Breaking News

ರಾಜಕೀಯ

ಸಿಂಪಥಿಗಾಗಿ ಸಿ.ಪಿ. ಯೋಗೇಶ್ವರ್‌ ನಾಟಕ: ಅಶೋಕ ಟೀಕೆ

ಹಾಸನ: ಜೆಡಿಎಸ್-ಬಿಜೆಪಿಯವರು ಟಿಕೆಟ್‌ ನೀಡಲಿಲ್ಲ ಎಂಬ ಸಿಂಪಥಿ ಗಳಿಸಿಕೊಳ್ಳಲು ಸಿ.ಪಿ. ಯೋಗೇಶ್ವರ್ ನಾಟಕ ಆಡಿದ್ದು, ಮೂರು ತಿಂಗಳ ಹಿಂದೆಯೇ ಆಗಿದ್ದ ನಿರ್ಧಾರದಂತೆ ಈಗ ಕಾಂಗ್ರೆಸ್‌ ಸೇರಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಹೇಳಿದರು. ಶನಿವಾರ ರಾತ್ರಿ ಹಾಸನಾಂಬೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಪ್ರತಿ ಚುನಾವಣೆಯಲ್ಲೂ ಪಕ್ಷಾಂತರ ಮಾಡುತ್ತಾರೆ. ಇದುವರೆಗೆ ಏಳು ಬಾರಿ ಪಕ್ಷ ಬದಲಿಸಿದ್ದಾರೆ. ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲಿಗೆ ಹೋಗುತ್ತಾರೆ. …

Read More »

ಚಿಂತಾಮಣಿ | ಮುರುಗಮಲ್ಲ ದರ್ಗಾ ಅಭಿವೃದ್ಧಿ: ಸಭೆ

ಚಿಂತಾಮಣಿ: ‘ಮುರುಗಮಲ್ಲ ಮತ್ತು ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಿದ್ದು, ಅಕ್ಟೋಬರ್ 28 ರಂದು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಖಾನ್ ಹಾಗೂ ಹಣಕಾಸಿನ ಅಧಿಕಾರಿಗಳ ಜತೆಯಲ್ಲಿ ಸಭೆ ಆಯೋಜಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.   ನಿಮ್ಮಕಾಯಲಹಳ್ಳಿಯಲ್ಲಿ ನಡೆಯುತ್ತಿರು ಉರುಸ್ ಕಾರ್ಯಕ್ರಮಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ಮಾತನಾಡಿದರು. ‘ದರ್ಗಾಗೆ ಬರುವ ಭಕ್ತರಿಗೆ ವಸತಿ, ಶೌಚಾಲಯ, …

Read More »

ನಿಖಿಲ್ ಪರ ಎಚ್‌ಡಿಕೆ, ಯದುವೀರ್ ಪ್ರಚಾರ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಹಾಗೂ ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅ.28 ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.   ಬೆಳಗ್ಗೆ ತಾಲ್ಲೂಕಿನ ದೇವರಹೊಸಳ್ಳಿ ಗ್ರಾಮದಿಂದ ಪ್ರಚಾರ ಆರಂಭವಾಗಲಿದ್ದು, ನಂತರ ನೀಲಕಂಠನಹಳ್ಳಿ, ಸುಣ್ಣಘಟ್ಟ, ಮೋಳೆದೊಡ್ಡಿ ಗ್ರಾಮ, ಕೂಡ್ಲೂರು, ಮಸಿಗೌಡನದೊಡ್ಡಿ, ನೀಲಸಂದ್ರ, ಕೋಡಿಪುರ, ಹೊಂಗನೂರು ಗ್ರಾಮಗಳಲ್ಲಿ ಪ್ರಚಾರ ನಡೆಯಲಿದೆ ಎಂದು …

Read More »

ಬೆಳಗಾವಿ-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸದಂತೆ ಸಚಿವರಿಗೆ ಸಂಸದೆ ಪತ್ರ

ಬೆಳಗಾವಿ: ‘ಬೆಳಗಾವಿ-ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಿಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ಇಂಡಿಗೋ ಸಂಸ್ಥೆಯ ವಿಮಾನ ಸೇವೆ ಸ್ಥಗಿತಗೊಳಿಸಬಾರದು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು, ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.   ‘ಈ ವಿಮಾನಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿ, ತುರ್ತು ಕೆಲಸ ಮುಗಿಸಿಕೊಂಡು ಒಂದೇ ದಿನದಲ್ಲಿ ವಾಪಸಾಗಲು ಅನುಕೂಲವಾಗಿತ್ತು. ಆದರೆ, ಅ.27ರಿಂದ ಈ ಸೇವೆ ಸ್ಥಗಿತಗೊಳಿಸುತ್ತಿರುವ ಮಾಹಿತಿ ಬಂದಿದೆ. …

Read More »

ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ: ಸಚಿವ ಬೈರತಿಗೆ ಶೋಭಾ ಸವಾಲು

ಬೆಳಗಾವಿ: ‘ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ’ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಸಚಿವ ಬೈರತಿ ಸುರೇಶ್ ಅವರಿಗೆ ಸವಾಲು ಹಾಕಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೈರತಿ ಸುರೇಶ ‌ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಾವಿರಾರು ಕಡತಗಳನ್ನು ತಂದು, ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧ ಬೇರೆ ಬೇರೆ ಆರೋಪ …

Read More »

‘BMTC’ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕೇಸ್ ಹಾಕೋದಲ್ಲ, ಕಠಿಣ ಶಿಕ್ಷೆ ಆಗಬೇಕು

