡಿ ಕೊಂಡ?

ಬಳ್ಳಾರಿ: ಯುವತಿ ಮತ್ತವರ ಮನೆಯವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಭಗ್ನ ಪ್ರೇಮಿಯೊಬ್ಬ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರಿನ ಯಶವಂತನಗರ ಬಳಿ ನಡೆದಿದೆ. ನವೀನ್​ ಕುಮಾರ್‌ ಮೃತ ಭಗ್ನ ಪ್ರೇಮಿ. ಹಲ್ಲೆಯಿಂದ ಯುವತಿ ಮತ್ತವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯುವತಿಯ ಅಣ್ಣನಿಗೆ ಬಲವಾಗಿ ಪೆಟ್ಟು ಬಿದ್ದಿದೆ. ಹೊಸಪೇಟೆ ತಾಲೂಕಿನ ಪಿ.ಕೆ. ಹಳ್ಳಿ ಮೂಲದ ನವೀನ್​ ಕುಮಾರ್‌ ಎಂಬಾತ ಯುವತಿಯನ್ನು ಬಲವಂತದಿಂದ ಕರೆದುಕೊಂಡು ಹೋಗಿ ತಾಳಿ ಕಟ್ಟಿದ್ದು, ನಿನ್ನೆ (ಶುಕ್ರವಾರ) …

Read More »

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ಪ್ರಯಾಣ ದರ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ಪ್ರಯಾಣ ದರ ಪರಿಷ್ಕರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು ಮಧ್ಯರಾತ್ರಿಯಿಂದ ಶೇ 15ರಷ್ಟು ಟಿಕೆಟ್ ಏರಿಕೆಯ ಪರಿಷ್ಕೃತ ದರ ಅನ್ವಯವಾಗಲಿದೆ. ಹೀಗಿದೆ ಬಸ್​​ ಪ್ರಯಾಣದ ದರ …

Read More »

ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ

ಬಂಟ್ವಾಳ: ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್​ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್​ನಲ್ಲಿ ಆಗಮಿಸಿದ ತಂಡ …

Read More »

ಬೆಂಗಳೂರು: KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದ್ದು, ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು: KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದ್ದು, ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ.‌ ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ನಮಗೆ …

Read More »

ಸಾರಿಗೆ ನಿಗಮಗಳ ಪರಿಸ್ಥಿತಿ ಸುಧಾರಣೆ ಬಗ್ಗೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ (

ಬೆಂಗಳೂರು: ಸರ್ಕಾರ ವಾರ್ಷಿಕ 2,000 ಕೋಟಿ ರೂ. ಅನುದಾನ ನೀಡಿದರೆ ರಸ್ತೆ ಸಾರಿಗೆ ನಿಗಮಗಳ ಪರಿಸ್ಥಿತಿ ಸುಧಾರಣೆಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.‌ ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ವಾರ್ಷಿಕ ರಸ್ತೆ ಸಾರಿಗೆ ನಿಗಮಗಳಿಗೆ 2,000 ಕೋಟಿ ಅನುದಾನ ನೀಡಿದರೆ ಪರಿಸ್ಥಿತಿ ಸುಧಾರಣೆ ಆಗಲಿದೆ. ಈಗ ವಾರ್ಷಿಕ 500-300 ಕೋಟಿ ರೂ. ವರೆಗೆ ಅನುದಾನ ನೀಡಲಾಗುತ್ತಿದೆ. ರಸ್ತೆ ಸಾರಿಗೆ ನಿಗಮಗಳ ಸುಧಾರಣೆ ಕ್ರಮಗಳ ಬಗ್ಗೆ …

Read More »

ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ

ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ: ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ್ದ ಸಚಿವ ಸತೀಶ್‌ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ನಾವು ಸೇರಿದ್ದೇವೆ ಎಂದು ಹೇಳಿದ್ದರು. ಕುವೆಂಪು ನಗರದ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ನಾವು ಅವರ ಮನೆಗೆ ಹೋಗುತ್ತೇವೆ. ಅವರು ನಮ್ಮ ಮನೆಗೆ ಬರುತ್ತಾರೆ. ಸಿಎಂ …

Read More »

‘ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು:C.M.

ಬೆಂಗಳೂರು: ”ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ವಿಧಾನಸೌಧದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ”ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆಯಾ ಎಂಬ ಪ್ರಶ್ನೆಗೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು, ಅವೆಲ್ಲಾ ಸುಳ್ಳು. ಯಾವ ಬದಲಾವಣೆಯೂ ಇಲ್ಲ. ಯಾವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು. ”ಊಟಕ್ಕೆ ಸೇರಿದರೆ ಅದನ್ನೇ ಸಭೆ ನಡೆಸಿದ್ದಾರೆ ಎಂದು ಊಹೆ ಮಾಡಿದರೆ ಏನು …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಣ ರಾಜಕೀಯ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ರಾಜ್ಯದ ನಾಯಕರೊಂದಿಗೆ ಸುದೀರ್ಘ ಚರ್ಚೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಬಣ ರಾಜಕೀಯವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಬಿಜೆಪಿ ನಾಯಕರುಗಳ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ್ದ ಜೆ.ಪಿ.ನಡ್ಡಾ, ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಲು ಏನೆಲ್ಲಾ ಮಾಡಬೇಕು, ಪಕ್ಷದ ಮಟ್ಟದಲ್ಲಿ ಯಾವ ತೀರ್ಮಾನಗಳು ಆಗಬೇಕು, ಯಾವ ರೀತಿ ಪಕ್ಷದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬೆಲ್ಲ ವಿಚಾರವಾಗಿ ರಾಜ್ಯ ಬಿಜೆಪಿಯ ಪ್ರಮುಖ ಮುಖಂಡರ ಜತೆ ಸುದೀರ್ಘ …

Read More »