Breaking News

ರಾಜಕೀಯ

ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

ದಾಂಡೇಲಿ: ನಾಪತ್ತೆಯಾಗಿದ್ದ ಮಹಿಳೆಯೋರ್ವರ ಬಗ್ಗೆ ದೂರು ನೀಡಿದ ಕೇವಲ ಎರಡುವರೆ ಗಂಟೆಯೊಳಗಡೆ ಪೊಲೀಸರು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಒಪ್ಪಿಸಿದ ಶ್ಲಾಘನಾರ್ಹ ಘಟನೆ ಅಂಬಿಕಾನಗರದ ಜಮಗಾದಲ್ಲಿ ನಡೆದಿದೆ. ಅಂಬಿಕಾನಗರದ ಜಮಗಾ ನಿವಾಸಿ 50 ವರ್ಷ ವಯಸ್ಸಿನ ಫಾತಿಮಾ ಮುಂಡಗೋಡ ಇವರು ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಣಬೆ ತರಲೆಂದು ಕಾಡಿಗೆ ಹೋಗಿದ್ದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲ ಸುತ್ತಮುತ್ತಲೂ ಹುಡುಕಿ, ಕೊನೆಗೆ ಸಂಜೆ 7.45 ನಿಮಿಷಕ್ಕೆ ಅಂಬಿಕಾನಗರ …

Read More »

ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಲಾರಿ ಹಾಗೂ ಚಾಲಕ ಅರ್ಜುನ್‌ ಅವರ ಮೃತದೇಹ ಬುಧವಾರ(ಸೆ.25ರಂದು) ಪತ್ತೆ ಆಗಿದೆ ಎಂದು ವರದಿಯಾಗಿದೆ. ಕಳೆದ 6 ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಯ ಮೂಲಕ ಗಂಗಾವಳಿ ನದಿಯಲ್ಲಿ ಮುಳುಗಿದ್ದ ಅರ್ಜುನ್‌ ಅವರ ಬೆಂಜ್ ಲಾರಿ ಪತ್ತೆಯಾಗಿದ್ದು, ಲಾರಿಯೊಳಗೆ ಅರ್ಜುನ್‌ ಅವರ ಮೃತದೇಹ ಪತ್ತೆಯಾಗಿದೆ ಎಂದು ಕಾರ್ಯಾಚರಣೆಯ ತಂಡದ ಮೂಲಗಳು ತಿಳಿಸಿವೆ.   ಲಾರಿಯ ಮಾಲೀಕ ಮನಾಫ್‌ …

Read More »

ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ

ಬೈಲಹೊಂಗಲ: ಸಾರಿಗೆ ಸಂಸ್ಥೆ ಬಸ್ ಮತ್ತು ಸೋಯಾಬೀನ್ ರಾಶಿ ಯಂತ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು ಸುಮಾರು 6 ಕ್ಕಿಂತ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಮಲಪ್ರಭಾ ನದಿ ಸಮೀಪ ಬುಧವಾರ (ಸೆ.25) ಮಧ್ಯಾಹ್ನ ಸಂಭವಿಸಿದೆ. ಸಾರಿಗೆ ಬಸ್ ಧಾರವಾಡದಿಂದ ಬೈಲಹೊಂಗಲ ಮಾರ್ಗ ಮಧ್ಯೆ ಬರುವಾಗ ಮಲಪ್ರಭಾ ನದಿ ಪಕ್ಕದಲ್ಲಿ ಸೋಯಾಬೀನ್ ರಾಶಿ ಯಂತ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭೀಕರ ಅಪಘಾತ ತಪ್ಪಿಸಲು …

Read More »

ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

ಬೆಂಗಳೂರು: ಕೋರ್ಟ್‌ ಕಲಾಪಗಳ ನೇರಪ್ರಸಾರದ (ಲೈವ್‌ ಸ್ಟ್ರೀಮಿಂಗ್‌) ದೃಶ್ಯಾವಳಿಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಹೈಕೋರ್ಟ್‌, ಖಾಸಗಿ ಡಿಜಿಟಲ್‌ ವೇದಿಕೆಗಳಾದ ಕಹಳೆ ನ್ಯೂಸ್‌, ಫ್ಯಾನ್ಸ್‌ ಟ್ರೋಲ್‌, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಸ್‌ನಲ್ಲಿ ಬಳಸಲಾಗಿರುವ ವೀಡಿಯೋಗಳನ್ನು ತತ್‌ಕ್ಷಣ ತೆಗೆದು ಹಾಕುವಂತೆ ಯೂಟ್ಯೂಬ್‌, ಫೇಸ್‌ಬುಕ್‌ ಹಾಗೂ ಎಕ್ಸ್‌ ಕಾರ್ಪ್‌ ಸಂಸ್ಥೆಗಳಿಗೆ ನಿರ್ದೇಶಿಸಿದೆ.   ಕೋರ್ಟ್‌ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರಗಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ …

Read More »

ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ. ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ

ಯಾದಗಿರಿ: ಸೋಮವಾರ(ಸೆ. 23) ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.   ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ …

Read More »

ಸಾಲು ಮರದ ತಿಮ್ಮಕ್ಕ ಪಾರ್ಕ್‌ ಸಾಲು ಸಾಲು ಸಮಸ್ಯೆ!

