ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಸುಸೂತ್ರವಾಗಿ ಜರುಗಿದೆ. ಇಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಪೊಲೀಸರು ಸೇರಿದಂತೆ ಗುಪ್ತಚರ ಸಿಬ್ಬಂದಿಗಳನ್ನು ನೇಮಕ ಮಾಡಿ ಯಾವುದೇ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು. ರಾಜ್ಯದ 204 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ – ಕಾಲೇಜುಗಳಲ್ಲಿ ಪರೀಕ್ಷೆ ನಡೆದಿದ್ದು, ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಪರೀಕ್ಷೆ ಒಂದು ಹಾಗೂ ಮಧ್ಯಾಹ್ನ 2 …
Read More »ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ: ₹10 ಲಕ್ಷ ಪರಿಹಾರ ಘೋಷಣೆ
ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುವುದಾಗಿ ಮತ್ತು ಮೃತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು. ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಚಿವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. …
Read More »ಬೆಂಗಳೂರಲ್ಲಿ ರೂಮ್ಮೇಟ್ನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ರೂಮ್‌ಮೇಟ್‌ನನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರ ಮೂಲದ ನಾಗರಾಜ್ (36) ಬಂಧಿತ ಆರೋಪಿ. ಡಿಸೆಂಬರ್ 26 ರಂದು ತನ್ನ ರೂಮ್‌ಮೇಟ್ ಶ್ರೀನಿವಾಸ್ (45) ಎಂಬಾತನಿಗೆ ವಾಟರ್ ಹೀಟರ್ ಕಾಯಿಲ್‌ನಿಂದ ಹೊಡೆದು ಹತ್ಯೆಗೈದು ನಾಗರಾಜ್ ಪರಾರಿಯಾಗಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಟಿ. ನರಸೀಪುರ ಮೂಲದವರಾದ ಇಬ್ಬರೂ ಸಹ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಚೆನ್ನಮ್ಮನ ಕೆರೆ ಅಚ್ಚುಕಟ್ಟು …
Read More »ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 9 ಜನ ಅಯ್ಯಪ್ಪ ಮಾಲಾಧಾರಿಗಳಲ್ಲಿ ಐವರು ಸಾವನ್ನಪ್ಪಿದ್ದು, ಉಳಿದ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಮೃತ ಮಾಲಾಧಾರಿ. ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಇವರು ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಏಳು ದಿನಗಳಿಂದ ಕೆಎಂಸಿಆಎರ್ಐನ …
Read More »ಗುತ್ತಿಗೆದಾರ ಸಚಿನ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು. ಇದಕ್ಕೂ ಮೊದಲು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಎಂಎಲ್ಸಿ ಎನ್. ರವಿಕುಮಾರ್ ಆಗ್ರಹಿಸಿದರು.
ಬೆಂಗಳೂರು: “ಗುತ್ತಿಗೆದಾರ ಸಚಿನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಆಗಬೇಕು. ಸಚಿವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಡಬೇಕು” ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,” ಹೆಣ್ಣುಮಕ್ಕಳ ದುರ್ಬಳಕೆಯ ಸಂಚು ಸೇರಿದಂತೆ ಅನೇಕ ವಿಷಯಗಳು ಸಚಿನ್ ಡೆತ್ನೋಟಿನಲ್ಲಿವೆ” ಎಂದು ತಿಳಿಸಿದರು. “ತನಿಖೆ ನಡೆಯಲೆಂದು ಮುಂಚಿತವಾಗಿ ತಿಳಿಸಿದರೆ ಬಚಾವ್ ಆಗಬಹುದೆಂದು ಪ್ರಿಯಾಂಕ್ ಅವರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ಈಶ್ವರಪ್ಪನವರ ರಾಜೀನಾಮೆ …
Read More »ಡಿಸೆಂಬರ್ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರ?
