Breaking News

ರಾಜಕೀಯ

ಮೈಸೂರು ದಸರಾ | ಜಂಬೂಸವಾರಿಗೆ 50 ಸ್ತಬ್ಧಚಿತ್ರ

ಮೈಸೂರು: ‘ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಕಲೆ, ವಾಸ್ತುಶಿಲ್ಪ, ಪ್ರವಾಸೋದ್ಯಮ, ಜಾನಪದ, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವ ಮೊದಲಾದ ವಿಷಯಗಳಿಗೆ ಆದ್ಯತೆ ನೀಡಲಾಗಿದೆ’ ಎಂದು ದಸರಾ ಸ್ತಬ್ಧಚಿತ್ರ ಉಪ ಸಮಿತಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನಲ್ಲಿ ಸ್ತಬ್ಧಚಿತ್ರ ನಿರ್ಮಾಣ ಭರದಿಂದ ಸಾಗಿದ್ದು, ಶೇ 80ರಷ್ಟು ಮುಗಿದಿದೆ. ಅ.11ರ ರಾತ್ರಿ ಅರಮನೆ ಆವರಣ ಪ್ರವೇಶಿಸಲಿವೆ. ಪ್ರದರ್ಶನದಲ್ಲಿ …

Read More »

HC ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ನೀಡಿದ ಜಾರಕಿಹೊಳಿ

ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಮಂಗಳವಾರ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ಕೊಟ್ಟು ಪ್ರತ್ಯೇಕವಾಗಿ ಚರ್ಚಿಸಿದರು. ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳು ಹಾಗೂ ದಲಿತ ಮುಖ್ಯಮಂತ್ರಿ ಕೂಗಿನ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.   ಸೋಮವಾರ ಶ್ರೀರಂಗಪಟ್ಟಣ ದಸರಾದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಮಂಗಳವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಸಮಾಜಕಲ್ಯಾಣ ಸಚಿವ ಮಹದೇವಪ್ಪ ನಿವಾಸಕ್ಕೆ …

Read More »

ಯೋಜನೆ ತರಲು ಯೋಗ್ಯತೆ ಇಲ್ಲದವರು ಟೀಕೆ: ಪಿ.ಎಂ.ನರೇಂದ್ರಸ್ವಾಮಿ

ಮಳವಳ್ಳಿ: ‘ಶಾಸಕರಾಗಿದ್ದಾಗ ತಾಲ್ಲೂಕಿಗೆ ಒಂದೇ ಒಂದು ನೀರಾವರಿ ಯೋಜನೆ ತರಲು ಯೋಗ್ಯತೆ ಇಲ್ಲದವರು ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದರ ಬಗ್ಗೆ ನನಗೆ ಪಾಠ ಮಾಡಲು ಬರುತ್ತಾರೆ’ ಎಂದು ಮಾಜಿ ಶಾಸಕ ಕೆ.ಅನ್ನದಾನಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕಿಡಿಕಾರಿದರು.   ‘ಶಾಸಕನಾಗಿದ್ದ ವೇಳೆ ಯಾವ ಯೋಜನೆಯನ್ನು ಕ್ಷೇತ್ರಕ್ಕೆ ತರಲು ಆಗದವರು ನನ್ನ ಅವಧಿಯ ಪಟ್ಟಣದ ಕುಡಿಯುವ ನೀರಿನ ಯೋಜನೆ, ಕಿರುಗಾವಲು ಬಹುಗ್ರಾಮ ಕುಡಿಯುವ ನೀರು ಯೋಜನೆ, ತಿಟ್ಟಮಾರನಹಳ್ಳಿ ಏತ ನೀರಾವರಿ ಯೋಜನೆ, …

Read More »

ನಂಗಲಿ ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮುಳಬಾಗಿಲು: ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ ಮೇಲೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ 13 ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು. ಒಟ್ಟು ₹10 ಸಾವಿರ ವಸೂಲಿಯಾಗಿದ್ದರೆ, ಲೆಕ್ಕವಿಲ್ಲದ ₹24,500 ಅನ್ನು ಅಧಿಕಾರಿಗಳು ವಶಕ್ಕೆ ಪಡೆದರು. ನಂಗಲಿ ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ …

Read More »

