ವಿಜಯಪುರ…ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನಕ್ಕೆ ಭಕ್ತ ಸಾಗರ: ಪಾದಯಾತ್ರೆಯಲ್ಲಿ ದಾನಮ್ಮದೇವಿ ಜೈಕಾರ ಕಾರ್ತಿಕ ಮಾಸದ ಪವಿತ್ರ ಛಟ್ಟಿ ಅಮವಾಸ್ಯೆ ಪ್ರಯುಕ್ತ ಗುಡ್ಡಾಪುರದಲ್ಲಿನ ಅನ್ನದಾಸೋಹಿ ತ್ರಿಕಾಲಪೂಜಿತೆ ದಾನಮ್ಮದೇವಿ ದೇವಾಲಯಕ್ಕೆ ಪಾದಯಾತ್ರೆಯ ಜೋರು ಆರಂಭವಾಗಿದೆ. ನಾಳೆಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಸುಕ್ಷೇತ್ರ ಗುಡ್ಡಾಪುರದಲ್ಲಿ ನಡೆಯಲಿರುವ ಕಾರ್ತಿಕೋತ್ಸವದಲ್ಲಿ ಭಾಗವಹಿಸಲು ಭಕ್ತಸಾಗರವೇ ಸಾಗುತ್ತಿರುವ ದೃಶ್ಯ ಎಲ್ಲೆಡೆ ಕಾಣುತ್ತಿದೆ. ವಿಜಯಪುರ ನಗರದಿಂದಲೇ ಸಾವಿರಾರು ಭಕ್ತರು ದಾನಮ್ಮದೇವಿ ದರ್ಶನಕ್ಕಾಗಿ ನಡಿಗೆಯ ಮಹಾಯಾತ್ರೆಯನ್ನು ಪ್ರಾರಂಭಿಸಿದ್ದು, ಮಧ್ಯಾಹ್ನದ ಬಿಸಿಲಿನಲ್ಲೂ, …
Read More »ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ
ವಿಜಯಪುರ :ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ …
Read More »NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ!
NDPS ಕಾಯ್ದೆ & ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣ ದಾಖಲು; ನಾಲ್ವರು ಆರೋಪಿಗಳ ಬಂಧನ! ಬೆಳಗಾವಿ ನಗರ ಪೊಲೀಸರು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಒಟ್ಟು 4 ಪ್ರಕರಣಗಳನ್ನು ದಾಖಲಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ವಡಗಾಂವದ ಜೈಲ್ ಸ್ಕೂಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥಗಳನ್ನು ಸೇವಿಸಿ ಅಸಹಜವಾಗಿ ವರ್ತಿಸುತ್ತಿದ್ದ ಮೂವರನ್ನು …
Read More »ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ …
Read More »ಬಂಡೀಪುರ ಹಾಗೂ ನಾಗರಹೊಳೆ ಕಾಡಂಚಿನ ಪ್ರದೇಶಗಳಲ್ಲಿ ಸುಮಾರು 20 ಹುಲಿಗಳ ಓಡಾಟ: ಡಿಸಿಎಫ್ ಪರಮೇಶ್ವರ್
ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶಗಳ ಕಾಡಂಚಿನ ಗ್ರಾಮಗಳ ಪ್ರದೇಶದಲ್ಲಿ ಸುಮಾರು 20 ಹುಲಿಗಳು ಓಡಾಟ ಮಾಡುತ್ತಿವೆ ಎಂದು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದ ಗುಂಡ್ಲುಪೇಟೆ, ಹೆಚ್.ಡಿ. ಕೋಟೆ, ಸರಗೂರು ಹಾಗೂ ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ಹಲವು …
Read More »ಕುವೆಂಪು ವಿವಿ ಡಿಜಿಟಲ್ ಮೌಲ್ಯಮಾಪನದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಜಾರಿಗೆ ತಂದಿರುವ ಡಿಜಿಟಲ್ ಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ವಿವಿಯಲ್ಲಿ ಜಾರಿಗೆ ಬಂದಿರುವ ಡಿಜಿಟಲ್ ಮೌಲ್ಯಮಾಪನ ಸರಿಯಾಗಿ ಮಾಡಿಲ್ಲವೆಂದು ಆರೋಪಿಸಿರುವ ನೂರಾರು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಒಮ್ಮೆ ನಡೆದ ಮೌಲ್ಯಮಾಪನದಿಂದ ಫೇಲ್ ಆದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಹಾಕಿದಾಗ ಕೆಲವರು ಫೇಲ್ ಆಗಿದ್ದು, ಮತ್ತೆ ಕೆಲವರು ಪಾಸ್ ಆಗಿದ್ದಾರೆ. ಪರೀಕ್ಷಾಂಗ ವಿವಿಯ ದಿನಗೂಲಿ ನೌಕರರಿಂದ ಉತ್ತರ ಪತ್ರಿಕೆಯ ಬಂಡಲ್ ಅದಲು ಬದಲಾದ ಕಾರಣಕ್ಕೆ ಮೌಲ್ಯ …