ಬೆಂಗಳೂರು: ಡಿಸೆಂಬರ್ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ಸೋಮವಾರ ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಹೆಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಡೆಸಲಿರುವ ಸಭೆಯನ್ನು ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ. “ಸರ್ಕಾರ …
Read More »ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ
ಹಾಪುರ: ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ . ಆಕೆ 70 ಅಡಿ ಎತ್ತರದಿಂದ ಮೇಲ್ಸೇತುವೆಯಿಂದ ನದಿಗೆ ಹಾರುತ್ತಿದ್ದಾಗ, ಡೈವರ್ಸ್ ಆಕೆಯನ್ನು ಗಮನಿಸಿದ್ದಾರೆ. ಸಮಯ ವ್ಯರ್ಥ ಮಾಡದೆ ತಕ್ಷಣ ಡೈವರ್‌ಗಳು ದೋಣಿಯಲ್ಲಿ ಆಕೆ ಬಿದ್ದ ಸ್ಥಳವನ್ನು ತಲುಪಿ ಆಕೆಯನ್ನು ರಕ್ಷಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಯುವತಿ ಹೇಳಿದ್ದಾಳೆ. ಜನವರಿ 16ರಂದು ಆಕೆ ಮದುವೆಯಾಗಬೇಕಿತ್ತು. ಆದರೆ, ಕೌಟುಂಬಿಕ ಭಿನ್ನಾಭಿಪ್ರಾಯದಿಂದಾಗಿ …
Read More »ಖಾಸಗಿ ಫೈನಾನ್ಸ್ ಕಂಪನಿ (Finance Company) ಕಾಟಕ್ಕೆ ಆ ಬಡ ತಾಯಿ ಅಕ್ಷರಶಃ ಕಂಗಾಲ
ಗದಗ, ಡಿಸೆಂಬರ್ 28: ಖಾಸಗಿ ಫೈನಾನ್ಸ್ ಕಂಪನಿ (Finance Company) ಕಾಟಕ್ಕೆ ಆ ಬಡ ತಾಯಿ ಅಕ್ಷರಶಃ ಕಂಗಾಲಾಗಿದ್ದಾರೆ. ಮಗ ಮಾಡಿದ ಸಾಲಕ್ಕೆ ಫೈನಾನ್ಸ್ ಸಿಬ್ಬಂದಿಗಳು ಬಡ ತಾಯಿಗೆ ಶಿಕ್ಷೆ ನೀಡಿದ್ದಾರೆ. ಬೆಳಗ್ಗೆ ನಿದ್ದೆಯಿಂದ ಎಬ್ಬಿಸಿ ಫೈನಾನ್ಸ್ ಕಚೇರಿಗೆ ತಂದು ಇಡೀ ದಿನ ಕೂಡಿ ಹಾಕಿ ಕಾಟ ನೀಡಿದ್ದಾರೆ. ನನ್ನ ಬಿಟ್ಟರೆ ಸಾಲ ಮಾಡಿಯಾದರೂ ಹಣ ಕಟ್ಟುತ್ತೇನೆ ಅಂದ್ರೂ ಫೈನಾನ್ಸ್ ಸಿಬ್ಬಂದಿ ತಾಯಿಯನ್ನು ಬಿಡದೇ ಇಡೀ ದಿನ ಕೂಡಿ ಹಾಕಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ …
Read More »ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಡಿಸೆಂಬರ್ 28: ದೈವದ ನೇಮ ಆಗುವ ಗದ್ದೆಯಲ್ಲಿ ತ್ಯಾಜ್ಯ ರಾಶಿ ಕಂಡು ದೈವ ಕೆಂಡಾಮಂಡಲವಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ (Ullal) ತಾಲೂಕಿನ ಕುಂಪಲ ಬಳಿಯ ಕನೀರುತೋಟ ಎಂಬಲ್ಲಿ ನಡೆದಿದೆ. ದೈವದ ಕೋಪಕ್ಕೆ ದೈವಸ್ಥಾನದ ಆಡಳಿತ ಮಂಡಳಿ ಕಕ್ಕಾಬಿಕ್ಕಿಯಾಗಿದ್ದಾರೆ. ಇಲ್ಲಿನ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ದೈವ ಆವೇಶವಾಗಿ ಇನ್ನೇನು ವಲಸರಿ ಹೊರಡಬೇಕು ಎಂಬಷ್ಟರಲ್ಲಿ ಘಟನೆ ನಡೆದಿದೆ. ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ವಲಸರಿ ಹೋಗಬೇಕೆ …
Read More »ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದ ವ್ಯಕ್ತಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ : ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಾಗ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋನಿಯಾಗಾಂಧಿ ನಗರದ ನಿವಾಸಿಯಾದ ಕುಮಾರ್ ಬೆಟಗೇರಿ (57) ಎಂಬಾತ ಮೃತ ವ್ಯಕ್ತಿಯಾದ್ರೆ, ದೇವಾಂಗಪೇಟೆ ನಿವಾಸಿಯಾದ ಗೌಸ್ ಮೊಹಮ್ಮದ್ ನದಾಫ್ (40) ಎಂಬಾತ ಬಂಧಿತ ಆರೋಪಿ. ಗೌಸ್ ಮೊಹಮ್ಮದ್ ಡಿ. 22 ರಂದು ಸುಳ್ಳ ರೋಡ್ ಇಂದ್ರಪ್ರಸ್ಥ ಲೇಔಟ್ನಲ್ಲಿ ಕುಮಾರ್ ಬೆಟಗೇರಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದು, ಈ ಕುರಿತು …
Read More »
Laxmi News 24×7