ಬೆಂಗಳೂರು : ಕಳೆದ ಒಂದು ತಿಂಗಳಿನಲ್ಲಿ ಬೆಂಗಳೂರಿನ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಗಳು ನಡೆದಿವೆ. ಹಾಗಾಗಿ BMTC ಸಿಬ್ಬಂದಿ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.   ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡ್ರೈವರ್​, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. …

Read More »

ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

ಮುಧೋಳ: ರೈತರ ಖಾತೆಗೆ ಬಾಕಿ ಹಣ ಜಮಾ ಮಾಡುವಂತೆ ಒತ್ತಾಯಿಸಿ ಸಮೀಪದ ಐಸಿಪಿಎಲ್ ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ಹಾಗೂ ರೈತರು ಧರಣಿ ನಡೆಸಿದರು. ಅ.24ರಂದು ನಗರದಲ್ಲಿ ಸಭೆ ಸೇರಿದ್ದ ರೈತರು 26ರೊಳಗೆ 2023ರ ಹಂಗಾಮಿನ ಪ್ರತಿಟನ್ನಿಗೆ ಹೆಚ್ಚುವರಿ 62ರೂ. ನೀಡಬೇಕು ಎಂದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಗಡುವು ನೀಡಿದ್ದರು. ಆದರೆ ರೈತರ ಗಡುವಿಗೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸ್ಪಂದನೆ ನೀಡದ ಕಾರಣ ಶನಿವಾರ ಮತ್ತೆ ಸಭೆ ಸೇರಿದ …

Read More »

ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಶನಿವಾರ(ಅ26) 22 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಪಟ್ಟಿಯಲ್ಲಿ ಆರು ಹಾಲಿ ಶಾಸಕರಿಗೆ ಮತ್ತೆ ಅವಕಾಶ ನೀಡಲಾಗಿದೆ. ಶಿವಸೇನೆ(ಶಿಂಧೆ) ಮತ್ತು ಎನ್‌ಸಿಪಿ(ಅಜಿತ್ ಪವಾರ್) ಜತೆಗೆ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿರುವ ಬಿಜೆಪಿ ಇದುವರೆಗೆ 121 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.   ಅಕೋಟ್, ನಾಸಿಕ್ ಸೆಂಟ್ರಲ್, ಪೆನ್, ಖಡಕ್ವಾಸಲಾ, ಪುಣೆ ಕಂಟೋನ್ಮೆಂಟ್ ಮತ್ತು ಉಲ್ಲಾಸನಗರದ ಶಾಸಕರನ್ನು ಉಳಿಸಿಕೊಂಡು ವಾಶಿಮ್ …

Read More »

ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣದ (Muda Case) ತನಿಖೆಯನ್ನು ಚುರುಕುಗೊಳಿಸಿರುವ ಲೋಕಾಯುಕ್ತ ಪೊಲೀಸರು ಪ್ರಕರಣದ ಎ1 ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರಿಗೆ ಶೀಘ್ರದಲ್ಲೇ ನೋಟಿಸ್‌ ನೀಡಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ಈಗಾಗಲೇ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ಅಧಿಕಾರಿಗಳು ಮುಕ್ತಾಯಗೊಳಿಸಿದ್ದಾರೆ. ಹಾಗಾಗಿ 1ನೇ ಆರೋಪಿ ಸಿದ್ದರಾಮಯ್ಯ ಅವರನ್ನು ಯಾವಾಗ ವಿಚಾರಣೆಗೆ ಒಳಪಡಿಸುತ್ತಾರೆಂಬ ಪ್ರಶ್ನೆ ಇದೆ. ಶುಕ್ರವಾರವಷ್ಟೇ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ …

Read More »

ಮತ್ತೆ ಬನ್ನಿ ಕಿತ್ತೂರು ಉತ್ಸವಕ್ಕೆ…:D.C.

ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆಗೆ ಶುಕ್ರವಾರ ತಡರಾತ್ರಿ ವೈಭವದ ತೆರೆ ಬಿದ್ದಿತು. ಬಾಲಿವುಡ್‌ ಖ್ಯಾತ ಗಾಯಕ ಅರ್ಮಾನ್‌ ಮಲೀಕ್‌ ಅವರ ಗಾನಸುಧೆಯ ಮೂಲಕ ಸಾಂಸ್ಕೃತಿಕ ಲೋಕವೊಂದು ನಿರ್ಮಾಣವಾಯಿತು. ರಾಜ್ಯದ ಎಲ್ಲೆಡೆಯಿಂದ ಸೇರಿದ್ದ ಅಪಾರ ಜನ ಮೂರು ದಿನಗಳ ವೈಭೋಗವನ್ನು ಕಣ್ಣು- ಮನದಲ್ಲಿ ಹಿಡಿದಿಟ್ಟುಕೊಂಡು ಮರಳಿದರು.   ದ್ವಿಶತಮಾನೋತ್ಸವಕ್ಕೆ ಜನ ನಿರೀಕ್ಷೆಗೆ ಮೀರಿ ಹರಿದುಬಂದರು. ರಾಣಿ ಚನ್ನಮ್ಮ ಮುಖ್ಯ ವೇದಿಕೆಯಲ್ಲಿ ಬೆಳಗಿನ ಅವಧಿಯಲ್ಲಿ ನಡೆದ ಸಾಹಿತ್ಯ ಗೋಷ್ಠಿಗಳು ಮತ್ತು ಮಧ್ಯಾಹ್ನದ …

Read More »