Breaking News

ರಾಜಕೀಯ

ಹಾವೇರಿ: ಅನೈತಿಕ ಸಂಬಂಧ ಆರೋಪ: ವಿದ್ಯುತ್​ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ- ವ್ಯಕ್ತಿ ಸಾವು

ಹಾವೇರಿ: ಅನೈತಿಕ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಲವರು ಲೈಟ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಪ್ರಕರಣ ಜಿಲ್ಲೆಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಅಲ್ಲದೇ, ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ. ಎಫ್​ಐಆರ್​ ವಿವರ: ”ಗುರುವಾರ …

Read More »

ಜಪಾನ್ ಪ್ರಜೆಗೆ ಡಿಜಿಟಲ್ ಅರೆಸ್ಟ್: ₹35 ಲಕ್ಷ ಲೂಟಿ, ಬೆಂಗಳೂರಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ನಗರದಲ್ಲಿ ವಾಸವಾಗಿರುವ ಜಪಾನ್ ಮೂಲದ ಪ್ರಜೆಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 35.49 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಜಪಾನ್ ಮೂಲದ 59 ವರ್ಷದ ವ್ಯಕ್ತಿ ನೀಡಿರುವ ದೂರಿನ ಅನ್ವಯ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರರಿಗೆ ಡಿಸೆಂಬರ್ 12ರಂದು ಟೆಲಿಫೋನ್ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಪ್ರತಿನಿಧಿಗಳ ಹೆಸರಿನಲ್ಲಿ ಕರೆ ಮಾಡಿದ್ದ ವಂಚಕರು, ‘ನಂಬರ್ ಬ್ಲಾಕ್ ಮಾಡುತ್ತಿರುವುದಾಗಿ’ ತಿಳಿಸಿದ್ದರು. ನಂತರ …

Read More »

ಮೌನಕ್ಕೆ ಜಾರಿದ ಮನಮೋಹನ್ ಸಿಂಗ್.

ಮೌನಕ್ಕೆ ಜಾರಿದ ಮನಮೋಹನ್ ಸಿಂಗ್. ಭಾರತದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸುವ ಪ್ರಯತ್ನದಲ್ಲಿ, ಸಿಂಗ್ 2005 ರಲ್ಲಿ US ಅಧ್ಯಕ್ಷ ಜಾರ್ಜ್ W. ಬುಷ್ ಅವರೊಂದಿಗೆ ಪರಮಾಣು ಸಹಕಾರ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದರು. ಮೇ 2004 ರ ಸಂಸತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸಿತು. ಕಾಂಗ್ರೆಸ್‌ನ ನಾಯಕಿ, ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ನಿರಾಕರಿಸಿದರು, ಬದಲಿಗೆ ಸಿಂಗ್ ಅವರನ್ನು ಹುದ್ದೆಗೆ ಶಿಫಾರಸು …

Read More »

ಸಂಕ್ರಾಂತಿ ನಂತರ ನಂದಿನಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಸುಳಿವು ನೀಡಿದ ಕೆಎಂಎಫ್ ಅಧ್ಯಕ್ಷರು

ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಇಂದು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಕೆಎಂಎಫ್​ನ ಅಧ್ಯಕ್ಷ, ಮಾಜಿ ಶಾಸಕ ಭೀಮಾನಾಯಕ್, ಪ್ರತಿ ಲೀಟರ್‌ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಬಂದಿದೆ. ಹಾಗಾಗಿ, ಸಂಕ್ರಾಂತಿ ಹಬ್ಬದ ಬಳಿಕ ಈ ಸಂಬಂಧ ಸಭೆ ನಡೆಸಿ ದರ ಏರಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಹಾಲಿನ ದರ ಏರಿಕೆಗೆ ಬೇಡಿಕೆ ಬಂದಿದ್ದು, …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆ ಬೆಳಗಾವಿಗೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರ ದಂಡೇ ಆಗಮಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, 200ಕ್ಕೂ ಅಧಿಕ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾಗವಹಿಸಿದ್ದಾರೆ. ಸಂಜೆ 7 ಗಂಟೆವರೆಗೆ ಸಭೆ ನಡೆಯಲಿದೆ. ಆದರೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಗೈರಾಗಿದ್ದಾರೆ. ವೀರಸೌಧಕ್ಕೆ 100 …

Read More »

ಮನೆಯಲ್ಲಿ ಪೂಜಿಸುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರ ಫೋಟೊಗಳನ್ನು ಹೊರಗೆಸೆದ ಕುಟುಂಬ!