ಮುರುಡೇಶ್ವರ ಬೀಚ್‌ಗೆ ನಿರ್ಬಂಧ: ಪ್ರವಾಸಿಗರಿಗೆ ನಿರಾಶೆ

ಭಟ್ಕಳ: ಬೆಂಗಳೂರು ಮೂಲದ ವಿದ್ಯಾರ್ಥಿ ಭಾನುವಾರ ಮುರುಡೇಶ್ವರದ ಕಡಲಿನಲ್ಲಿ ಈಜಲು ತೆರಳಿ ಮೃತಪಟ್ಟ ಹಿನ್ನೆಲೆಯಲಿ ಭಟ್ಕಳ ಉಪವಿಭಾಗಾಧಿಕಾರಿ ಆದೇಶದಂತೆ ಸೋಮವಾರದಿಂದ ಪ್ರವಾಸಿಗರಿಗೆ ಮುರುಡೇಶ್ವರ ಬೀಚ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಕ್ಟೋಬರ್‌ ರಜೆ ಕಳೆಯಲು ಬರುವ ಪ್ರವಾಸಿಗರು ಬೀಚ್‌ಗೆ ತೆರಳದಂತಾಗಿದೆ. ಸಾಲು ಸಾಲು ರಜೆಯ ಸಂದರ್ಭದಲ್ಲಿ ಮುರುಡೇಶ್ವರಕ್ಕೆ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಅವರ ಸುರಕ್ಷತೆಗಾಗಿ ಪ್ರವಾಸೋದ್ಯಮ ಇಲಾಖೆಯೂ ಅಗತ್ಯ ಜೀವ ರಕ್ಷಕ ಸಿಬ್ಬಂದಿ ಹಾಗೂ ಸಾಧನ ಪೂರೈಸುವ ತನಕ …

Read More »

ಕಾಂತಾರ’ ಕಂಪು: ರಾಷ್ಟ್ರಪತಿಯಿಂದ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ನವದೆಹಲಿ:ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ, ಬ್ಲಾಕ್​ಬಸ್ಟರ್​ ‘ಕಾಂತಾರ’ ಚಿತ್ರದಲ್ಲಿನ ಅಮೋಘ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award) ಪಡೆದ ನಟ ರಿಷಬ್ ಶೆಟ್ಟಿ (Rishab Shetty), ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕನ್ನಡಿಗರಲ್ಲಿ ಭಾರೀ ಸಂತಸವನ್ನು ಉಂಟುಮಾಡಿದೆ.     70ನೇ ಅಂತಾರಾಷ್ಟ್ರೀಯ …

Read More »

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಎಷ್ಟು ವರ್ಷ ಇರುತ್ತಾರೆ ಗೊತ್ತಿಲ್ಲ! ಸತೀಶ್ ಜಾರಕಿಹೊಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಐದು ವರ್ಷ ಇರುತ್ತಾರೋ ಅಥವಾ ಮೂರು ವರ್ಷ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಹಲವು ದಿನಗಳಿಂದ ಉಂಟಾಗಿದ್ದ ಸಿಎಂ ಬದಲಾವಣೆ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಆದರೂ ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರುತ್ತಾರೆ ಗೊತ್ತಿಲ್ಲ ಎನ್ನುವ ಮೂಲಕ ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯ ಸುಳಿವು ಕೊಟ್ರಾ ಎನ್ನುವ ಕುತೂಹಲ …

Read More »

ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ :ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಯತ್ನಾಳ್ ತಿರುಗೇಟು

ಬೆಂಗಳೂರು : ವಕ್ಫ್ ಯತ್ನಾಳ್ ಅಪ್ಪನ ಆಸ್ತಿ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.   ಟ್ವೀಟ್ ನಲ್ಲಿ ಜಮೀರ್ ಅಹ್ಮಡ್ ವಿರುದ್ಧ ಕಿಡಿ ಕಾರಿರುವ ಅವರು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ …

Read More »

ವಿವಿಧ ಕಾಮಗಾರಿಗಳಿಗೆ ಕೃಷ್ಣ ಬೈರೇಗೌಡ ಶಂಕುಸ್ಥಾಪನೆ

ಕಿತ್ತೂರು: ‘ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದೆ. ₹30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ ಭೂಮಿಪೂಜೆ …

Read More »

ಸಿ.ಎಂ ಕುರ್ಚಿಗೆ ಯತ್ನ ನಡೆಸಿದ್ದರೆ ತಪ್ಪೇನಿಲ್ಲ: ಸಚಿವ ಕೃಷ್ಣ ಬೈರೇಗೌಡ

ಸಿ.ಎಂ ಕುರ್ಚಿಗೆ ಯತ್ನ ನಡೆಸಿದ್ದರೆ ತಪ್ಪೇನಿಲ್ಲ: ಸಚಿವ ಕೃಷ್ಣ ಬೈರೇಗೌಡ ಕಿತ್ತೂರು: ‘ಕಾಂಗ್ರೆಸ್‌ನಲ್ಲಿ ಬೇರೆ ಯಾರಾದರೂ ಮುಖ್ಯಮಂತ್ರಿ ಆಗುವ ಪ್ರಯತ್ನ ನಡೆಸಿದ್ದರೆ ನಡೆಸಲಿ. ಆದರೆ, ಎಲ್ಲ ಶಾಸಕರು ಹಾಗೂ ಹೈಕಮಾಂಡ್‌ ನಾಯಕರು ಸಿದ್ದರಾಮಯ್ಯ ಅವರ ಜತೆಗಿದ್ದೇವೆ. ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಚರ್ಚೆ ಆಗಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.   ‘ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ ಅವರೆಲ್ಲ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಹಾಗಾಗಿ, …

Read More »