Breaking News

ರಾಜಕೀಯ

ರೈತ ಸಂಘಟನೆಯ ಪದಾಧಿಕಾರಿಗಳಿಂದ ದಿಢೀರ್‌ ಪ್ರತಿಭಟನೆ

ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ಪ್ಲಾಜಾ ಬಳಿ ಸೆ.3ರ ಮಂಗಳವಾರ ರೈತ ಸಂಘಟನೆ ದಿಢೀರ್ ಪ್ರತಿಭಟನೆ‌ ನಡೆಸಿ ರಸ್ತೆ ಮಾಡುವ ಗುತ್ತಿಗೆದಾರ ಹಾಗೂ ಟೋಲ್ ಶುಲ್ಕ ಪಡೆಯುವ ಗುತ್ತಿದಾರರ ವಿರುದ್ದ ಟೋಲ್‌ನ 12 ಗೇಟ್‌ಗಳ ತಡೆದು ಸುಮಾರು ಅರ್ಧ ಗಂಟೆಗೆ ಪ್ರತಿಭಟನೆ ನಡೆಸಿದರು.   ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪಾ ಪೂಜೇರಿ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಒಂದುವರೆ ವರ್ಷ ಕಳೆದರೂ …

Read More »

CM ಕುರ್ಚಿ ಅಲ್ಲಾಡುತ್ತಿದೆ ಎನ್ನುವ ಭಾವನೆ ಕಾಂಗ್ರೆಸ್ ನಲ್ಲಿ ಸೃಷ್ಟಿಯಾಗಿದೆ: ಬೊಮ್ಮಾಯಿ

ಗದಗ: ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ಸೃಷ್ಟಿಯಾಗಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಆಸೆ ಈಗ ಹೊರ ಹೊಮ್ಮುತ್ತಿದೆ. ಇದು ಸಹಜ ಪ್ರಕ್ರಿಯೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಇದೆ ಅಂತ ಹೇಳುತ್ತಲೇ ಒಳಗಡೆಯಿಂದ ದೋಣಿಗೆ ತೂತು ಕೊರೆಯುವುದು ರಾಜಕಾರಣ. ಕರ್ನಾಟಕದ ಇತಿಹಾಸ ನೋಡಿದಾಗ ಕಾಂಗ್ರೆಸ್ …

Read More »

ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು …

Read More »

ದರ್ಶನ್‌ ವಿಚಾರದಲ್ಲಿ ಸರ್ಕಾರದ ಮಧ್ಯಸ್ಥಿಕೆ ಇಲ್ಲ-ಗೃಹ ಸಚಿವ

ತುಮಕೂರು, ಸೆಪ್ಟೆಂಬರ್‌ 03: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಇತ್ತೀಚಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ಸ್ಥಳಾಂತರ ಮಾಡಲಾಗಿದೆ. ಇದೀಗ ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಅಧಿಕಾರಿಗಳು ಸರ್ಜಿಕಲ್ ಚೇರ್ ನೀಡಿರುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿದ್ದು, ಅದು ನಮ್ಮ ಕಾರಾಗೃಹ ಇಲಾಖೆಗೆ ಬಿಟ್ಟಿರುವ ವಿಚಾರ. ನಾವ್ಯಾರು ಹಾಗೂ ರಾಜ್ಯ ಸರ್ಕಾರ ಇದರಲ್ಲಿ ಮಧ್ಯಸ್ಥಿಕೆ ವಹಿಸಲ್ಲ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ …

Read More »

ಚಾರ್ಜ್​ಶೀಟ್​ ಸಲ್ಲಿಕೆ ಹೊತ್ತಲ್ಲೇ ಜೈಲಧಿಕಾರಿಗಳ ಬಳಿ ಈ ಒಂದು ಸೌಲಭ್ಯಕ್ಕೆ ಬೇಡಿಕೆ ಇಟ್ಟ ದರ್ಶನ್!​

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಸಿಗುತ್ತಿದೆ ಎಂಬ ಸುದ್ದಿ ಭಾರಿ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾಗಿರುವ ನಟ ದರ್ಶನ್​, ಜೈಲಧಿಕಾರಿಗಳ ಮುಂದೆ ಹೊಸದೊಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ನಟ ದರ್ಶನ್​ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರುವಾಗ ರೌಡಿ ವಿಲ್ಸನ್​ ನಾಗನ ಜತೆ ಕುಳಿತು, ಸಿಗರೇಟ್​ ಸೇದುತ್ತಾ ಕಾಫಿ ಕುಡಿಯುತ್ತಿರುವ ಫೋಟೋ ಸೋರಿಕೆಯಾಗಿ …

Read More »

ಗಣೇಶ ಹಬ್ಬಕ್ಕೆ 1500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಸೆ. 8 ರಂದು ಬೆಂಗಳೂರಿಗೆ ಬರಲು ವಿವಿಧ ರಾಜ್ಯ ಹಾಗೂ ಅಂತಾರಾಜ್ಯ ಗಳಿಂದಲೂ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.   ಯಾವ್ಯಾವ ಜಿಲ್ಲೆಗಳಿಗೆ ಬಸ್‌ ಸಂಚಾರ: ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ ವಾರಾಂತ್ಯ ಭಾನುವಾರ ರಜೆ …

Read More »

ನಿನ್ನ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮೆರವಣಿಗೆ ಮಾಡಿಸ್ತೀನಿ!,ನಾಲಿಗೆ ಹರಿಬಿಟ್ಟ ಕೈ ಶಾಸಕ ರಾಜು ಕಾಗೆ

ನಿನ್ನ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮೆರವಣಿಗೆ ಮಾಡಿಸ್ತೀನಿ! ಬೆಳಗಾವಿ: ಅಭಿವೃದ್ಧಿ ಕೆಲಸಗಳಿಗಿಂತ ಜಾಸ್ತಿ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ (Controversy Statement) ನಮ್ಮ ರಾಜ್ಯದ ಹಲವು ಶಾಸಕರು (MLA), ಸಚಿವರು (Ministers) ಸುದ್ದಿಯಾಗ್ತಾರೆ. ಈ ಸಾಲಿಗೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ (Kagawada) ಕ್ಷೇತ್ರದ ಕಾಂಗ್ರೆಸ್ ಶಾಸಕ (Congress MLA) ರಾಜು ಕಾಗೆ (Raju Kage) ಸೇರುತ್ತಾರೆ. ಇದೀಗ ಇದೇ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿ, ಮತ್ತೆ ಸುದ್ದಿಯಾಗಿದ್ದಾರೆ. “ನನ್ನ …

Read More »

ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡ ‘ರಾಜ್ಯ ಸರ್ಕಾರ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರವು ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂಬುದಾಗಿ ಸತ್ಯವನ್ನು ಒಪ್ಪಿಕೊಂಡಿದೆ. ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶದಲ್ಲಿ ಈ ಸತ್ಯ ಬಯಲಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಾಜ್ಯ ಸರ್ಕಾರವೇ ಸಿಎಂ ಪತ್ನಿಗೆ …

Read More »

ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್

ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ.   ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ …

Read More »

ಇನ್ನೆರಡು ದಿನದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ; ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಇನ್ನೆರಡು ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಟ ದರ್ಶನ್ ತೂಗುದೀಪ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಕುರಿತಂತೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು. ತನಿಖೆ ಮುಕ್ತಾಯವಾಗಿದ್ದು, ಕೆಲವು ವರದಿಗಳು ಬರಬೇಕಿದೆ ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ …

Read More »