ಗದಗ, ಡಿಸೆಂಬರ್ 26: ಮನೆಯಲ್ಲಿ ಪೂಜೆ ಮಾಡುವ ಯಲ್ಲಮ್ಮ, ಹುಲಿಗೆಮ್ಮ, ಲಕ್ಷ್ಮೀ ದೇವರುಗಳನ್ನೇ ಆ ಕುಟುಂಬದವರು ಹೊರಗೆ ಹಾಕಿದ್ದಾರೆ. ಬದಲಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರೇ ನಮ್ಮ ಪಾಲಿಗೆ ದೇವರು ಎಂದು ಸ್ಮರಣೆ ಶುರು ಮಾಡಿದ್ದಾರೆ! ಗದಗ ಬೆಟಗೇರಿ ನಗರದ ಅಂಬೇಡ್ಕರ್ ಕಾಲೋನಿ ನಿವಾಸಿ ಹಾಗೂ ಹೋರಾಟಗಾರ ಷರೀಫ್ ಬಿಳಿಯಲಿ ಮನೆಯಲ್ಲಿ ಕುಟುಂಬಸ್ಥರು ‘‘ಬುದ್ಧಂ ಶರಣಂ ಗಚ್ಛಾಮಿ’’ ಮಂತ್ರ ಪಠಣದೊಂದಿಗೆ ಕಠೋರ ನಿರ್ಧಾರ ಮಾಡಿದ್ದಾರೆ. ನಮ್ಮ ತಾಯಿ ದೇವದಾಸಿಯಾಗಿದ್ದರು. ಅನಾರೋಗ್ಯದಲ್ಲಿದ್ದಾಗ ಯಾವ …

Read More »

ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ

ಶಿವಮೊಗ್ಗ, (: ಮೊಬೈಲ್ (Mobile) ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದ್ದ ಧನುಶ್ರೀ(20) ಚಿಕಿತ್ಸೆ ಫಲಲಿಸದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತಿದ್ದ ಧನುಶ್ರೀಗೆ ಹೆಚ್ಚು ಮೊಬೈಲ್​ ನೋಡಬೇಡ ಎಂದು ಪೋಷಕರು ಬುದ್ಧಿ ಮಾತಿಗೆ ಬೈದಿದ್ದಾರೆ. ಇಷ್ಟಕ್ಕೆ ನೊಂದ ಧನುಶ್ರೀ ಮೂರು ದಿನದ ಹಿಂದೆ ವಿಷ ಸೇವಿಸಿದ್ದಾಳೆ. …

Read More »

ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು

ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು (Death) ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಡಿ.24ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು …

Read More »

ಹಣಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ!

ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ. ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ …

Read More »

ಬೆಳಗಾವಿಯ ಕಾಂಗ್ರೆಸ್​ ಬ್ಯಾನರ್​ ನಕ್ಷೆಯಿಂದ ಪಿಒಕೆ ಕಾಣೆ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಖಂಡನೆ

ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅಧಿವೇಶನಕ್ಕಾಗಿ ನಗರದಲ್ಲಿ ಅಳವಡಿಸಲಾಗಿರುವ ಭಾರತದ ವಿವಾದಾತ್ಮಕ ನಕಾಶೆ ಹೊಂದಿರುವ ಬ್ಯಾನರ್​ಗಳ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಬೆಳಗಾವಿ ನಗರದ ಪ್ರವೇಶದ್ವಾರದ ಬಳಿ ಹಾಕಲಾಗಿರುವ ಸ್ವಾಗತ ಫ್ಲೆಕ್ಸ್​ಗಳಲ್ಲಿ ಮುದ್ರಿಸಲಾದ ಭಾರತದ ನಕಾಶೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಅಕ್ಸಾಯ್ ಚಿನ್ ಪ್ರದೇಶಗಳು ಇಲ್ಲದೆ ಇರುವುದು ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಮತ್ತು ರಾಜ್ಯಸಭಾ …

Read More »