ಪುತ್ತೂರು: ಪರಿಸರ ಪ್ರೀತಿ ಮೂಡಿಸಬೇಕಿದ್ದ, ಸದಾ ಕಾಲ ನಳನಳಿಸ ಬೇಕಿದ್ದ ವೃಕ್ಷೋದ್ಯಾನವೊಂದು ನಿರ್ವಹಣೆ ಕೊರತೆಯಿಂದ ತನ್ನ ಲವಲವಿಕೆಯನ್ನೇ ಕಳೆದುಕೊಂಡು ನಿರ್ಜಿವ ಸ್ಥಿತಿಯಲ್ಲಿದೆ. ಐದು ವರ್ಷದ ಹಿಂದೆ ನಗರದ ಬೀರಮಲೆಯಲ್ಲಿ ಸ್ಥಾಪಿಸಲಾಗಿರುವ ಸಾಲು ಮರ ತಿಮ್ಮಕ್ಕ ಟ್ರೀ ಪಾರ್ಕ್‌ನ ಸ್ಥಿತಿ ಹೇಗಿದೆ ಎಂದು ಉದಯವಾಣಿ ಸುದಿನ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡು ಬಂದ ದೃಶ್ಯ ಇದು. ಬೆಟ್ಟದ ತುತ್ತತುದಿಯಲ್ಲಿ ಇರುವ, ಪುತ್ತೂರಿಗೆ ಮುಕುಟಪ್ರಾಯದಂತಿರಬೇಕಿದ್ದ ವೃಕ್ಷೋದ್ಯಾನದ ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಂತಾಗಿದೆ. ಶುಲ್ಕ ಸಂಗ್ರಹ …

Read More »

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ

ಶಿರಸಿ: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರ ಬರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ ಪ್ರತಿಕ್ರಿಯೆ ನೀಡಿದರು‌. ಅವರು ಸೆ.24ರ ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಧಿವೇಶದಲ್ಲಿ ವಿಧಾನಸಭೆ ಒಳಗಡೆ ಹಾಗೂ ಹೊರಗಡೆಯೂ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವರ ಆರೋಪವನ್ನು ನಾವು ಒಪ್ಪುವುದಿಲ್ಲ. ಬಿಜೆಪಿಯು ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ. ನ್ಯಾಯಾಲಯ ನೀಡಿದ …

Read More »

ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

ಗದಗ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂಗಿಯನ್ನು ಬರ್ಬರವಾಗಿ ಕೊಲೆ ಮಾಡಿದ ಅಣ್ಣನೊಬ್ಬ ನಂತರ ಪೊಲೀಸರಿಗೆ ಶರಣಾದ ಘಟನೆ ಮುಂಡರಗಿ ಪಟ್ಟಣದಲ್ಲಿ ಸೆ.24ರ ಮಂಗಳವಾರ ನಡೆದಿದೆ. ಕಾವ್ಯಾ (32) ಮೃತಪಟ್ಟ ಮಹಿಳೆ. ಈಶಪ್ಪ ಕ್ಯಾದಗಿಹಳ್ಳಿ ಕೊಲೆ ಮಾಡಿದ ಆರೋಪಿ. ಅನ್ಯಕೋಮಿನ ಯುವಕ ಪ್ರಶಾಂತ ಹಡಪದ (37) ಎಂಬವರ ಜೊತೆ ಮದುವೆಯಾಗಿದ್ದ ಯುವತಿ ಕಾವ್ಯಾ, ಆಸ್ತಿಗಾಗಿ ಅಣ್ಣ ಈಶಪ್ಪನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಳು.   ಮನೆಗೆ ಬಂದ ತಂಗಿ ಕಾವ್ಯಾ ಅಣ್ಣ ಈಶಪ್ಪನೊಂದಿಗೆ …

Read More »

ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

ದಾವಣಗೆರೆ: ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ರದ್ಧುಗೊಳಿಸಬೇಕು ಎಂಬ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ನಾವು ಕಾಂಗ್ರೆಸ್‌ನವರು ಸ್ವಚ್ಛವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ …

Read More »

ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ‌ ಖಂಡನೆ; ಮನವಿ ಸಲ್ಲಿಕೆ

ಮುಧೋಳ: ನಗರದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಡೆದ ಪ್ರತಿಭಟನೆಯನ್ನು ಖಂಡಿಸಿ ಹಿಂದೂ ಪರ‌ ಸಂಘಟನೆ ಕಾರ್ಯಕರ್ತರು ಸೆ.24ರ ಮಂಗಳವಾರ ಪ್ರತಿಭಟನೆ ನಡೆಸಿ ಡಿವೈಎಸ್ಪಿ ಶಾಂತವೀರ ಅವರಿಗೆ ಮನವಿ ಸಲ್ಲಿಸಿದರು.   ಜಡಗಣ್ಣ ಬಾಲಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಶಿವಾಜಿ ವೃತ್ತಕ್ಕೆ ಬಂದು ಸಭೆಯಾಗಿ ಮಾರ್ಪಟ್ಟಿತು. ಈ ವೇಳೆ ಮಾತನಾಡಿದ ಹಿಂದೂ ಸಂಘಟನೆ ಮುಖಂಡ ಹನಮಂತ ಮಳಲಿ, …

Read More »