Read More »ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು: 29ಕ್ಕೇರಿದ ಸಾವಿನ ಸಂಖ್ಯೆ
ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಇದರಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿದೆ. ಕೃಷ್ಣಮೃಗಗಳ ಸಾವು ಪ್ರಾಣಿಪ್ರಿಯರ ಮನಸ್ಸಿಗೆ ನೋವುಂಟು ಮಾಡಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಮತ್ತೊಂದು ಕೃಷ್ಣಮೃಗ ಇಂದು ಮೃತಪಟ್ಟಿದೆ. ನ.13 ರಂದು ಕಿರು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ …
Read More »6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ
ವಿಜಯಪುರ :6 ಲಕ್ಷ ರೂ ಅಧಿಕ ಮೌಲ್ಯದ 15.100 ಕೆಜಿ ಹಸಿ ಗಾಂಜಾ ಜಪ್ತಿ ಕಬ್ಬು ಬೆಳೆಗಳ ಮಧ್ಯೆ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 15 ಕೆಜಿ 100 ಗ್ರಾಂ ಹಸಿ ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿರುವ ಘಟನೆ ತಿಕೋಟಾ ತಾಲ್ಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ ಶಿವಪ್ಪ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿ, ಅಂದಾಜು 6.ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ …
Read More »ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೈಸೂರು: ದರೋಡೆ ನೆಪದಲ್ಲಿ ಪತ್ನಿಯೇ ತನ್ನ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾದ ಪ್ರಕರಣದಲ್ಲಿ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ. ಡ್ರ್ಯಾಗರ್ ಹಾಗೂ ಲಾಂಗ್ನಿಂದ ಹಲ್ಲೆಗೊಳಗಾದ ರಾಜೇಂದ್ರ ಎಂಬವರು ಇಪ್ಪತ್ತು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತಿಯ ಕೊಲೆಗೆ ಪತ್ನಿಯೇ ದರೋಡೆ ತಂತ್ರ ರೂಪಿಸಿದ್ದಳು ಎಂದು ಮೃತ ವ್ಯಕ್ತಿಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ …
Read More »ಬೆಂಗಳೂರಿನ ಮಹಿಳೆಗೆ ಡಿಜಿಟಲ್ ಅರೆಸ್ಟ್: 31.83 ಕೋಟಿ ರೂ ಕಳೆದುಕೊಂಡ ಟೆಕ್ಕಿ
ಬೆಂಗಳೂರು: ಐಟಿ ಕ್ಷೇತ್ರದ ಹಿರಿಯ ಮಹಿಳಾ ಉದ್ಯೋಗಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿದ ಬರೋಬ್ಬರಿ 31.83 ಕೋಟಿ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠದ ಮೊತ್ತದ ಹಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರಿಗೆ 2024ರ ಸೆಪ್ಟೆಂಬರ್ 15ರಂದು ಡಿಹೆಚ್ಎಲ್ ಕೊರಿಯರ್ ಕಂಪನಿಯ …
Read More »
Laxmi News 24×7