Breaking News

ರಾಜಕೀಯ

2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2 ದಾಖಲು!

ಬೆಂಗಳೂರು: 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ಜಿಎಸ್ ಡಿಪಿ ಶೇ.10.2 ರಷ್ಟು ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ.   ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ …

Read More »

ಸಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣರಿಗೆ `ಕೈ’ ಟಿಕೆಟ್; ಸಿಎಂ

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ (By-Election) ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ. ಆದರೆ ಈವರೆಗೂ ಕಾಂಗ್ರೆಸ್ (Congress) ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ತುಕಾರಾಂ ಪತ್ನಿಗೆ …

Read More »

ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ವ್ಯಾಪ್ತಿಯ ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕ ದಿನೇಶ್ ಮೃತದೇಹ‌ ಮಂಗಳವಾರ(ಅ.22) ತೀರದಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬ್ಯಾರೇಜ್ ಮೇಲಿಂದ ತುಂಗಭದ್ರಾ ನದಿಗೆ ಹಾರಿ ದಿನೇಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿ ತಿಳಿಸಿದೆ.   ಮುಂಡರಗಿ ತಾಲೂಕು ಮುರಡಿ ತಾಂಡಾದ ಯುವಕ ದಿನೇಶ ಸಾಲದ ಸುಳಿಗೆ ಸಿಲುಕಿದ್ದು, ಇದರಿಂದಾಗಿ ಅಕ್ಟೋಬರ್ 20 (ಭಾನುವಾರ)ದಂದು ನದಿಗೆ ಹಾರಿದ್ದ. ನೀರಿನ ಸೆಳೆತ ಹೆಚ್ಚಾಗಿದ್ದರಿಂದ …

Read More »

ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ

ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ. ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು. ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ. …

Read More »

ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷ ಲೇಔಟ್‌ನ ಜಾನ್ಸನ್‌(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್‌ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ.   ಜಯಮ್ಮ ಎಂಬುವವರ ಮಕ್ಕಳಾದ ಜಾನ್ಸನ್‌, ಮಹಾಲಕ್ಷ್ಮೀ ಕೆರೆಯ ವಾಕಿಂಗ್‌ ಪಾತ್‌ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ …

Read More »

ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಸಿಎಂ, ಪೊಲೀಸರು ಮುಕ್ತವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.   ಪೊಲೀಸ್ ಸಿಬ್ಬಂದಿ ಹಿತರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10,000 ಪೋಲಿಸ್ ವಸತಿಗೃಹಗಳ …

Read More »

ಇದ್ದೂ ಇಲ್ಲದಂತಾದ ಕಲಾಭವನ:

ಧಾರವಾಡ: ಅವಳಿನಗರಗಳ ಬಹುತೇಕ ರಂಗಮಂದಿರಗಳು ದುಃಸ್ಥಿತಿಯಲ್ಲಿವೆ. ಇದು ನಾಟಕ ಪ್ರದರ್ಶನ, ರಂಗ ತಾಲೀಮು ಮೊದಲಾದ ಚಟುವಟಿಕೆಗಳಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಸಾಂಸ್ಕೃತಿಕ ನಗರವೆಂದು ಕರೆಯುವ ಧಾರವಾಡದಲ್ಲಿ ಈಗ ಕೆಲವೇ ರಂಗಮಂದಿರಗಳಲ್ಲಿ ರಂಗಭೂಮಿ ಚಟುವಟಿಕೆಗಳು ನಡೆಯುತ್ತವೆ. ಮೂಲಸೌಕರ್ಯಗಳ ಕೊರತೆ ಮತ್ತು ಅವ್ಯವಸ್ಥೆಗಳಿಂದ ನಲುಗಿರುವ ರಂಗತಾಣಗಳಿಗೆ ಕಾಯಕಲ್ಪಿಸಲು ಸಂಬಂಧಪಟ್ಟವರು ಕ್ರಮವಹಿಸಿಲ್ಲ. ಧಾರವಾಡದಲ್ಲಿ ರಂಗಾಯಣ ಇದ್ದರೂ ಅನುದಾನ ಕೊರತೆ, ಸವಲತ್ತುಗಳ ಕೊರತೆಯಿಂದಾಗಿ ರಂಗಚಟುವಟಿಕೆಗಳು ಸೊರಗಿವೆ. ಬಹುತೇಕ ರಂಗಮಂದಿರಗಳಲ್ಲಿ ಬೆಳಕು, ಧ್ವನಿ ‌ವ್ಯವಸ್ಥೆ ಸಹಿತ ಸುಸಜ್ಜಿತ ಸಕಲ …

Read More »

ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

ಬೆಳಗಾವಿ: ‘ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು  ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.   ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಮತ್ತು ಜೀ ಕನ್ನಡ …

Read More »

ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಹುಕ್ಕೇರಿ: ತಾಲ್ಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ 64ನೇ ಕಬ್ಬು ಅರೆಯುವ ಹಂಗಾಮಿನ ನಿಮಿತ್ತ ಬಾಯ್ಲರ್ ಪ್ರದೀಪನ ಸಮಾರಂಭ ಸೋಮವಾರ ಜರುಗಿತು. ನಿಡಸೋಸಿಯ ಸಿದ್ದ ಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹುನ್ನೂರ ವಿಠ್ಠರಾಯ ದೇವರ ಪೂಜಾರಿ ಬಾಗಪ್ಪ ಬಿಜ್ಜು ಪೂಜೇರಿ ದಂಪತಿ ಪೂಜೆ ಸಲ್ಲಿಸಿದರು.   ಕಾರ್ಖಾನೆಯ ಚೇರಮನ್, ಶಾಸಕ ನಿಖಿಲ್ ಉಮೇಶ ಕತ್ತಿ, ನಿರ್ದೇಶಕರಾದ ಶಿವನಾಯಿಕ ನಾಯಿಕ, ಶಿವಪುತ್ರ ಶಿರಕೋಳಿ, ಪ್ರಭುದೇವ್ ಪಾಟೀಲ್, …

Read More »

ಕಡೆಗೂ MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ​! ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅ.21) ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ‌ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು. ಇನ್ನು ರಾಜೀನಾಮೆ ಘೋಷಿಸಿದ ಬಳಿಕ ಮಾತನಾಡಿದ ಅವರು, ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ. …

Read More »