Breaking News

ರಾಜಕೀಯ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡ್ಡಿಹೋಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣ

ತಿರುವನಂತಪುರಂ: ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇರಳ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂದಿನ ಮಂಡಲೋತ್ಸವದ ವೇಳೆಗೆ ರೋಪ್ ವೇ ಸಿದ್ಧವಾಗಲಿದೆ. ಪಂಪಾದಿಂದ ಸನ್ನಿಧಾನದವರೆಗೆ ಮುಂದಿನ ವರ್ಷದೊಳಗೆ ರೋಪ್ ವೇ ನಿರ್ಮಿಸಲಾಗುವುದು ಎಂದು ಕೇರಳ ದೇವಸ್ವಂ ಸಚಿವ ವಿ.ವಿ. ವಾಸವನ್ ಹೇಳಿದ್ದಾರೆ.   ವೃದ್ಧ ಯಾತ್ರಿಕರು, ಅನಾರೋಗ್ಯ ಪೀಡಿತರು, ಸರಕುಗಳ ಸಾಗಾಣಿಕೆಗೆ ಅನುಕೂಲವಾಗುವಂತೆ ಕೇಬಲ್ ಕಾರ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕೇರಳ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಗ್ರೀನ್ …

Read More »

ಸುಕನ್ಯಾ ಸಮೃದ್ಧಿ ಯೋಜನೆ : ಪೋಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭಾರತ ಸರ್ಕಾರವು ಬೇಟಿ ಬಚಾವೋ-ಬೇಟಿ ಪಢಾವೋ ಅಭಿಯಾನದ ಅಡಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ (SSY) ಅನ್ನು ಪ್ರಾರಂಭಿಸಿದೆ. ಈ ಯೋಜನೆ ವಿಶೇಷವಾಗಿ ಹೆಣ್ಣುಮಕ್ಕಳಿಗೆ. ಈ ಯೋಜನೆಯಲ್ಲಿ, ಪೋಷಕರು ತಮ್ಮ ಮಗಳ ಶಿಕ್ಷಣ ಮತ್ತು ಮದುವೆಗಾಗಿ ಹೂಡಿಕೆ ಮಾಡುತ್ತಾರೆ ಮತ್ತು ಮಗಳಿಗೆ 18 ವರ್ಷವಾದಾಗ, ಹೂಡಿಕೆ ಮೊತ್ತದೊಂದಿಗೆ ಬಡ್ಡಿಯನ್ನು ಪಡೆಯುತ್ತಾರೆ.   ಈ ಯೋಜನೆಯಲ್ಲಿ ಹೂಡಿಕೆಯನ್ನು 15 ವರ್ಷಗಳವರೆಗೆ ಮಾಡಬೇಕು. ಇದರ ನಂತರ, ಯಾವುದೇ ಹೂಡಿಕೆ ಮಾಡಬೇಕಾಗಿಲ್ಲ ಮತ್ತು ಮಗಳಿಗೆ 18 …

Read More »

ಕಬ್ಬು ಕಟಾವು ಋತು: ಮಹಾರಾಷ್ಟ್ರದಲ್ಲಿ ಮತದಾನದಿಂದ 12 ಲಕ್ಷ ಮಂದಿ ವಂಚಿತ?

ಪುಣೆ: ನವೆಂಬರ್ 20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗದ ಸುಮಾರು 12 ಲಕ್ಷ ಮಂದಿ ಕಬ್ಬು ಕಟಾವು ಕಾರ್ಮಿಕರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ನವೆಂಬರ್ 15 ರಿಂದ ಕಬ್ಬು ಕಟಾವು ಋತು ಆರಂಭವಾಗಲಿದ್ದು, ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಕಬ್ಬು ಕಟಾವು ಮಾಡುವ ಕಾರ್ಮಿಕರು ‍ಪಶ್ಚಿಮ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ ಎಂದು ಮಹಾರಾಷ್ಟ್ರ ಕಬ್ಬು ಕಟಾವುಗಾರರ …

Read More »

ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು …

Read More »

ಬಾಲಕಿಯ ಮೇಲೆ ವೃದ್ಧನಿಂದ ಅತ್ಯಾಚಾರ!?

ಕಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಬಿಚ್ಚಿ ಬಿಡಿಸುವ ಘಟನೆ ನಡೆದಿದ್ದು, ಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆಯು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ. ಹೌದು ನರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ನರೋಣದ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ …

Read More »

ಅಧಿಕಾರಿಗಳಿಗೆ ಧಮ್ಕಿ ಹಾಕಿ ಹೆದರಿಸಿ ಬೆದರಿಸಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ವಕ್ಫ್‌ ವಿರುದ್ಧದ (Waqf Property Dispute) ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಧ್ವನಿಗೂಡಿಸಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.ಬಿಜೆಪಿ ಮಾಜಿ ಶಾಸಕ‌ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಬಿಜೆಪಿಯ ಅತೃಪ್ತರ ಗುಂಪು ಸುದ್ದಿಗೋಷ್ಠಿ ನಡೆಸಿ ಹೋರಾಟದ ಬಗ್ಗೆ ಮಾಹಿತಿ ನೀಡಿತು. ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್, ಬಾಗಲಕೋಟೆ ಮಿನಿ ವಿಧಾನಸೌಧವನ್ನು ವಕ್ಪ್ …

Read More »

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : 10 ದಿನಗಳಲ್ಲಿ ಚಿನ್ನದ ಬೆಲೆ 5,000 ರೂ. ಬೆಳ್ಳಿ ಬೆಲೆ 10,000 ರೂ. ಇಳಿಕೆ!

ನವದೆಹಲಿ : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಕಳೆದ 10 ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಅಗ್ಗವಾಗುತ್ತಿವೆ. ಅಚ್ಚರಿಯ ವಿಷಯವೆಂದರೆ ಕೇವಲ 10 ದಿನಗಳಲ್ಲಿ ಚಿನ್ನವು ಅದರ ಮೇಲಿನ ಹಂತದಿಂದ ಶೇಕಡಾ 6 ರಷ್ಟು ಅಗ್ಗವಾಗಿದೆ ಮತ್ತು 4750 ರೂಪಾಯಿಗಳಷ್ಟು ಕಡಿಮೆಯಾಗಿದೆ.   ಇದೇ ವೇಳೆ ಬೆಳ್ಳಿ ದಾಖಲೆ ಕುಸಿತ ಕಂಡಿದ್ದು, 10 ದಿನಗಳಲ್ಲಿ 10 ಸಾವಿರ ರೂ. ಬೆಳ್ಳಿ 1 ಲಕ್ಷ ದಾಟಿತ್ತು ಆದರೆ …

Read More »

ದರ್ಶನ್ ಮಧ್ಯಂತರ ಜಾಮೀನಿಗೆ ಕುತ್ತು: ಸುಪ್ರೀಂ ಮೇಲ್ಮನವಿಗೆ ಸರ್ಕಾರ ಅಸ್ತು!

ಆರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್‌ಗೆ ಹೊಸ ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿ ಹಾಗೂ ನಟ ದರ್ಶನ್‌ ಅವರಿಗೆ ಇದೀಗ ಹೊಸ ಸಂಕಷ್ಟ ಸೃಷ್ಟಿಯಾಗಿದೆ. ನಟ ದರ್ಶನ್‌ ಅವರಿಗೆ ಬೆನ್ನು ನೋವು ಇರುವುದರಿಂದ ಚಿಕಿತ್ಸೆಗೆಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಆರು ವಾರಗಳ ಮಧ್ಯಂತ ಜಾಮೀನನ್ನು ನೀಡಲಾಗಿದೆ. ಅದರಲ್ಲಿ ಈಗಾಗಲೇ ಎರಡು ವಾರಕ್ಕೂ ಹೆಚ್ಚು ಸಮಯ ಆಗಿದೆ. ಇದೀಗ ಹೈಕೋರ್ಟ್‌ ನೀಡಿರುವ …

Read More »

ವಾಟ್ಸ್‌ಆಯಪ್ ನಿಷೇಧ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್‌ಆಯ‍ಪ್‌ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋ‌ರ್ಟ್ ಗುರುವಾರ ತಳ್ಳಿ ಹಾಕಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯ‍ಪೀಠ ಈ ಬಗ್ಗೆ ತೀರ್ಪು ನೀಡಿದೆ. ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್‌ಆಯಪ್‌ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್‌ಕುಟ್ಟನ್ ಕೆ.ಜಿ. …

Read More »